ವಿ ಟೆಲಿಕಾಂ ಗ್ರಾಹಕರೇ ಇಲ್ಲಿವೇ ನೋಡಿ ಅತ್ಯುತ್ತಮ ರೀಚಾರ್ಜ್ ಪ್ಲ್ಯಾನ್‌ಗಳು!
ಟೆಲಿಕಾಂ ಕ್ಷೇತ್ರದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸೇರಿದಂತೆ ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳ ನಡುವೆ ತೀವ್ರ ಪೈಪೋಟಿ ಇದೆ. ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸುವ ದೃಷ್ಠಿಯಿಂದ ಟೆಲಿಕಾಂ ಕಂಪನಿಗಳು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳನ್ನು ಪರಿಚಯಿಸುತ್ತ ಸಾಗಿವೆ. ಆ ಪೈಕಿ ವೊಡಾಫೋನ್- ಐಡಿಯಾ ಸಹ ಭರ್ಜರಿ ಡೇಟಾ, ವ್ಯಾಲಿಡಿಟಿ ಹಾಗೂ ವಾಯಿಸ್ ಕರೆಯ ಯೋಜನೆಗಳ ಆಯ್ಕೆ ಹೊಂದಿದೆ.

ಹೌದು, ವಿ ಟೆಲಿಕಾಂ ಕೆಲವು ಯೋಜನೆಗಳು ಆಕರ್ಷಕ ಅನಿಸಿವೆ. ಆ ಪೈಕಿ ವಿ 401ರೂ, 601ರೂ ಮತ್ತು 801ರೂ. ಪ್ರೀಪೇಯ್ಡ್ ಪ್ಲ್ಯಾನ್‌ಗಳು ಸೇರಿವೆ. ಅಧಿಕ ಡೇಟಾ ಬಯಸುವ ಚಂದಾದಾರರಿಗೆ ಈ ಯೋಜನೆಯು ಯೋಗ್ಯ ಎನಿಸಲಿದೆ. ಈ ಪ್ಲ್ಯಾನ್‌ಗಳು ಗ್ರಾಹಕರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ನೀಡುತ್ತವೆ. ಹಾಗೆಯೇ ಭಿನ್ನ ವ್ಯಾಲಿಡಿಟಿ ಸೌಲಭ್ಯವನ್ನು ಪಡೆದಿವೆ. ಹೆಚ್ಚುವರಿಯಾಗಿ ಕೆಲವು ಜನಪ್ರಿಯ ಓಟಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ಹಾಗಾದರೇ ವಿ ಟೆಲಿಕಾಂನ ಈ ಮೂರು ಪ್ರೀಪೇಯ್ಡ್ ಯೋಜನೆಗಳ ಇತರೆ ಪ್ರಯೋಜನಗಳೇನು? ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 401ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 601ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 801ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.


Click it and Unblock the Notifications








