ಆಗಸ್ಟ್‌ ತಿಂಗಳಿನಲ್ಲಿ ಬೆಲೆ ಕಡಿತವನ್ನು ಪಡೆದ ಪ್ರಮುಖ ಸ್ಮಾರ್ಟ್‌ಫೋನ್‌ಗಳು!

|

ಭಾರತದ ಮೊಬೈಲ್‌ ಮಾರುಕಟ್ಟೆಯಲ್ಲಿ ವಿವಿಧ ಬ್ರ್ಯಾಂಡ್‌ಗಳ ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಇವುಗಳಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳು ಆಗಸ್ಟ್‌ ತಿಂಗಳಿನಲ್ಲಿ ಬೆಲೆ ಕಡಿತವನ್ನು ಪಡೆದುಕೊಂಡಿವೆ. ಇದರಿಂದ ಜನಪ್ರಿಯ ಬ್ರ್ಯಾಂಡ್‌ ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಇಳಿಕೆಯಾಗಿದೆ. ಇದರಲ್ಲಿ ಸ್ಯಾಮ್‌ಸಂಗ್‌, ಒನ್‌ಪ್ಲಸ್‌, ಒಪ್ಪೋ, ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಇಳಿಕೆ ಮಾಡಲಾಗಿದೆ. ಅದರಲ್ಲೂ ಹಬ್ಬದ ಸೀಸನ್‌ಗೂ ಮುಂಚಿತವಾಗಿಯೇ ಬೆಲೆ ಕಡಿತ ಮಾಡಿರುವುದರಿಂದ ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ಇದು ಬೆಸ್ಟ್‌ ಟೈಂ ಆಗಿದೆ.

ಸ್ಮಾರ್ಟ್‌ಫೋನ್‌ಗಳು

ಹೌದು, ಭಾರತದಲ್ಲಿ ಹಬ್ಬದ ಸೀಸನ್‌ಗೂ ಮೊದಲೇ ಅನೇಕ ಸ್ಮಾರ್ಟ್‌ಫೋನ್‌ಗಳು ಬೆಲೆ ಕಡಿತವನ್ನು ಪಡೆದುಕೊಂಡಿವೆ. ಇದರಿಂದ ಗೌರಿ ಗಣೇಶ ಹಬ್ಬದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ಇದು ಒಳ್ಳೆಯ ಅವಕಾಶ ಸಿಕ್ಕಂತಾಗಿದೆ. ಹಾಗಾದ್ರೆ ಆಗಸ್ಟ್‌ ತಿಂಗಳಿನಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳು ಬೆಲೆ ಕಡಿತವನ್ನು ಪಡೆದುಕೊಂಡಿವೆ? ಇದರಲ್ಲಿ ನೀವು ಖರೀದಿಸಬಹುದಾದ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G

ಒನ್‌ಪ್ಲಸ್‌ ಕಂಪೆನಿಯ ಜನಪ್ರಿಯ ಸ್ಮಾರ್ಟ್‌ಫೋನ್‌ ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಈ ತಿಂಗಳು ಬೆಲೆ ಕಡಿತವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನಿನ ಬೆಲೆಯಲ್ಲಿ 1,000ರೂ. ಗಳಷ್ಟು ಕಡಿತಗೊಳಿಸಲಾಗಿದೆ. ಇದರಿಂದ ಈ ಸ್ಮಾರ್ಟ್‌ಫೋನಿನ 6GB RAM ಮಾದರಿಯನ್ನು 18,999ರೂ. ಬೆಲೆಗೆ ಖರೀದಿಸಬಹುದು. ಆದರೆ 8GB RAM ರೂಪಾಂತರವನ್ನು ನೀವು 20,999ರೂ. ಬೆಲೆಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F42

