Home
ಸುದ್ದಿಜಾಲ

ಇಲ್ಲಿ ಗಮನಿಸಿ!..ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, 75GB ಡೇಟಾ ಸಂಪೂರ್ಣ ಉಚಿತ!

ಭಾರತೀಯ ಟೆಲಿಕಾಂ ವಲಯದಲ್ಲಿ ಏರ್‌ಟೆಲ್‌, ಜಿಯೋ ಮತ್ತು ವಿ ಟೆಲಿಕಾಂಗಳು ಪೈಪೋಟಿಯಲ್ಲಿ ಮುನ್ನುಗ್ಗುತ್ತಿದ್ದು, ಕೆಲವು ಉಪಯುಕ್ತ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿವೆ. ಆ ಪೈಕಿ ಬಹುತೇಕ ಯೋಜನೆಗಳು ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ವಿ ಟೆಲಿಕಾಂ (Vi Telecom) ನ ಕೆಲವು ಪ್ರೀಪೇಯ್ಡ್‌ ಯೋಜನೆಗಳು ಬೋನಸ್‌ ಡೇಟಾ ಪ್ರಯೋಜನ ಪಡೆದಿದ್ದು, ಜಿಯೋ, ಏರ್‌ಟೆಲ್‌ಗೆ ಟಾಂಗ್‌ ನೀಡುವಂತಿವೆ.

75GB ಬೋನಸ್‌ ಡೇಟಾ

ಹೌದು, ವಿ ಟೆಲಿಕಾಂ ಭಿನ್ನ ಡೇಟಾ ಸೌಲಭ್ಯದ ಪ್ರೀಪೇಯ್ಡ್‌ ಯೋಜನೆಗಳ ಲಿಸ್ಟ್‌ ಹೊಂದಿದ್ದು, ಆ ಪೈಕಿ ಮೂರು ಯೋಜನೆಗಳು ಹೆಚ್ಚುವರಿ ಡೇಟಾ ಪಡೆದಿವೆ. ಈ ಯೋಜನೆಗಳಲ್ಲಿ ದೈನಂದಿನ ಡೇಟಾ ಜೊತೆಗೆ ಸಂಪೂರ್ಣ ಉಚಿತವಾಗಿ ಒಟ್ಟು 75GB ಬೋನಸ್‌ ಡೇಟಾ ಸಹ ಗ್ರಾಹಕರಿಗೆ ಸಿಗಲಿದೆ. ಇದರೊಂದಿಗೆ ಅನಿಯಮಿತ ಉಚಿತ ವಾಯಿಸ್‌ ಕರೆ, ಎಸ್‌ಎಮ್‌ಎಸ್‌ ಸೌಲಭ್ಯ ಸಹ ದೊರೆಯುತ್ತದೆ. ಹಾಗಾದರೇ ವಿ ಟೆಲಿಕಾಂನ ಬೋನಸ್‌ ಡೇಟಾ ಪ್ರಯೋಜನದ ಮೂರು ಪ್ರೀಪೇಯ್ಡ್‌ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

75GB

ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 75GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಒಂದು ವರ್ಷದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದ್ದು, ಇದರೊಂದಿಗೆ ವಿ ಆಪ್ಸ್‌ಗಳು ಲಭ್ಯವಾಗಲಿವೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 75 GB ಡೇಟಾ ಪ್ರಯೋಜನ ಸಿಗಲಿದ್ದು, ಜೊತೆಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 50 GB ಡೇಟಾ ಪ್ರಯೋಜನ ಸಿಗಲಿದ್ದು, ಜೊತೆಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂ 601ರೂ. ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂ 601ರೂ. ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂನ 601ರೂ. ಪ್ರಿಪೇಯ್ಡ್‌ ಪ್ಲಾನ್‌ ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ನೀಡಲಿದೆ. ಇದು ಅನಿಯಮಿತ ಕರೆ, ದಿನನಿತ್ಯ 3 GB ಡೇಟಾ ಹಾಗೂ ಡೈಲಿ 100 ಎಸ್‌ಎಮ್‌ಎಸ್‌ ಪ್ರಯೋಜನ ನೀಡಲಿದೆ. ಇನ್ನು ಈ ಪ್ರಿಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿಯಾಗಿ 16GB ಡೇಟಾ ಸೌಲಭ್ಯ ಪಡೆದಿದೆ. ಜೊತೆಗೆ ವಿ ಆಪ್ಸ್‌ ಹಾಗೂ ಡೇಟಾ ರೋಲ್‌ ಓವರ್‌ ಸೌಲಭ್ಯ ಸಿಗಲಿದೆ.

Best Mobiles in India

English summary
These Vi Plan with Disney+ Hotstar Offering 75GB of Free Data.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+