ಗ್ರಾಹಕರೇ ಗಮನಿಸಿ.. ಅಧಿಕ ವ್ಯಾಲಿಡಿಟಿ ಬೇಕಿದ್ರೆ ಇವೇ ನೋಡಿ ಬೆಸ್ಟ್ ಪ್ಲ್ಯಾನ್‌ಗಳು!
ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ತೃತೀಯ ದೊಡ್ಡ ಖಾಸಗಿ ಟೆಲಿಕಾಂ ಕಂಪನಿ ಎನಿಸಿಕೊಂಡಿರುವ ವಿ ಟೆಲಿಕಾಂ ಕೆಲವು ಆಕರ್ಷಕ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಮೂಲಕ ಚಂದಾದಾರರನ್ನು ತನ್ನತ್ತ ಸೆಳೆದಿದೆ. ವಿ ಸಂಸ್ಥೆಯ ರೀಚಾರ್ಜ್ ಪ್ಲ್ಯಾನ್‌ಗಳ ಪೈಕಿ ಅಲ್ಪಾವಧಿಯ ಹಾಗೂ ದೀರ್ಘಾವಧಿಯ ಯೋಜನೆಗಳು ಕೂಡಾ ಸೇರ್ಪಡೆ ಆಗಿವೆ. ಅಲ್ಲದೇ ಬಜೆಟ್ ದರದಲ್ಲಿ ಬಿಗ್ ವ್ಯಾಲಿಡಿಟಿ ಸೌಲಭ್ಯದ ರೀಚಾರ್ಜ್ ಯೋಜನೆಗಳ ಆಯ್ಕೆಗಳು ಸಹ ಹೆಚ್ಚು ಉಪಯುಕ್ತ ಎನಿಸಿವೆ.
ಹೌದು, ವಿ ಟೆಲಿಕಾಂ (Vi) ಕೂಡಾ ಭಿನ್ನ ಶ್ರೇಣಿಯ ಪ್ಲ್ಯಾನ್‌ಗಳ ಆಯ್ಕೆ ಒಳಗೊಂಡಿದೆ. ಅವುಗಳಲ್ಲಿ ಅಧಿಕ ಡೇಟಾ ಪ್ರಯೋಜನದ ಪ್ಲ್ಯಾನ್‌ಗಳು ಸೇರಿವೆ ಅಲ್ಲದೇ ಅಧಿಕ ವ್ಯಾಲಿಡಿಟಿಯ ಪ್ಲ್ಯಾನ್‌ಗಳು ಕೂಡಾ ಇವೆ. ಸಂಸ್ಥೆಯ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಎಸ್‌ಎಮ್‌ಎಸ್ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಪಡೆದಿವೆ. ಹಾಗಾದರೇ ವಿ ಟೆಲಿಕಾಂ ಸಂಸ್ಥೆಯ ಅಧಿಕ ದಿನಗಳ ವ್ಯಾಲಿಡಿಟಿ ಪ್ಲ್ಯಾನ್‌ಗಳ ಬಗ್ಗೆ ಹಾಗೂ ಕೆಲವು ಅತ್ಯುತ್ತಮ ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

Vi 859ರೂ. ರೀಚಾರ್ಜ್ ಪ್ಲ್ಯಾನ್
ವಿ ಟೆಲಿಕಾಂನ 859 ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ 3 ದಿನಗಳಿಗೆ 5GB ಡೇಟಾ, ಡೇಟಾ ರೋಲ್ ಓವರ್ ಪ್ರಯೋಜನ ಕೂಡಾ ಲಭ್ಯ.
Vi 979ರೂ. ರೀಚಾರ್ಜ್ ಪ್ಲ್ಯಾನ್
ವಿ ಟೆಲಿಕಾಂನ 979 ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಡೇಟಾ ರೋಲ್ ಓವರ್ ಪ್ರಯೋಜನ ಸಹ ಲಭ್ಯ.
Vi 994ರೂ. ರೀಚಾರ್ಜ್ ಪ್ಲ್ಯಾನ್
ವಿ ಟೆಲಿಕಾಂನ 994 ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆ, ಡೇಟಾ ರೋಲ್ ಓವರ್ ಪ್ರಯೋಜನ ಕೂಡಾ ಲಭ್ಯ.
Vi 1599ರೂ. ರೀಚಾರ್ಜ್ ಪ್ಲ್ಯಾನ್
ವಿ ಟೆಲಿಕಾಂನ 1599 ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಸಹ ಹೊಂದಿದೆ. ಈ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 2.5 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್ ಚಂದಾದಾರಿಕೆ, ಡೇಟಾ ರೋಲ್ ಓವರ್ ಪ್ರಯೋಜನ ಸಹ ಲಭ್ಯ.


Click it and Unblock the Notifications








