ಕಡಿಮೆ ಬೆಲೆಗೆ ಪ್ರತಿದಿನ 2GB ಡೇಟಾ ಬೇಕಿದ್ದರೆ, ಈ ಪ್ಲ್ಯಾನ್ ಉತ್ತಮ ಆಯ್ಕೆ!
ರಿಲಾಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್ ಹಾಗೂ ವಿ ಟೆಲಿಕಾಂ (ವೊಡಾಪೋನ್- ಐಡಿಯಾ) ಟೆಲಿಕಾಂಗಳು ಚಂದಾದಾರರನ್ನು ಆಕರ್ಷಿಸಲು ಅತ್ಯುತ್ತಮ ಡೇಟಾ ಯೋಜನೆಗಳನ್ನು ಪರಿಚಯಿಸಿವೆ. ಅವುಗಳಲ್ಲಿ ಬಹುತೇಕ ಯೋಜನೆಗಳು ದೈನಂದಿನ ಡೇಟಾ ಸೌಲಭ್ಯವನ್ನು ಪಡೆದಿರುವ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನವನ್ನು ಹೊಂದಿವೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳನ್ನು ನೀಡಿವೆ.

ರೀಚಾರ್ಜ್ ಮಾಡಿಸುವ ಗ್ರಾಹಕರು ದೈನಂದಿನ ಡೇಟಾ ಹಾಗೂ ದೀರ್ಘಾವಧಿ ವ್ಯಾಲಿಡಿಟಿ ಯೋಜನೆಗಳಿಗೆ ಹೆಚ್ಚು ಮನ್ಸಸ್ಸು ಮಾಡುತ್ತಾರೆ. ಈ ದೆಸೆಯಿಂದ ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ಪ್ರತಿದಿನ 2GB ಮತ್ತು 3GB ಡೇಟಾ ಸೌಲಭ್ಯದ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆಯನ್ನು ಹೊಂದಿವೆ. ಆದರೆ ಅನೇಕ ಚಂದಾದಾರರು ಪ್ರತಿದಿನ 2GB ಡೇಟಾ ರೀಚಾರ್ಜ್ ಯೋಜನೆಗಳನ್ನು ರೀಚಾರ್ಜ್ ಮಾಡಲು ಮುಂದಾಗುತ್ತಾರೆ. ಅಧಿಕ ಡೇಟಾ ಅಗತ್ಯ ಇರುವವರು 3GB ದೈನಂದಿನ ಡೇಟಾ ಪ್ಲ್ಯಾನ್ ಲೈಕ್ ಮಾಡುತ್ತಾರೆ. ಹಾಗಾದರೇ ಕಡಿಮೆ ಬೆಲೆಗೆ ಪ್ರತಿದಿನ 2GB ಡೇಟಾ ಹಾಗೂ ಬೆಸ್ಟ್ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಏರ್‌ಟೆಲ್ 298ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 298ರೂ. ಪ್ರೀಪೇಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.

ವಿ 299ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.
ಜಿಯೋ 249ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.

ವಿ 449ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ 449ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.
ಜಿಯೋ 599ರೂ. ಪ್ರೀಪೇಯ್ಡ್ ಪ್ಲ್ಯಾನ್
ಜಿಯೋ ಟೆಲಿಕಾಂ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 1.2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.
ಏರ್‌ಟೆಲ್ 449ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್ ಟೆಲಿಕಾಂ 449ರೂ. ಪ್ರೀಪೇಯ್ಡ್ ಪ್ರೀಪೇಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.


Click it and Unblock the Notifications








