ವಿ ಟೆಲಿಕಾಂನ ಈ ಅಗ್ಗದ ಪ್ಲ್ಯಾನಿನಲ್ಲಿ ಸಿಗುತ್ತೆ ಬರೋಬ್ಬರಿ 100GB ಡೇಟಾ!
ವಿ ಟೆಲಿಕಾಂ (ವೊಡಾಫೋನ್-ಐಡಿಯಾ) ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂಗಳಿಗೆ ನೇರ ಫೈಟ್ ನೀಡುತ್ತ ಮುನ್ನಡೆದಿದೆ. ಗ್ರಾಹಕರ ಸಂಖ್ಯೆಯನ್ನು ಹೆಚ್ಚಿನಿಸಿಕೊಳ್ಳಲು ಹಲವು ಆಕರ್ಷಕ ಪ್ರೀಪೇಯ್ಡ್ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ವಿ ಟೆಲಿಕಾಂನ ಬಹುತೇಕ ಪ್ಲ್ಯಾನ್‌ಗಳು ಅಧಿಕ ಡೇಟಾ ಪ್ರಯೋಜನದ ಜೊತೆಗೆ ಬಿಗ್ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಚಂದಾದಾರರಿಗೆ ಭರ್ಜರಿ ಎನಿಸಿವೆ.

ಹೌದು, ವಿ ಟೆಲಿಕಾಂ (ವೊಡಾಫೋನ್-ಐಡಿಯಾ) ಭಿನ್ನ ಪ್ರಯೋಜನಗಳ ಯೋಜನೆಗಳ ಆಯ್ಕೆ ಹೊಂದಿದೆ. ಅವುಗಳಲ್ಲಿ ಕೆಲವು ಯೋಜನೆಗಳು ಡಬಲ್ ಡೇಟಾ ಪ್ರಯೋಜನ ಪಡೆದಿವೆ. ಇನ್ನು ಕೆಲವು ಯೋಜನೆಗಳು ದೈನಂದಿನ ಡೇಟಾ, ಅಧಿಕ ವ್ಯಾಲಿಡಿಟಿ, ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಪಡೆದಿವೆ. ಹೆಚ್ಚಿನ ದೈನಂದಿನ ಡೇಟಾ ಜೊತೆಗೆ ಉಚಿತ ಓಟಿಟಿ ಚಂದಾದಾರಿಕೆಯ ಸೌಲಭ್ಯ ಪ್ರಯೋಜನ ಬಯಸುವ ಗ್ರಾಹಕರಿಗೆ ಸೂಕ್ತ ಪ್ರೀಪೇಯ್ಡ್ ಯೋಜನೆಗಳ ಆಯ್ಕೆ ಸಹ ಹೊಂದಿದೆ. ಈ ನಿಟ್ಟಿನಲ್ಲಿ ವಿ ಟೆಲಿಕಾಂನ 501ರೂ. ಗಮನ ಸೆಳೆದಿದೆ. ಹಾಗಾದರೇ ವಿ ಟೆಲಿಕಾಂ 501ರೂ. ಪ್ರೀಪೇಯ್ಡ್ ಯೋಜನೆ ಬಗ್ಗೆ ಹಾಗೂ ಇತರೆ ಅಧಿಕ ಡೇಟಾದ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 501ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 501ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16 GB ಡೇಟಾ ಲಭ್ಯವಾಗಲಿದೆ. ಪೂರ್ಣ ಅವಧಿಗೆ ಒಟ್ಟು 100GB ಡೇಟಾ ಲಭ್ಯ. ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 801ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 401ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿ ಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ.

ವಿ ಟೆಲಿಕಾಂ 701ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 701ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 449ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.


Click it and Unblock the Notifications








