Just In
Don't Miss
- Sports
ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ರೋಹಿತ್ ಶರ್ಮಾ ಕೋವಿಡ್ ವರದಿ ನೆಗೆಟಿವ್; ಟಿ20 ಸರಣಿಗೆ ರೆಡಿ
- Movies
ಗುಬ್ಬಿ ವೀರಣ್ಣ ಪುತ್ರಿ, ಹಿರಿಯ ನಟಿ ಹೇಮಲತಾ ನಿಧನ
- News
ISWA: ಆಸ್ಟ್ರೇಲಿಯಾದ ಅನಿವಾಸಿ ಭಾರತೀಯರೊಂದಿಗೆ ಸಚಿವ ಪ್ರಲ್ಹಾದ್ ಜೋಶಿ ನಿಯೋಗ ಭೇಟಿ
- Finance
Gold Rate Today: ಚಿನ್ನ ಸ್ಥಿರ: ಪ್ರಮುಖ ನಗರಗಳಲ್ಲಿ ಜು.3ರಂದು ಬೆಲೆ ಎಷ್ಟು
- Automobiles
ಜೂನ್ ತಿಂಗಳಿನಲ್ಲಿ 4.84 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್
- Lifestyle
Weekly Horoscope: ಜುಲೈ 3ರಿಂದ ಜುಲೈ 9ರ ವಾರ ಭವಿಷ್ಯ: ಮೇಷ, ಮಿಥುನ, ಮಕರ, ಕುಂಭ ರಾಶಿಯ ವ್ಯಾಪಾರಸ್ಥರು ಆರ್ಥಿಕ ಲಾಭ ಪಡೆಯಬಹುದು
- Education
JNV Result 2022 : 6ನೇ ತರಗತಿ ತಾತ್ಕಾಲಿಕ ಆಯ್ಕೆ ಪಟ್ಟಿ ಜು.10ರಂದು ಪ್ರಕಟ ಸಾಧ್ಯತೆ
- Travel
ಕೆಮ್ಮಣ್ಣು ಗುಂಡಿ - ಒಂದು ಮನಮೋಹಕ ತಾಣ!
ಭಾರತದಲ್ಲಿ ಒನ್‌ಪ್ಲಸ್ 9RT ಲಾಂಚ್ ಬಳಿಕ, ಗ್ರಾಹಕರಿಗೆ ಕಾದಿದೆ ಅಚ್ಚರಿ!
ಪ್ರಮುಖ ಮೊಬೈಲ್ ಬ್ರ್ಯಾಂಡ್‌ಗಳ ಪೈಕಿ ಒನ್‌ಪ್ಲಸ್ ಸಹ ಒಂದಾಗಿದೆ. ಒನ್‌ಪ್ಲಸ್ ಸಂಸ್ಥೆಯು ಹಲವು ಶ್ರೇಣಿಯಗಳಲ್ಲಿ ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಸದ್ಯ ಒನ್‌ಪ್ಲಸ್ ನೂತನವಾಗಿ ಒನ್‌ಪ್ಲಸ್ 9RT ಮತ್ತು ಒನ್‌ಪ್ಲಸ್ ಬಡ್ಸ್ Z2 ಡಿವೈಸ್‌ಗಳನ್ನು ಲಾಂಚ್ ಮಾಡಲಿದೆ. ಈ ಡಿವೈಸ್‌ಗಳ ಬಿಡುಗಡೆ ಬೆನ್ನಲ್ಲೇ ಒನ್‌ಪ್ಲಸ್ ಕಂಪನಿಯು ತನ್ನ ಮೂರು ಜನಪ್ರಿಯ ಸ್ಮಾರ್ಟ್‌ಫೋನ್ ಮಾಡೆಲ್‌ಗಳನ್ನು ಸ್ಥಗಿತ ಮಾಡಲಿದೆ ಎಂದು ಹೇಳಲಾಗಿದೆ.

ಹೌದು, ಒನ್‌ಪ್ಲಸ್ ಸಂಸ್ಥೆಯ ಬಹುನಿರೀಕ್ಷಿತ ಒನ್‌ಪ್ಲಸ್ 9RT ಸ್ಮಾರ್ಟ್‌ಫೋನ್ ಭಾರತದಲ್ಲಿ ಲಾಂಚ್ ಆಗುವ ಬಗ್ಗೆ, ಫೀಚರ್ಸ್ ಬಗ್ಗೆ ಈಗಾಗಲೇ ಕೆಲವು ಮಾಹಿತಿಗಳು ಲೀಕ್ ಆಗಿವೆ. ಇದೀಗ, ಒನ್‌ಪ್ಲಸ್ 9RT ಫೋನ್ ಭಾರತದಲ್ಲಿ ಬಿಡುಗಡೆಯಾದ ನಂತರ ಕಂಪನಿಯು ತನ್ನ ಒನ್‌ಪ್ಲಸ್ 9, ಒನ್‌ಪ್ಲಸ್ 9R ಮತ್ತು ಒನ್‌ಪ್ಲಸ್ 8T ಫೋನ್‌ಗಳನ್ನು ಸ್ಥಗಿತಗೊಳಿಸಲಿದೆ ಎಂದು ವಿತರಣಾ ಚಾನೆಲ್‌ನಿಂದ ಟಿಪ್‌ಸ್ಟರ್ ಯೋಗೇಶ್ ಬ್ರಾರ್ ತಿಳಿದುಕೊಂಡಿದ್ದಾರೆ. ಈ ಬಗ್ಗೆ ಮೊಬೈಲ್ 91 ವರದಿ ಮಾಡಿದೆ.

