Home
ಸುದ್ದಿಜಾಲ

ಸದ್ಯ ಟ್ರೆಂಡ್‌ನಲ್ಲಿ ಇರುವ ಟಾಪ್‌ ಸ್ಮಾರ್ಟ್‌ಫೋನ್‌ಗಳು ಇವು!

ಮಾರುಕಟ್ಟೆಯಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡುತ್ತಿವೆ. ಅವುಗಳಲ್ಲಿ ಕೆಲವು ಫೋನ್‌ಗಳು ಗಮನ ಸೆಳೆದರೂ, ಗ್ರಾಹಕರು ಮಾತ್ರ ಅವರ ಅಗತ್ಯಕ್ಕೆ ಅನುಗುಣವಾಗಿ ಫೋನ್‌ ಆಯ್ಕೆ ಮಾಡಿಕೊಳ್ಳುತ್ತಾರೆ. ಬಿಡುಗಡೆ ಆಗುವ ಮೊಬೈಲ್‌ಗಳಲ್ಲಿ ಕೆಲವೇ ಕೆಲವು ಮಾತ್ರ ಗ್ರಾಹಕರನ್ನು ಸೆಳೆಯಲು ಸಫಲ ಆಗುತ್ತವೆ. ಹಾಗಾದರೆ ಸದ್ಯ ಮಾರುಕಟ್ಟೆಯಲ್ಲಿ ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿರುವ ಮೊಬೈಲ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಮಾಹಿತಿ : ಈ ಮೊಬೈಲ್‌ 6.6 ಇಂಚಿನ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೊಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1080 6nm ಪ್ರೊಸೆಸರ್ ಅನ್ನು ಒಳಗೊಂಡಿದ್ದು, 8GB + 128GB ಮತ್ತು 8GB + 256GB ಸ್ಟೋರೇಜ್‌ ಆಯ್ಕೆ ಪಡೆದಿದೆ. ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಸದ್ಯ ಟ್ರೆಂಡ್‌ನಲ್ಲಿ ಇರುವ ಟಾಪ್‌ ಸ್ಮಾರ್ಟ್‌ಫೋನ್‌ಗಳು ಇವು!

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೋನ್‌ : ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೋನ್‌ QHD+ ಡೈಮಂಡ್‌ ಅಮೋಲೆಡ್‌ ಜೊತೆಗೆ 6.8 ಇಂಚಿನ ಡಿಸ್‌ಪ್ಲೇ ಅನ್ನು ಹೊಂದಿದ್ದು, ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 2 ಪ್ರೊಸೆಸರ್‌ ಅನ್ನು ಪಡೆದಿದೆ. ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 200 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ. ಇನ್ನು ಈ ಫೋನಿನ ಬ್ಯಾಟರಿ 5,000mAh ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ.

ರೆಡ್ಮಿ ನೋಟ್‌ 12 ಪ್ರೊ 5G ಮೊಬೈಲ್‌ ಮಾಹಿತಿ : ಈ ಮೊಬೈಲ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಪಡೆದಿದೆ. ಇದರ ಜೊತೆಗೆ ಮೀಡಿಯಾ ಟೆಕ್‌ ಡೈಮೆನ್ಸಿಟಿ 1080SoC ಪ್ರೊಸೆಸರ್‌ ಹೊಂದಿದೆ. ಇದು 12GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಪಡೆದಿದೆ. ಈ ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೋನಿ IMX766 ಸೆನ್ಸಾರ್‌ ಹೊಂದಿದ್ದು, 5,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಇದು 67W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್ ಪಡೆದಿದೆ.

ಐಫೋನ್ 14 ಪ್ರೊ ಮ್ಯಾಕ್ಸ್ ಫೋನ್‌ ಫೀಚರ್ಸ್‌ : ಈ ದಿಗ್ಗಜ ಫೋನ್‌ 6.7 ಇಂಚಿನ ರೆಟಿನಾ XDR ಡಿಸ್‌ಪ್ಲೇ ಪಡೆದಿದ್ದು, ಇದು ಸಹ ಆಲ್ವೇಸ್‌ ಆನ್ ಕಾರ್ಯವನ್ನು ಒಳಗೊಂಡಿದೆ. ಇದು ಹಿಂಬದಿಯ ಕ್ಯಾಮೆರಾ ವ್ಯವಸ್ಥೆಯು 48 ಮೆಗಾ ಪಿಕ್ಸೆಲ್ ಕ್ವಾಡ್ ಪಿಕ್ಸೆಲ್ ಕ್ಯಾಮೆರಾವನ್ನು 65 ಪ್ರತಿಶತ ದೊಡ್ಡ ಸೆನ್ಸಾರ್‌ ಅನ್ನು ಒಳಗೊಂಡಿದೆ. ಅಲ್ಲದೇ ಈ ಐಫೋನ್‌ A16 ಬಯೋನಿಕ್ ಚಿಪ್ ಪ್ರೊಸೆಸರ್ ಪವರ್ ಪಡೆದುಕೊಂಡಿದೆ.

ಟೆಕ್ನೋ ಸ್ಪಾರ್ಕ್‌ 10 5G ಫೀಚರ್ಸ್‌ ಮಾಹಿತಿ : ಈ ಫೋನ್ 6.6 ಇಂಚಿನ HD+ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಡಿಸ್‌ಪ್ಲೇ 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 7nm ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ ಪವರ್‌ ನಲ್ಲಿ ಕೆಲಸ ಮಾಡುತ್ತದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಒಳಗೊಂಡಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಇದರ ಜತೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G ಮೊಬೈಲ್‌ ಮಾಹಿತಿ : ಈ ಮೊಬೈಲ್‌ 6.4 ಇಂಚಿನ ಅಮೋಲೆಡ್‌ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಇದರ ಜೊತೆಗೆ ಎಕ್ಸಿನೋಸ್ 1380SoC ಪ್ರೊಸೆಸರ್‌ ಮೂಲಕ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಆಧಾರಿತ ಒನ್‌ UI 5.1 ಸಪೋರ್ಟ್‌ ಪಡೆದಿದೆ. ಹಾಗೆಯೇ ಟ್ರಿಪಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಪ್ರಾಥಮಿಕ ಕ್ಯಾಮೆರಾ 50ಎಂಪಿ ಆಗಿದ್ದು, 12ಎಂಪಿ ಅಲ್ಟ್ರಾ ವೈಡ್ ಲೆನ್ಸ್ ಆಯ್ಕೆ ಇದೆ. ಈ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ.

Best Mobiles in India

English summary
These smartphones Trending in the market Aug 2023. all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+