Home
ಸುದ್ದಿಜಾಲ

ಬಜೆಟ್ ದರಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯದ ಜಿಯೋ ರೀಚಾರ್ಜ್ ಆಯ್ಕೆಗಳು!

ಸದ್ಯ ಬಳಕೆದಾರರು ಪ್ರತದಿನ ಡೇಟಾ ಸೌಲಭ್ಯ ಪಡೆದಿರುವ ಪ್ಲ್ಯಾನ್‌ಗಳನ್ನು ರೀಚಾರ್ಜ್ ಮಾಡಲು ಬಯಸುತ್ತಾರೆ. ಈ ನಿಟ್ಟಿನಲ್ಲಿ ಖಾಸಗಿ ಟೆಲಿಕಾಂಗಳು ಆಕರ್ಷಕ ಡೇಟಾ ಯೋಜನೆಗಳನ್ನು ಪರಿಚಯಿಸಿವೆ. ಈ ಪೈಕಿ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ರಿಲಾಯನ್ಸ್‌ ಜಿಯೋ ಟೆಲಿಕಾಂ ಸಹ ಭರ್ಜರಿ ಡೈಲಿ ಡೇಟಾ ಹಾಗೂ ವ್ಯಾಲಿಡಿಟಿ ಯೋಜನೆಗಳ ಆಯ್ಕೆ ಹೊಂದಿದೆ.

ಟೆಲಿಕಾಂ

ಹೌದು, ಜಿಯೋ ಟೆಲಿಕಾಂ ಪ್ರತಿದಿನ 2GB ಹಾಗೂ 1.5GB ಡೇಟಾ ಪ್ರಯೋಜನಗಳ ರೀಚಾರ್ಜ್ ಆಯ್ಕೆಗಳನ್ನು ಹೊಂದಿದೆ. ಈ ಯೋಜನೆಗಳು ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆ, ಡೈಲಿ ಎಸ್‌ಎಮ್‌ಎಸ್‌ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯಗಳನ್ನು ಪಡೆದುಕೊಂಡಿವೆ. ಅವುಗಳಲ್ಲಿ ಬಹುತೇಕರು ಪ್ರತಿದಿನ 2GB ಪ್ಲ್ಯಾನ್‌ ರೀಚಾರ್ಜ್ ಮಾಡಿಸಿಕೊಂಡರೇ, ಮತ್ತೆ ಕೆಲವರಿಗೆ 1.5GB ಡೇಟಾ ಪ್ಲ್ಯಾನ್‌ಗಳೇ ಬೆಸ್ಟ್‌ ಆಯ್ಕೆ ಆಗಿರುತ್ತವೆ. ಹಾಗಾದರೇ ಜಿಯೋ ಟೆಲಿಕಾಂನ ಪ್ರತಿದಿನ 1.5GB ಡೇಟಾ ಸೌಲಭ್ಯದ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಪ್ರಯೋಜನಗಳೆನು ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಜಿಯೋ 199ರೂ. ರೀಚಾರ್ಜ್

ಜಿಯೋ 199ರೂ. ರೀಚಾರ್ಜ್

ಜಿಯೋ ಟೆಲಿಕಾಂನ 199ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಅನಿಯಮಿತ ಕರೆಗಳ ಸೌಲಭ್ಯ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ಕರೆಗಳಿಗೆ 1000 ನಿಮಿಷದ ಕರೆ ಮಿತಿ ಇದೆ. ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಸಿಗುತ್ತವೆ.

ಜಿಯೋ 399ರೂ. ರೀಚಾರ್ಜ್

ಜಿಯೋ 399ರೂ. ರೀಚಾರ್ಜ್

ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಇತರೆ ನೆಟವರ್ಕ ಕರೆಗಳಿಗೆ 2000 ಉಚಿತ ನಿಮಿಷಗಳ ಮಿತಿ ಹೊಂದಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋ 555ರೂ. ರೀಚಾರ್ಜ್

ಜಿಯೋ 555ರೂ. ರೀಚಾರ್ಜ್

ಜಿಯೋ 555ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಆಲ್‌-ಇನ್‌-ಒನ್‌ ಕೊಡುಗೆಯ ಪ್ಲ್ಯಾನ್ ಆಗಿದ್ದು, ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಇನ್ನು ಇತರೆ ನೆಟವರ್ಕ್ 3000 ನಿಮಿಷಗಳ ವಾಯಿಸ್‌ ಕರೆಯ ಮಿತಿಯನ್ನು ಒಳಗೊಂಡಿದೆ.

ಜಿಯೋ 777ರೂ. ರೀಚಾರ್ಜ್

ಜಿಯೋ 777ರೂ. ರೀಚಾರ್ಜ್

ಜಿಯೋ 777ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಇನ್ನು ಇತರೆ ನೆಟವರ್ಕ್ 3000 ನಿಮಿಷಗಳ ವಾಯಿಸ್‌ ಕರೆಯ ಮಿತಿಯನ್ನು ಒಳಗೊಂಡಿದೆ.

ಜಿಯೋ 2121ರೂ. ರೀಚಾರ್ಜ್

ಜಿಯೋ 2121ರೂ. ರೀಚಾರ್ಜ್

ಜಿಯೋ 2121ರೂ.ಪ್ಲ್ಯಾನ್ ಪ್ರತಿದಿನ 1.5GB ಡೇಟಾ ಪ್ರಯೋಜನ ಒದಗಿಸುತ್ತದೆ. ಇದರೊಂದಿಗೆ ಅನಿಯಮಿತ ಜಿಯೋ ಟು ಜಿಯೋ ವಾಯಿಸ್‌ ಕರೆಗಳು ಲಭ್ಯವಾಗಲಿದ್ದು, ಜಿಯೋದಿಂದ ಇತರೆ ಟೆಲಿಕಾಂ ನೆಟವರ್ಕ್‌ಗಳಿಗೆ ಒಟ್ಟು 12000 ನಿಮಿಷಗಳ ಉಚಿತ ವಾಯಿಸ್ ಕರೆ ಸೌಲಭ್ಯ ದೊರೆಯುತ್ತದೆ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನವನ್ನು ಒಳಗೊಂಡಿದ್ದು, ಇನ್ನು ಈ ಪ್ಲ್ಯಾನ್‌ 336 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ

Best Mobiles in India

English summary
The 1.5GB daily data plans from Reliance Jio are Rs 199, Rs 399, Rs 555, Rs 777 and Rs 2,121.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+