Home
ಸುದ್ದಿಜಾಲ

ಸದ್ಯ ಜಿಯೋ ಗ್ರಾಹಕರಿಗೆ ಈ ಪ್ರೀಪೇಯ್ಡ್‌ ಪ್ಲ್ಯಾನ್‌ಗಳೇ ಬೆಸ್ಟ್!

ದೇಶದ ಟೆಲಿಕಾಂ ವಲಯದಲ್ಲಿ ಜಿಯೋ ಮುಂಚೂಣಿಯಲ್ಲಿ ಕಕಾಣಿಸಿಕೊಂಡಿದ್ದ, ಅಗ್ಗದ ಡೇಟಾ ಪರಿಚಯಿಸಿ ಗ್ರಾಹಕರ ಮೆಚ್ಚುಗೆ ಗಳಿಸಿದೆ. ಆದರೆ ಟೆಲಿಕಾಂ ವಲಯದಲ್ಲಿನ ಇತ್ತೀಚಿನ ಬೆಳವಣಿಗೆಯಿಂದಾಗಿ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಬೆಲೆಯಲ್ಲಿ ಏರಿಕೆ ಆಗಿದ್ದು, ಗ್ರಾಹಕರಿಗೆ ಹೊರೆ ಅನಿಸಿದೆ. ಹಾಗೂ ಚಂದಾದಾರರನ್ನು ಕಳೆದುಕೊಳ್ಳುತ್ತೆ ಎನ್ನುವ ಆತಂಕ ಟೆಲಿಕಾಂ ಸಂಸ್ಥೆಗಳಲ್ಲಿ ಮೂಡಿದೆ. ಈ ನಿಟ್ಟಿನಲ್ಲಿ ಜಿಯೋ ಪ್ರತಿದಿನ ಡೇಟಾ ಸೌಲಭ್ಯದ ಪ್ಲ್ಯಾನ್‌ಗಳಿಗೆ ಹೆಚ್ಚಿನ ಗಮನ ನೀಡಿದೆ.

ಜಿಯೋ ಟೆಲಿಕಾಂ

ಹೌದು, ಜಿಯೋ ಟೆಲಿಕಾಂ ಈಗಾಗಲೇ ಹಲವು ಹೊಸ ಡೇಟಾ ಪ್ರೀಪೇಯ್ಡ್‌ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಅಧಿಕ ಡೇಟಾ ನೀಡುವ ಪ್ರೀಪೇಯ್ಡ್ ಪ್ಲ್ಯಾನ್‌ಗಳಿಗೆನೇ ಹೆಚ್ಚು ಮನ್ನಣೆ ಇದೆ. ಗ್ರಾಹಕರು ಡೇಟಾ ಜೊತೆಗೆ ವ್ಯಾಲಿಡಿಟಿ ಮತ್ತು ವಾಯಿಸ್‌ ಕರೆ ಸೌಲಭ್ಯಗಳನ್ನು ಅವಲೋಕಿಸುತ್ತಾರೆ. ಜಿಯೋ ಗ್ರಾಹಕರಿಗೆ ಅಧಿಕ ಡೇಟಾ ಮತ್ತು ಉತ್ತಮ ವ್ಯಾಲಿಡಿಟಿ ಪ್ಲ್ಯಾನ್‌ ನೀಡಿದೆ. ಪ್ರತಿದಿನ ಅಧಿಕ ಡೇಟಾ ನೀಡುವ ಜಿಯೋದ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ. ಮುಂದೆ ಓದಿರಿ.

ಜಿಯೋ 249ರೂ. ಪ್ಲ್ಯಾನ್

ಜಿಯೋ 249ರೂ. ಪ್ಲ್ಯಾನ್

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ ಉಚಿತ 1,000 ನಿಮಿಷಗಳ FUP ಮಿತಿ ಇದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ.

ಜಿಯೋ 444ರೂ. ಪ್ಲ್ಯಾನ್

ಜಿಯೋ 444ರೂ. ಪ್ಲ್ಯಾನ್

ಜಿಯೋದ ಈ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ ಉಚಿತ 2,000 ನಿಮಿಷಗಳ FUP ಮಿತಿ ಇದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ ಪೂರ್ಣ ಅವಧಿಗೆ ಒಟ್ಟು 2000ಎಸ್ಎಮ್ಎಸ್‌ಗಳ ಪ್ರಯೋಜನ.

ಜಿಯೋ 599ರೂ. ಪ್ಲ್ಯಾನ್

ಜಿಯೋ 599ರೂ. ಪ್ಲ್ಯಾನ್

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 1.2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.

Best Mobiles in India

English summary
Jio currently has three plans that are offering 2GB data per day along with other benefits. The plans are Rs 249, Rs 555 and Rs 444.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+