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F42

ಆಗಸ್ಟ್‌ ತಿಂಗಳಿನಲ್ಲಿ ಬೆಲೆ ಕಡಿತವನ್ನು ಕಂಡ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F42 ಪ್ರಮುಖ ಫೋನ್‌ ಆಗಿದೆ. ಭಾರತದಲ್ಲಿ ಈ ಸ್ಮಾರ್ಟ್‌ಫೊನಿನ ಬೆಲೆಯನ್ನು 3,000ರೂ. ಗಳಷ್ಟು ಕಡಿತಗೊಳಿಸಿದೆ. ಆದರಿಂದ ಈ ಸ್ಮಾರ್ಟ್‌ಫೋನಿನ 6GB RAM ರೂಪಾಂತರದ ಆಯ್ಕೆಯನ್ನು ನೀವು ಕೇವಲ 17,999ರೂ. ಬೆಲೆಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A53 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A53 5G

ಇನ್ನು ಸ್ಯಾಮ್‌ಸಂಗ್‌ ಕಂಪೆನಿಯ ಗ್ಯಾಲಕ್ಸಿ A53 5G ಕೂಡ ಬೆಲೆ ಕಡಿತವನ್ನು ಪಡೆದುಕೊಂಡ ಪ್ರಮುಖ ಸ್ಮಾರ್ಟ್‌ಫೋನ್‌ ಎನಿಸಿಕೊಂಡಿದೆ. ಬೆಲೆ ಕಡಿತದ ಬಳಿಕ 6GB + 128GB ವೇರಿಯಂಟ್‌ ಫೋನ್ 31,499ರೂ. ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅದೇ ರೀತಿ 8GB + 128GB ಸ್ಟೋರೇಜ್‌ ವೇರಿಯಂಟ್‌ 32,999ರೂ. ಗಳ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.

ವಿವೋ V23e 5G

ವಿವೋ V23e 5G

ವಿವೋ V23e 5G ಸ್ಮಾರ್ಟ್‌ಫೋನ್‌ ಕೂಡ ಇತ್ತೀಚಿನ ದಿನಗಳಲ್ಲಿ 1,000ರೂ. ವೆರೆಗೆ ಬೆಲೆ ಕಡಿತವನ್ನು ಪಡೆದಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ ಅನ್ನು ನೀವು 24,990ರೂ. ಬೆಲೆಗೆ ಖರೀದಿಸುವುದಕ್ಕೆ ಸಾಧ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 810 ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ ಆಧಾರಿತ ಫನ್‌ಟಚ್‌ OS ನಲ್ಲಿ ಕಾರ್ಯನಿರ್ವಹಿಸುತ್ತದೆ.

ವಿವೋ Y21T

ವಿವೋ Y21T

ಇತ್ತೀಚಿಗೆ ವಿವೋ Y21T ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಕೂಡ 1,000ರೂ. ಕಡಿತಗೊಳಿಸಲಾಗಿದೆ. ಇದರಿಂದ ಈ ಸ್ಮಾರ್ಟ್‌ಫೊನಿನ 4GB RAM+128GB ಸ್ಟೋರೇಜ್ ಮಾದರಿಯನ್ನು ನೀವು ಕೇವಲ 15,499ರೂ. ಬೆಲೆಗೆ ಖರೀದಿಸಬಹುದು. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಮಿಡ್ನೈಟ್ ಬ್ಲೂ ಮತ್ತು ಪರ್ಲ್ ವೈಟ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಒಪ್ಪೋ ರೆನೋ 7ಪ್ರೊ

ಒಪ್ಪೋ ರೆನೋ 7ಪ್ರೊ

ಒಪ್ಪೋ ಕಂಪೆನಿಯ ಒಪ್ಪೋ ರೆನೋ 7 ಪ್ರೊ ಸ್ಮಾರ್ಟ್‌ಫೋನ್‌ ಕೂಡ 3,000ರೂ ಬೆಲೆ ಕಡಿತವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ ಇಳಿಕೆಯ ನಂತರ ಕೇವಲ 36,999ರೂ. ಬೆಲೆಗೆ ಲಭ್ಯವಾಗುತ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1200-ಮ್ಯಾಕ್ಸ್ ಆಕ್ಟಾ-ಕೋರ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

Best Mobiles in India

English summary
These smartphones received a massive price cut in August

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X