ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, 5GB ಡೇಟಾ ಉಚಿತ!..ಉಳಿತಾಯ ಖಚಿತ!
ದೇಶದ ಮೂರನೇ ದೊಡ್ಡ ಟೆಲಿಕಾಂ ಆಗಿ ಗುರುತಿಸಿಕೊಂಡಿರುವ ವಿ ಟೆಲಿಕಾಂ ಹೆಚ್ಚಿನ ಚಂದಾದಾರರನ್ನು ಆಕರ್ಷಿಸಲು ಅಧಿಕ ಡೇಟಾ ಸೌಲಭ್ಯದ ಕೆಲವು ಪ್ಲ್ಯಾನ್ ಆಯ್ಕೆ ಪರಿಚಯಿಸಿದೆ. ಹಾಗೆಯೇ ಮತ್ತೆ ಕೆಲವು ಯೋಜನೆಗಳು ಅಧಿಕ ವ್ಯಾಲಿಡಿಟಿ ಪ್ರಯೋಜನ ಸಹ ಪಡೆದಿದ್ದು, ಜಿಯೋ ಹಾಗೂ ಏರ್‌ಟೆಲ್ ಟೆಲಿಕಾಂಗಳಿಗೆ ಪೈಪೋಟಿ ನೀಡುತ್ತಾ ಸಾಗಿದೆ. ಅದಾಗ್ಯೂ, ಸಂಸ್ಥೆಯ ಕೆಲವು ಪ್ಲ್ಯಾನ್‌ಗಳಲ್ಲಿ ಉಚಿತ 5GB ಡೇಟಾ ವರೆಗೆ ಲಭ್ಯ.
ಹೌದು, ಇತ್ತೀಚಿಗೆ ವಿ ಟೆಲಿಕಾಂ ಬಳಕೆದಾರರಿಗೆ ಹೊಸ ರೀಚಾರ್ಜ್ ಆಫರ್ ನೀಡಿದೆ. ಚಂದಾದಾರರು ಅಧಿಕೃತ ವಿ ಆಪ್ (Vi app) ಮೂಲಕ ರೀಚಾರ್ಜ್ ಮಾಡಿದರೆ, ಹೆಚ್ಚುವರಿಯಾಗಿ ಸುಮಾರು 5GB ವರೆಗೂ ಡೇಟಾ ಸೌಲಭ್ಯ ಪಡೆಯಬಹುದು. ಅಂದಹಾಗೆ ಚಂದಾದಾರರು ವಿ ಟೆಲಿಕಾಂ ಅಪ್ಲಿಕೇಶನ್ ಮೂಲಕವೇ ರೀಚಾರ್ಜ್ ಮಾಡಬೇಕಿದೆ.

ವಿ ಟೆಲಿಕಾಂ 299ರೂ. ವಿ 359ರ, ವಿ 479ರೂ, ವಿ 719ರೂ. ಹಾಗೂ ಇತರೆ ಕೆಲವು ಯೋಜನೆ ಹೆಚ್ಚುವರಿ ಡೇಟಾ ಪ್ರಯೋಜನ ಪಡೆದು ಗ್ರಾಹಕರನ್ನು ಆಕರ್ಷಿಸಿವೆ. ಈ ಯೋಜನೆಗಳು ಎಸ್‌ಎಮ್‌ಎಸ್, ಆಕರ್ಷಕ ವ್ಯಾಲಿಡಿಟಿ ಸೌಲಭ್ಯ ಕೂಡಾ ಪಡೆದಿವೆ. ಹಾಗಾದರೆ ವಿ ಟೆಲಿಕಾಂ ಈ ಪ್ಲ್ಯಾನ್‌ಗಳ ಬಗ್ಗೆ ಹಾಗೂ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ವಿ ಟೆಲಿಕಾಂ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಮಾಹಿತಿ :
ವಿ ಟೆಲಿಕಾಂ 299ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದುಕೊಂಡಿದೆ. ಈ ಅವಧಿಯಲ್ಲಿ ಚಂದಾದಾರರಿಗೆ ಪ್ರತಿದಿನ 1.5 GB ದೈನಂದಿನ ಡೇಟಾ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಅನಿಯಮಿತ ಧ್ವನಿ ಕರೆ ಪ್ರಯೋಜನ ಹಾಗೂ 100 ಎಸ್‌ಎಂಎಸ್ ದೊರೆಯುತ್ತದೆ. ಹೆಚ್ಚುವರಿಯಾಗಿ 5GB ಡೇಟಾ ಸೌಲಭ್ಯ ಸಿಗಲಿದೆ. ಜೊತೆಗೆ ವಿಕೆಂಡ್ ಡೇಟಾ ರೋಲ್‌ಓವರ್ ಪ್ರಯೋಜನ ಸಹ ಲಭ್ಯ.
