ವೊಡಾಫೋನ್-ಐಡಿಯಾದ ಈ ಮೂರು ಪ್ಲ್ಯಾನ್‌ಗಳಲ್ಲಿ ಪ್ರತಿದಿನ 4GB ಡೇಟಾ!
ದೇಶದ ಟೆಲಿಕಾಂ ವಲಯದಲ್ಲಿ ವೊಡಾಫೋನ್-ಐಡಿಯಾ ಸಂಸ್ಥೆಯು ಜಿಯೋ ಹಾಗೂ ಏರ್‌ಟೆಲ್‌ಗಳಿಗೆ ನೇರ ಸ್ಪರ್ಧೆ ನೀಡುತ್ತಾ ಸಾಗಿದ್ದು, ಹಲವು ಆಕರ್ಷಕ ಡೇಟಾ ಯೋಜನೆಗಳನ್ನು ಪರಿಚಸಿದೆ. ಪ್ರತಿದಿನ 2GB ಡೇಟಾ, ಅನಿಯಮಿತ ವಾಯಿಸ್ ಕರೆ ಸೌಲಭ್ಯಗಳ ಯೋಜನೆಗಳನ್ನು ಹೊಂದಿದ್ದು, ಕೆಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳಲ್ಲಿ ಡಬಲ್ ಡೇಟಾ ಯೋಜನೆಯ ಕೊಡುಗೆಗಳನ್ನು ನೀಡಿದೆ.

ಹೌದು, ವೊಡಾಫೋನ್ ಐಡಿಯಾ ಟೆಲಿಕಾಂ 299ರೂ, 449ರೂ ಹಾಗೂ 699ರೂ. ಪ್ರೀಪೇಯ್ಡ್ ಪ್ಲ್ಯಾನ್‌ಗಳಲ್ಲಿ ಡಬಲ್ ಡೇಟಾ ಪ್ರಯೋಜನ ತಿಳಿಸಿದೆ. ಹಾಗೆಯೇ ಈ ಯೋಜನೆಗಳು ಭಿನ್ನ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿವೆ. ಡೇಟಾ ಸೌಲಭ್ಯದ ಜೊತೆಗೆ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಪ್ರಯೋಜನಗಳನ್ನು ಪಡೆದುಕೊಂಡಿವೆ. ವೊಡಾಫೋನ್-ಐಡಿಯಾದ ಈ ಮೂರು ಪ್ಲ್ಯಾನ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ನೋಡೋಣ ಬನ್ನಿರಿ.

ವೊಡಾಫೋನ್-ಐಡಿಯಾ 299ರೂ. ಪ್ಲ್ಯಾನ್
ವೊಡಾಫೋನಿನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವೊಡಾಫೋನ್-ಐಡಿಯಾ 499ರೂ. ಪ್ಲ್ಯಾನ್
ವೊಡಾಫೋನಿನ 499ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವೊಡಾಫೋನ್-ಐಡಿಯಾ 699ರೂ. ಪ್ಲ್ಯಾನ್
ವೊಡಾಫೋನಿನ 699ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.


Click it and Unblock the Notifications