ಒನ್‌ಪ್ಲಸ್ ಕಂಪನಿಯು ಶೀಘ್ರದಲ್ಲೇ ದೇಶದಲ್ಲಿ ಒನ್‌ಪ್ಲಸ್ 9RT ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿರುವಂತೆ ತೋರುತ್ತಿದೆ. ಹಾಗೆಯೇ ಮುಂದಿನ ತಿಂಗಳು ಚೀನಾದಲ್ಲಿ ಒನ್‌ಪ್ಲಸ್ 10 ಪ್ರೊ ಅನ್ನು ಅನಾವರಣಗೊಳಿಸುವ ಸಾಧ್ಯತೆಗಳು ಇವೆ ಎನ್ನಲಾಗಿದೆ. ಹಾಗಾದರೇ ಸ್ಥಗಿತ ಆಗಲಿವೆ ಎನ್ನಲಾದ ಒನ್‌ಪ್ಲಸ್ 9, ಒನ್‌ಪ್ಲಸ್ 9R ಮತ್ತು ಒನ್‌ಪ್ಲಸ್ 8T ಫೋನ್ ಗಳ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್ 9 ಡಿಸ್‌ಪ್ಲೇ
ಒನ್‌ಪ್ಲಸ್ 9 ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.55 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್ ಸಹ ಪಡೆದುಕೊಂಡಿದೆ. ಜೊತೆಗೆ 3D ಗೊರಿಲ್ಲಾ ಗ್ಲಾಸ್ ರಕ್ಷಣೆಯನ್ನು ಒಳಗೊಂಡಿದ್ದು, 120Hz ಸ್ಕ್ರೀನ್ ರೀಫ್ರೇಶ್ ರೇಟ್ ಹೊಂದಿದೆ.

ಒನ್‌ಪ್ಲಸ್ 9 ಪ್ರೊಸೆಸರ್
ಒನ್‌ಪ್ಲಸ್ 9 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಒನ್‌ಪ್ಲಸ್ ಕೂಲ್ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಹಾಗೆಯೇ ಈ ಪ್ರೊಸೆಸರ್ ಆಂಡ್ರಾಯ್ಡ್ ಆಕ್ಸಿಜೆನ್ 11 ಓಎಸ್ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ಗಳು ಎರಡು ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 8GB/12GB RAM ಮತ್ತು 128GB/256GB ಆಗಿವೆ.

ಒನ್‌ಪ್ಲಸ್ 9 ಕ್ಯಾಮೆರಾ ಮತ್ತು ಬ್ಯಾಟರಿ
ಒನ್‌ಪ್ಲಸ್ 9 ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಹಾಗೆಯೇ ಒನ್‌ಪ್ಲಸ್ 9 ಸ್ಮಾರ್ಟ್‌ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಸಹ 65T Warp ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

ಒನ್‌ಪ್ಲಸ್ 9R- ಡಿಸ್‌ಪ್ಲೇ ಮತ್ತು ಪ್ರೊಸೆಸರ್
ಒನ್‌ಪ್ಲಸ್ 9 R ಸ್ಮಾರ್ಟ್‌ಫೋನ್ 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಪ್ಲಾಟ್ ಪ್ಲೂಯಿಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM + 128GB, 12GB RAM + 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಒನ್‌ಪ್ಲಸ್ 9R- ಕ್ಯಾಮೆರಾ ಮತ್ತು ಬ್ಯಾಟರಿ
ಒನ್‌ಪ್ಲಸ್ 9R ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 16 ಮೆಗಾ ಪಿಕ್ಸೆಲ್, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಕ್ಯಾಮೆರಾ ವನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ವಾರ್ಪ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

ಒನ್‌ಪ್ಲಸ್ 8T - ಡಿಸ್‌ಪ್ಲೇ
ಒನ್‌ಪ್ಲಸ್ 8T ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಹೊಂದಿದ್ದು, 6.55 ಇಂಚಿನ ಫುಲ್‌ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ 402ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಒನ್‌ಪ್ಲಸ್ 8T - ಪ್ರೊಸೆಸರ್ ಯಾವುದು
ಒನ್‌ಪ್ಲಸ್ 8T ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್ 865 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 12GB RAM ಮತ್ತು 256GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಒನ್‌ಪ್ಲಸ್ 8T - ಕ್ಯಾಮೆರಾ ಮತ್ತು ಬ್ಯಾಟರಿ
ಒನ್‌ಪ್ಲಸ್ 8T ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX586 ಸೆನ್ಸಾರ್, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್, ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಒನ್‌ಪ್ಲಸ್ 8T ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು 65 ಡಬ್ಲ್ಯೂ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086