ವಿ ಟೆಲಿಕಾಂ 359ರೂ. ಪ್ರಿಪೇಯ್ಡ್ ಪ್ಲ್ಯಾನ್ ಮಾಹಿತಿ :
ವಿ ಟೆಲಿಕಾಂ 359ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದುಕೊಂಡಿದೆ. ಈ ಅವಧಿಯಲ್ಲಿ ಚಂದಾದಾರರಿಗೆ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಗ್ರಾಹಕರಿಗೆ ಅನಿಯಮಿತ ಧ್ವನಿ ಕರೆ ಪ್ರಯೋಜನ ಹಾಗೂ 100 ಎಸ್‌ಎಂಎಸ್ ದೊರೆಯುತ್ತದೆ. ಹೆಚ್ಚುವರಿಯಾಗಿ 5GB ಡೇಟಾ ಸೌಲಭ್ಯ ಸಿಗಲಿದೆ. ಜೊತೆಗೆ ವಿಕೆಂಡ್ ಡೇಟಾ ರೋಲ್‌ಓವರ್ ಪ್ರಯೋಜನ ಸಹ ಲಭ್ಯ.
ವಿ ಟೆಲಿಕಾಂ 479ರೂ. ಪ್ರಿಪೇಯ್ಡ್ ಪ್ಲ್ಯಾನ್ ಮಾಹಿತಿ :
ವಿ ಟೆಲಿಕಾಂ 479ರೂ. ಪ್ರಿಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದುಕೊಂಡಿದೆ. ಈ ಅವಧಿಯಲ್ಲಿ ಚಂದಾದಾರರಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಚಂದಾದಾರರಿಗೆ ಅನಿಯಮಿತ ಧ್ವನಿ ಕರೆ ಪ್ರಯೋಜನ ಹಾಗೂ 100 ಎಸ್‌ಎಂಎಸ್ ದೊರೆಯುತ್ತದೆ. ಹೆಚ್ಚುವರಿಯಾಗಿ 5GB ಡೇಟಾ ಸೌಲಭ್ಯ ಸಿಗಲಿದೆ. ಜೊತೆಗೆ ವಿಕೆಂಡ್ ಡೇಟಾ ರೋಲ್‌ಓವರ್ ಪ್ರಯೋಜನ ಸಹ ಲಭ್ಯ.
ವಿ ಟೆಲಿಕಾಂ 719ರೂ. ಪ್ರಿಪೇಯ್ಡ್ ಪ್ಲ್ಯಾನ್ ಮಾಹಿತಿ :
ವಿ ಟೆಲಿಕಾಂ 719ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದುಕೊಂಡಿದೆ. ಈ ಅವಧಿಯಲ್ಲಿ ಚಂದಾದಾರರಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಗ್ರಾಹಕರಿಗೆ ಅನಿಯಮಿತ ಧ್ವನಿ ಕರೆ ಪ್ರಯೋಜನ ಹಾಗೂ 100 ಎಸ್‌ಎಂಎಸ್ ದೊರೆಯುತ್ತದೆ. ಹೆಚ್ಚುವರಿಯಾಗಿ 5GB ಡೇಟಾ ಸೌಲಭ್ಯ ಸಿಗಲಿದೆ. ಜೊತೆಗೆ ವಿಕೆಂಡ್ ಡೇಟಾ ರೋಲ್‌ಓವರ್ ಪ್ರಯೋಜನ ಸಹ ಲಭ್ಯ.


Click it and Unblock the Notifications








