ಈ ಪ್ಲ್ಯಾನ್‌ನಲ್ಲಿ ನೀವು ಬೇಡ ಅಂದ್ರೂ, ಈ ಸೌಲಭ್ಯ ಸಿಗುತ್ತೆ!..ಬೆಸ್ಟ್ ಅಲ್ವಾ?
ಭಾರತೀಯ ಟೆಲಿಕಾಂ ವಲಯದಲ್ಲಿ ಮೂರನೇ ಅತಿದೊಡ್ಡ ಟೆಲಿಕಾಂ ಆಪರೇಟರ್ ಆಗಿ ಗುರುತಿಸಿಕೊಂಡಿರುವ ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ಚಂದಾದಾರರಿಗೆ ಭಿನ್ನ ಶ್ರೇಣಿಯಲ್ಲಿ ಪ್ರೀಪೇಯ್ಡ್ ಪ್ಲ್ಯಾನ್ ಆಯ್ಕೆ ಪರಿಚಯಿಸಿದೆ. ವಿ ಟೆಲಿಕಾಂನ ಬಹುತೇಕ ಯೋಜನೆಗಳು ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿವೆ. ಅದಾಗ್ಯೂ ವಿ ಟೆಲಿಕಾಂನ ಕೆಲವು ಪ್ಲ್ಯಾನ್‌ಗಳಲ್ಲಿ ನೀವು ಬೇಡಾ ಅಂದರೂ, ಕೆಲವು ಪ್ರಯೋಜನಗಳು ಸಿಗುತ್ತವೆ.

ಹೌದು, ವಿ ಟೆಲಿಕಾಂ ಗ್ರಾಹಕರಿಗೆ ಭಿನ್ನ ಬೆಲೆಯಲ್ಲಿ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಯೋಜನೆ ಒದಗಿಸಿದೆ. ಅವುಗಳಲ್ಲಿ ಕೆಲವು ಯೋಜನೆಗಳು ಡೇಟಾ ಜೊತೆಗೆ ಹೆಚ್ಚುವರಿಯಾಗಿ ಓಟಿಟಿ ಪ್ರಯೋಜನ ಸಹ ಪಡೆದಿವೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯಗಳು ಸಹ ದೊರೆಯಲಿವೆ. ಹಾಗಾದರೆ ಓಟಿಟಿ ಪ್ರಯೋಜನ ಪಡೆದ ವಿ ಟೆಲಿಕಾಂನ ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಸೌಲಭ್ಯಗಳು
ವಿ ಟೆಲಿಕಾಂನ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದ್ದು, 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಹೆಚ್ಚುವರಿಯಾಗಿ ಒಂದು ವರ್ಷದ ಡಿಸ್ನಿ+ ಹಾಟ್‌ಸ್ಟಾರ್ (disney+ hotstar) ಮೊಬೈಲ್ ಚಂದಾದಾರಿಕೆ ಹಾಗೂ ವಿ ಆಪ್ಸ್‌ಗಳ ಸೇವೆ ಪಡೆದಿದೆ.

ವಿ ಟೆಲಿಕಾಂ 601ರೂ. ಪ್ರಿಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ 601ರೂ. ಪ್ರಿಪೇಯ್ಡ್ ಪ್ಲಾನ್ ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ನೀಡಲಿದೆ. ಇದು ಅನಿಯಮಿತ ಕರೆ, ದಿನನಿತ್ಯ 3 GB ಡೇಟಾ ಹಾಗೂ ಡೈಲಿ 100 ಎಸ್‌ಎಮ್‌ಎಸ್ ಪ್ರಯೋಜನ ನೀಡಲಿದೆ. ಇನ್ನು ಈ ಪ್ರಿಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿಯಾಗಿ 16GB ಡೇಟಾ ಸೌಲಭ್ಯ ಪಡೆದಿದೆ. ಜೊತೆಗೆ ವಿ ಆಪ್ಸ್ ಹಾಗೂ ಡೇಟಾ ರೋಲ್ ಓವರ್ ಸೌಲಭ್ಯ ಸಿಗಲಿದೆ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ. ಇದರೊಂದಿಗೆ ವಿ ಆಪ್ಸ್‌ಗಳು ಲಭ್ಯವಾಗಲಿವೆ.


Click it and Unblock the Notifications








