ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನಿನಲ್ಲಿ ಭರ್ಜರಿ ವ್ಯಾಲಿಡಿಟಿ ಸಿಗುತ್ತೆ; ಬೆಲೆಯೂ ಅಗ್ಗ!
ದೇಶದ ಟೆಲಿಕಾಂ ವಲಯದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ಖಾಸಗಿ ಟೆಲಿಕಾಂಗಳಿಗೆ ಪೈಪೋಟಿ ನೀಡುವ ಹೆಜ್ಜೆಗಳನ್ನು ಹಾಕುತ್ತಾ ಮುನ್ನಡೆದಿದೆ. ಬಿಎಸ್‌ಎನ್‌ಎಲ್ ಟೆಲಿಕಾಂ ಭಿನ್ನ ವ್ಯಾಲಿಡಿಟಿ ಹಾಗೂ ಡೇಟಾ ಪ್ರಯೋಜನದ ಯೋಜನೆಗಳ ಆಯ್ಕೆಯನ್ನು ಒಳಗೊಂಡಿದೆ. ಅವುಗಳಲ್ಲಿ ಅಲ್ಪಾವಧಿಯ ಪ್ಲ್ಯಾನ್‌ಗಳ ಜೊತೆಗೆ ಕೆಲವೊಂದಿ ದೀರ್ಘಾವಧಿಯ ಯೋಜನೆಗಳು ಸೇರಿವೆ. ಆದ್ರೆ, ಬಜೆಟ್ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಪಡೆದ ಯೋಜನೆಗಳು ಹೆಚ್ಚು ಬೇಡಿಕೆಯಲ್ಲಿ ಕಾಣಿಸಿಕೊಂಡಿವೆ.

ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂನ ಎರಡು ಬಜೆಟ್ ದರದ ಪ್ರೀಪೇಯ್ಡ್ ಯೋಜನೆಗಳು ಒಟ್ಟು 90 ದಿನಗಳ ವ್ಯಾಲಿಡಿಟಿ ಪಡೆದಿದ್ದು, ಗ್ರಾಹಕರನ್ನು ಸೆಳೆದಿವೆ. ಅವುಗಳು ಕ್ರಮವಾಗಿ ಬಿಎಸ್‌ಎನ್‌ಎಲ್ 499ರೂ ಮತ್ತು ಬಿಎಸ್‌ಎನ್‌ಎಲ್ 485ರೂ. ಆಗಿವೆ. ಈ ಎರಡು ಪ್ರೀಪೇಯ್ಡ್ ಯೋಜನೆಗಳು ವ್ಯಾಲಿಡಿಟಿ ಜೊತೆಗೆ ಡೇಟಾ, ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳನ್ನು ಒಳಗೊಂಡಿದ್ದು, ಹೆಚ್ಚು ಮುಂಚೂಣಿಯಲ್ಲಿ ಗುರುತಿಸಿಕೊಂಡಿವೆ. ಹಾಗಾದರೇ ಬಿಎಸ್‌ಎನ್‌ಎಲ್ ಟೆಲಿಕಾಂನ ಈ ಎರಡು ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್‌ನ ಈ SVT 499 ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180 GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್ 485ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 1.5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ (FUP ಮಿತಿ ಇಲ್ಲ) ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ದಿನದ ನಿಗದಿತ ಡೇಟಾ ಮುಗಿದ ಬಳಿಕ 40 Kbps ವೇಗದಲ್ಲಿ ಇಂಟರ್ನೆಟ್ ಕೆಲಸ ಮಾಡಲಿದೆ. ಹಾಗೆಯೇ ಬಿಎಸ್‌ಎನ್‌ಎಲ್‌ನ ವಾರ್ಷಿಕ ಯೋಜನೆಗಳ ಬಗ್ಗೆ ಮುಂದೆ ನೋಡಿರಿ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ 599 ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 2399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ 2399ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದೆ. ಈ ಯೋಜನೆಯು ಇದೀಗ ಹೆಚ್ಚುವರಿಯಾಗಿ 60 ದಿನಗಳ ವ್ಯಾಲಿಡಿಟಿಯನ್ನು ಪಡೆದಿದೆ. ಹೀಗಾಗಿ ಒಟ್ಟು 425 ದಿನಗಳ ವ್ಯಾಲಿಡಿಟಿ ಸಿಗಲಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವು ದೊರೆಯಲಿದೆ. ಹಾಗೆಯೇ ಮುಂಬೈ ಮತ್ತು ದೆಹಲಿ ಎಮ್‌ಟಿಎನ್‌ಎಲ್ ಬಳಕೆದಾರರಗೆ ಅನಿಯಮಿತ ಸಾಂಗ್ ಚೇಂಜ್ ಹಾಗೂ EROS ಚಂದಾದಾರಿಕೆ ಸಹ ಲಭ್ಯ ಆಗಲಿದೆ.

ಬಿಎಸ್‌ಎನ್‌ಎಲ್ 184ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 184ರೂ. ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 1GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ Lystn ಪಾಡ್‌ಕ್ಯಾಸ್ಟ್‌ನ ಹೆಚ್ಚುವರಿ ಸಿಗಲಿದೆ.

ಬಿಎಸ್‌ಎನ್‌ಎಲ್ 185ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 185ರೂ. ಯೋಜನೆಯು ಸಹ 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 1GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ ಗ್ರಾಹಕರು M/S ಆನ್‌ಮೊಬೈಲ್ ಗ್ಲೋಬಲ್ ಲಿಮಿಟೆಡ್ ಮತ್ತು ಬಿಎಸ್‌ಎನ್‌ಎಲ್ ಟ್ಯೂನ್ಸ್‌ನಿಂದ ಪ್ರೋಗ್ರೆಸ್ಸಿವ್ ವೆಬ್ APP (PWA) ನಲ್ಲಿ ಸವಾಲುಗಳ ಅರೆನಾ ಮೊಬೈಲ್ ಗೇಮಿಂಗ್ ಸೇವೆಯನ್ನು ಪಡೆಯುತ್ತಾರೆ.

ಬಿಎಸ್‌ಎನ್‌ಎಲ್ 186ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 186ರೂ. ಯೋಜನೆಯು ಸಹ 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 1GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ ಹಾರ್ಡಿ ಗೇಮ್ಸ್ ಮತ್ತು BSNL ಟ್ಯೂನ್‌ಗಳ ಹೆಚ್ಚುವರಿ ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್ 347ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 347ರೂ. ಯೋಜನೆಯು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 2GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ ಗ್ರಾಹಕರು M/S ಆನ್‌ಮೊಬೈಲ್ ಗ್ಲೋಬಲ್ ಲಿಮಿಟೆಡ್ ಮತ್ತು ಬಿಎಸ್‌ಎನ್‌ಎಲ್ ಟ್ಯೂನ್ಸ್‌ನಿಂದ ಪ್ರೋಗ್ರೆಸ್ಸಿವ್ ವೆಬ್ APP (PWA) ನಲ್ಲಿ ಸವಾಲುಗಳ ಅರೆನಾ ಮೊಬೈಲ್ ಗೇಮಿಂಗ್ ಸೇವೆಯನ್ನು ಪಡೆಯುತ್ತಾರೆ.


Click it and Unblock the Notifications








