Jio ಗ್ರಾಹಕರೇ ಗಮನಿಸಿ.. ಒಮ್ಮೆ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, 90 ದಿನ ಕಿರಿ ಕಿರಿ ಇರಲ್ಲ!
ದೇಶದ ದಿಗ್ಗಜ ಟೆಲಿಕಾಂ ಜಿಯೋ (Jio) ಹಲವು ಆಕರ್ಷಕ ರೀಚಾರ್ಜ್ ಯೋಜನೆಗಳ ಮೂಲಕ ಈಗಾಗಲೇ ಗ್ರಾಹಕರನ್ನು ತನ್ನತ್ತ ಸೆಳೆದಿದೆ. ಮುಂಚೂಣಿಯ ಟೆಲಿಕಾಂ ಸಂಸ್ಥೆಯಾಗಿ ಮುಂದೆ ಸಾಗಿರುವ ಜಿಯೋ ತನ್ನ ಚಂದಾದಾರರಿಗಾಗಿ ಅಲ್ಪಾವಧಿಯ ಹಾಗೂ ದೀರ್ಘಾವಧಿಯ ಪ್ಲ್ಯಾನ್‌ಗಳ ಆಯ್ಕೆ ನೀಡಿದೆ. ಅವುಗಳಲ್ಲಿ ಬಹುತೇಕ ಪ್ಲ್ಯಾನ್‌ಗಳು ಡೇಟಾ ಪ್ರಯೋಜನ ಪಡೆದಿರುವುದು ಪ್ರಮುಖ ಆಕರ್ಷಣೆ ಎನಿಸಿದೆ. ಅದಾಗ್ಯೂ, ಜಿಯೋದ ಈ ಎರಡು ರೀಚಾರ್ಜ್ ಯೋಜನೆ ಬಹಳ ಲೀಡಿಂಗ್‌ನಲ್ಲಿ ಕಾಣಿಸಿಕೊಂಡಿವೆ.
ಹೌದು, ಜಿಯೋ (Jio) ಸಂಸ್ಥೆಯ ಹಲವು ಭಿನ್ನ ರೀಚಾರ್ಜ್ ಪ್ಲ್ಯಾನ್‌ಗಳ ಆಯ್ಕೆ ಪಡೆದಿದ್ದು, ಆ ಪೈಕಿ 899ರೂ. ಹಾಗೂ 999ರೂ. ಪ್ರೀಪೇಯ್ಡ್ ಪ್ಲ್ಯಾನ್ ಹೆಚ್ಚು ಗಮನ ಸೆಳೆದಿದೆ. ಈ ಎರಡು ಪ್ಲ್ಯಾನ್‌ಗಳು ದೀರ್ಘಾವಧಿಯ ವ್ಯಾಲಿಡಿಟಿ ಜೊತೆಗೆ ಆಕರ್ಷಕ ದೈನಂದಿನ ಡೇಟಾ ಪ್ರಯೋಜನ ಪಡೆದಿದೆ. ಇನ್ನು ಗ್ರಾಹಕರು ಈ ಯೋಜನೆ ರೀಚಾರ್ಜ್ ಮಾಡಿದ್ರೆ, ಪೂರ್ಣ ಮೂರು ತಿಂಗಳು ಮತ್ತೇ ಮತ್ತೇ ರೀಚಾರ್ಜ್ ಮಾಡುವ ಅಗತ್ಯ ಇರಲ್ಲ. ಹಾಗಾದರೇ ಜಿಯೋ ಟೆಲಿಕಾಂನ 899ರೂ. ಹಾಗೂ 999ರೂ. ಪ್ಲ್ಯಾನ್ ಹಾಗೂ ಇತರೆ ದೀರ್ಘಾವಧಿಯ ಯೋಜನೆಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಮುಂದೆ ಓದಿರಿ.

