ನೀವು ಅಧಿಕ ಡೇಟಾ ಪ್ರಿಯರೇ?..ಹಾಗಿದ್ರೆ ಈ ಪ್ಲ್ಯಾನ್ ರೀಚಾರ್ಜ್ ಮಾಡಿ!
ಟೆಲಿಕಾಂ ವಲಯದಲ್ಲಿ ಜಿಯೋ ಸೇರಿದಂತೆ ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳ ನಡುವೆ ಪೈಪೋಟಿ ಇದೆ. ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಟೆಲಿಕಾಂ ಕಂಪನಿ ಗಳು ಬೊಂಬಾಟ್ ರೀಚಾರ್ಜ್ ಯೋಜನೆ ಗಳನ್ನು ಪರಿಚಯಿಸುತ್ತ ಮುನ್ನಡೆದಿವೆ. ಆ ಪೈಕಿ ವಿ ಟೆಲಿಕಾಂ, ಏರ್‌ಟೆಕ್ ಮತ್ತು ಜಿಯೋ ನಡುವೆ ಜಿದ್ದು ಇದೆ. ಮೂರು ಟೆಲಿಕಾಂಗಳು ಆಕರ್ಷಕ ಡೇಟಾ ಪ್ಲ್ಯಾನ್ ಹೊಂದಿವೆ. ಅವುಗಳಲ್ಲಿ ಕೆಲವು ಪ್ಲ್ಯಾನ್ ಗ್ರಾಹಕರಿಗೆ ಬೆಸ್ಟ್ ಎನಿಸಿವೆ. ಆ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್ 558ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್ ಪ್ಯಾನ್‌ಗಳಲ್ಲಿ ಒಂದಾಗಿರುವ 558ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ವಿ ಟೆಲಿಕಾಂ 601ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 801ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.

ಜಿಯೋ 999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ರಿಲಾಯನ್ಸ್ ಜಿಯೋ 999ರೂ. ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಜೊತೆಗೆ ಉಚಿತ ಎಸ್‌ಎಮ್‌ಎಸ್ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

ವಿ ಟೆಲಿಕಾಂ 701ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 701ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿ ಯಾಗಿ 32 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 449ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳ ಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ.

ವಿ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 699ರೂ. ಪ್ಲ್ಯಾನ್ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್ ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ.

ವಿ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯ ವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ಜಿಯೋಕ್ಲೌಡ್, ಜಿಯೋ ಸೆಕ್ಯುರಿಟಿ, ಜಿಯೋ ಸಿನಿಮ, ಜಿಯೋನ್ಯೂಸ್ ಮತ್ತು ಜಿಯೋಟಿವಿ ಸೇರಿದಂತೆ ಜಿಯೋ ಅಪ್ಲಿಕೇಶನ್‌ಗಳ ಹೆಚ್ಚುವರಿ ಪ್ರಯೋಜನ ವನ್ನು ಹೊಂದಿವೆ.


Click it and Unblock the Notifications








