ವಿ ಟೆಲಿಕಾಂನ ಈ ಮೂರು ಪ್ಲ್ಯಾನ್‌ಗಳಲ್ಲಿ ಡಬಲ್ ಡೇಟಾ ಮತ್ತು ಬಿಗ್ ವ್ಯಾಲಿಡಿಟಿ!
ಭಾರತೀಯ ಟೆಲಿಕಾಂ ವಲಯದಲ್ಲಿ ಈಗಾಗಲೇ ಸಾಕಷ್ಟು ಮಹತ್ತರ ಬದಲಾವಣೆಗಳು ನಡೆಯುತ್ತ ಸಾಗಿದೆ. ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂ ಸ್ಪರ್ಧಾತ್ಮಕವಾಗಿ ಮುನ್ನುಗ್ಗುತ್ತಿವೆ. ಈ ಮೂರು ಟೆಲಿಕಾಂಗಳು ಆಕರ್ಷಕ ಡೇಟಾ ಯೋಜನೆಗಳನ್ನು ಪರಿಚಯಿಸಿವೆ. ಆ ಪೈಕಿ ವಿ ಟೆಲಿಕಾಂ ತನ್ನ ಮೂರು ಜನಪ್ರಿಯ ಪ್ರೀಪೇಯ್ಡ್ ಪ್ಲ್ಯಾನ್‌ಗಳಲ್ಲಿ ಇನ್ನೂ ಡಬಲ್ ಡೇಟಾ ಕೊಡುಗೆಯನ್ನು ಮುಂದುವರಿಸಿ ಗ್ರಾಹಕರನ್ನು ಸೆಳೆದಿದೆ.

ಹೌದು, ವಿ ಟೆಲಿಕಾಂ ಭಿನ್ನ ಶ್ರೇಣಿಯ ಪ್ರೀಪೇಯ್ಡ್ ಯೋಜನೆಗಳನ್ನು ಹೊಂದಿದ್ದು, ಅವುಗಳಲ್ಲಿ ಮೂರು ಪ್ರೀಪೇಯ್ಡ್ ಯೋಜನೆಗಳಿಗೆ ಡಬಲ್ ಡೇಟಾ ಆಫರ್ ಪಡೆದಿವೆ. ಸದ್ಯ ಈ ಯೋಜನೆಗಳು ಪ್ರತದಿನ 4GB ಡೇಟಾ ಪ್ರಯೋಜನವನ್ನು ಹೊಂದಿದ್ದು, ಅದರೊಂದಿಗೆ ಆಕರ್ಷಕ ವ್ಯಾಲಿಡಿಟಿ ಸೌಲಭ್ಯ ಸಹ ಪಡೆದಿವೆ. ಅಲ್ಲದೇ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಬೇನಿಫಿಟ್ಸ್ ಸಹ ಹೊಂದಿವೆ. ಹಾಗಾದರೇ ವಿ ಟೆಲಿಕಾಂನ ಡಬಲ್ ಡೇಟಾ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ನೋಡೋಣ ಬನ್ನಿರಿ.

ವಿ ಟೆಲಿಕಾಂ 699ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ 699ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂ 499ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ 499ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂ 299ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.


Click it and Unblock the Notifications