ದಿನಪೂರ್ತಿ ತಡೆ ರಹಿತ ಡೇಟಾ ಬಳಕೆಗೆ ಮಾಡಲು ಇದಕ್ಕಿಂತ ಒಳ್ಳೆಯ ಪ್ಲ್ಯಾನ್ ಬೇಕೆ?
ಇಂದಿನ ಡಿಜಿಟಲ್ ಲೈಫ್‌ಸ್ಟೈಲ್‌ನಲ್ಲಿ ಹಲವು ಡಿವೈಸ್‌ಗಳಿಗೆ ಡೇಟಾ ಸಂಪರ್ಕ ಅಗತ್ಯ. ಹಾಗೆಯೇ ಬಹುತೇಕ ಕೆಲಸಗಳು ಆನ್‌ಲೈನ್ ಮೂಲಕವೇ ಮಾಡಲಾಗುತ್ತದೆ. ಹೀಗಾಗಿ ಅನೇಕ ಮೊಬೈಲ್ ಬಳಕೆದಾರರು ಅಧಿಕ ದೈನಂದಿನ ಡೇಟಾ ಬಯಸುತ್ತಾರೆ. ಈ ನಿಟ್ಟಿನಲ್ಲಿ ಟೆಲಿಕಾಂ ಕಂಪನಿಗಳು ಸಹ ಆಕರ್ಷಕ ಡೇಟಾ ಪ್ರಯೋಜನದ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಸೆಳೆದಿವೆ. ಅದಾಗ್ಯೂ, ಕೆಲವು ಬಳಕೆದಾರರು ಪ್ರತಿದಿನ 3GBಗೂ ಹೆಚ್ಚಿನ ಡೇಟಾ ಬಯಸುತ್ತಾರೆ.

ಹೌದು, ಜಿಯೋ, ವಿ ಹಾಗೂ ಏರ್‌ಟೆಲ್ ಟೆಲಿಕಾಂಗಳು ಆಕರ್ಷಕ ಡೇಟಾ ಯೋಜನೆಗಳ ಲಿಸ್ಟ್ ಹೊಂದಿದೆ. ಆ ಪೈಕಿ ವಿ ಟೆಲಿಕಾಂ (ವೊಡಾಫೋನ್ ಐಡಿಯಾ)ನ ಕೆಲವು ಪ್ರೀಪೇಯ್ಡ್ ಯೋಜನೆಗಳು ಗಮನ ಸೆಳೆದಿವೆ. ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಸೌಲಭ್ಯ ಸಹ ಪಡೆದಿದೆ. ಹಾಗಾದರೇ ಪ್ರತಿದಿನ 4GB ಡೇಟಾ ಪ್ರಯೋಜನ ಒದಗಿಸುವ ವಿ ಟೆಲಿಕಾಂನ ಕೆಲವು ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 449ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 699ರೂ. ಪ್ಲ್ಯಾನ್ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂ 601ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32GB ಡೇಟಾ ಲಭ್ಯವಾಗಲಿದೆ.

ವಿ ಟೆಲಿಕಾಂ 801ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.


Click it and Unblock the Notifications








