ನೀವು ವಿ ಟೆಲಿಕಾಂ ಚಂದಾದಾರರೇ?..ಹಾಗಿದ್ರೆ ಈ ಪ್ಲ್ಯಾನ್‌ಗಳಲ್ಲಿ ಒಂದನ್ನು ರೀಚಾರ್ಜ್ ಮಾಡಿಸಿ!
ದೇಶದ ಟೆಲಿಕಾಂ ವಲಯದಲ್ಲಿ ವೊಡಾಫೋನ್ ಐಡಿಯಾ(ವಿ ಟೆಲಿಕಾಂ) ಟೆಲಿಕಾಂ ಸದ್ಯ ಜಿಯೋಗೆ ನೇರ ಪೈಪೋಟಿ ನೀಡುವ ಹೆಜ್ಜೆಗಳನ್ನು ಹಾಕುತ್ತ ಸಾಗಿದೆ. ವಿ ಟೆಲಿಕಾಂ ಈಗಾಗಲೇ ತನ್ನ ಪ್ರೀಪೇಡ್ ಪ್ಲ್ಯಾನ್‌ಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿದ್ದು, ಅಲ್ಪಾವಧಿಯ ಪ್ಲ್ಯಾನ್‌ಗಳಿಂದ, ದೀರ್ಘಾವಧಿಯ ಹಲವು ಆಕರ್ಷಕ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಹಾಗೆಯೇ ವಿ ಟೆಲಿಕಾಂ ಭರ್ಜರಿ ಡೇಟಾ ಆಫರ್‌ಗಳ ಯೋಜನೆಗಳನ್ನು ಪಡೆದಿದೆ.

ಹೌದು, ವಿ ಟೆಲಿಕಾಂ ಕಂಪನಿಯು ಇತ್ತೀಚಿಗೆ ಕೆಲವು ಯೋಜನೆಗಳಿಗೆ ಡಬಲ್ ಡೇಟಾ ಕೊಡುಗೆ ಘೋಷಿಸಿದೆ. ಈ ಮೂಲಕ ತನ್ನ ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನ ನಡೆಸಿದೆ. ವಿ ಟೆಲಿಕಾಂನ ಡಬಲ್ ಡೇಟಾ ಯೋಜನೆಗಳು ಭಿನ್ನ ವ್ಯಾಲಿಡಿಟಿ ಅವಧಿಯ ಜೊತೆಗೆ ಉಚಿತ ಕರೆ, ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳನ್ನು ನೀಡುತ್ತಿದೆ. ಹಾಗಾದರೇ ವಿ ಟೆಲಿಕಾಂನ ಜನಪ್ರಿಯ ಪ್ರೀಪೇಡ್ ಪ್ಲ್ಯಾನ್‌ಗಳು ಯಾವುವು ಮತ್ತು ಅವುಗಳ ಸೌಲಭ್ಯಗಳೆನು ಎನ್ನುವುದನ್ನು ಮುಂದೆ ನೋಡೋಣ ಬನ್ನಿರಿ.

ವಿ ಟೆಲಿಕಾಂ 499ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ 499ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂ 699ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ 699ರೂ. ಪ್ಲ್ಯಾನ್ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂ 299ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.


Click it and Unblock the Notifications