ಜಿಯೋ 999ರೂ.ಗಳ ರೀಚಾರ್ಜ್ ಯೋಜನೆ
ಜಿಯೋ (Jio) ಟೆಲಿಕಾಂನ 999ರೂ. ಗಳ ರೀಚಾರ್ಜ್ ಯೋಜನೆಯು ಸಹ ದೀರ್ಘಾವಧಿಯ ಪ್ಲ್ಯಾನ್ ಆಗಿದ್ದು, ಒಟ್ಟು 98 ದಿನಗಳ ವ್ಯಾಲಿಡಿಟಿ (Validity) ಪ್ರಯೋಜನ ಪಡೆದುಕೊಂಡಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ಸಿಗಲಿದ್ದು, ಇದರ ಜೊತೆಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಸಹ ಲಭ್ಯ ಆಗಲಿದೆ. ಹಾಗೆಯೇ ಇದರಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ಲಭ್ಯ ಆಗಲಿದೆ.
ಹಾಗೆಯೇ ಈ ಪ್ರೀಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ ಒಟ್ಟಾರೇಯಾಗಿ ಪೂರ್ಣ ವ್ಯಾಲಿಡಿಟಿ ಅವಧಿಗೆ 196GB ಡೇಟಾ ಸೌಲಭ್ಯ ದೊರೆಯುತ್ತದೆ. ಅಲ್ಲದೇ ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಜಿಯೋ ಕ್ಲೌಡ್ ಪ್ರಯೋಜನಗಳು ಸಿಗಲಿವೆ.
ಜಿಯೋ 899ರೂ.ಗಳ ರೀಚಾರ್ಜ್ ಯೋಜನೆ
ಜಿಯೋ (Jio) ಟೆಲಿಕಾಂನ 899ರೂ. ರೀಚಾರ್ಜ್ ಯೋಜನೆಯು ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿ (Validity) ಪ್ರಯೋಜನ ಒಳಗೊಂಡಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ಸಿಗಲಿದ್ದು, ಇದರ ಜೊತೆಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಸಹ ದೊರೆಯುತ್ತದೆ. ಹಾಗೆಯೇ ಇದರಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಕೂಡಾ ಲಭ್ಯ ಆಗಲಿದೆ.
ಅಲ್ಲದೇ ಈ ಪ್ರೀಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ ಒಟ್ಟಾರೇಯಾಗಿ ಪೂರ್ಣ ವ್ಯಾಲಿಡಿಟಿ ಅವಧಿಗೆ 200GB ಡೇಟಾ ದೊರೆಯುತ್ತದೆ. ಅಲ್ಲದೇ ಹೆಚ್ಚುವರಿಯಾಗಿ 20GB ಡೇಟಾ ಪ್ರಯೋಜನ ಸಹ ಸಿಗಲಿದೆ. ಇದರೊಂದಿಗೆ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಜಿಯೋ ಕ್ಲೌಡ್ ಪ್ರಯೋಜನಗಳು ಸಿಗಲಿವೆ.
ಜಿಯೋ 949ರೂ.ಗಳ ರೀಚಾರ್ಜ್ ಯೋಜನೆ
ಜಿಯೋ (Jio) ಟೆಲಿಕಾಂನ 949ರೂ. ರೀಚಾರ್ಜ್ ಯೋಜನೆಯು ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 84 ದಿನಗಳ ವ್ಯಾಲಿಡಿಟಿ (Validity) ಪ್ರಯೋಜನ ಒಳಗೊಂಡಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ಸಿಗಲಿದ್ದು, ಇದರ ಜೊತೆಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಸಹ ದೊರೆಯುತ್ತದೆ. ಹಾಗೆಯೇ ಇದರಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಕೂಡಾ ಲಭ್ಯ ಆಗಲಿದೆ. ಇದರೊಂದಿಗೆ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆ, ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಜಿಯೋ ಕ್ಲೌಡ್ ಪ್ರಯೋಜನಗಳು ಸಿಗಲಿವೆ.


Click it and Unblock the Notifications








