ಈ ಪ್ಲ್ಯಾನಿನಲ್ಲಿ 365 ದಿನ ವ್ಯಾಲಿಡಿಟಿ, ಆದ್ರೆ ಡೇಟಾ ಕಡಿಮೆ!..ರೀಚಾರ್ಜ್‌ಗೆ ಉತ್ತಮವೇ?
ದೇಶದ ಟೆಲಿಕಾಂ ವಲಯದಲ್ಲಿ ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂ ಸಂಸ್ಥೆಗಳು ಭಿನ್ನ ಪ್ರಯೋಜನಗಳ ಪ್ಲ್ಯಾನ್‌ಗಳ ಮೂಲಕ ಗ್ರಾಹಕರನ್ನು ಸೆಳೆಯುವ ಪ್ರಯತ್ನ ನಡೆಸಿವೆ. ಆ ಪೈಕಿ ಕೆಲವು ಯೋಜನೆಗಳು ಅಧಿಕ ವ್ಯಾಲಿಡಿಟಿ ಪಡೆದಿದ್ದರೆ, ಮತ್ತೆ ಕೆಲವು ಅಧಿಕ ಡೇಟಾ ಪ್ರಯೋಜನ ಒಳಗೊಂಡಿವೆ. ಏರ್‌ಟೆಲ್ ಟೆಲಿಕಾಂನ 1799ರೂ. ರೀಚಾರ್ಜ್ ಯೋಜನೆ ವಾರ್ಷಿಕ ವ್ಯಾಲಿಡಿಟಿಯೊಂದಿಗೆ ಗಮನ ಸೆಳೆದಿದೆ.
ಹೌದು, ಭಾರ್ತಿ ಏರ್‌ಟೆಲ್ ಟೆಲಿಕಾಂನ 1799ರೂ. ಯೋಜನೆಯು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಇದು ಒಟ್ಟಾರೇ ಡೇಟಾ ಪ್ರಯೋಜನ ಪಡೆದಿದ್ದು, ಆದರೆ ದೈನಂದಿನ ಡೇಟಾ ಪ್ರಯೋಜನ ಹೊಂದಿಲ್ಲ. ಜೊತೆಗೆ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಸೌಲಭ್ಯಗಳನ್ನು ಒಳಗೊಂಡಿದೆ. ಹಾಗಾದರೆ ಏರ್‌ಟೆಲ್‌ನ 1799ರೂ. ಪ್ಲ್ಯಾನ್ ರೀಚಾರ್ಜ್ ಮಾಡಲು ಯೋಗ್ಯವೇ?. ಇದರ ಪ್ರಯೋಜನಗಳು ಏನು? ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್ 1799ರೂ. ರೀಚಾರ್ಜ್ ಪ್ಲ್ಯಾನ್ ಮಾಹಿತಿ ವಿವರ: ಭಾರ್ತಿ ಏರ್‌ಟೆಲ್‌ನ 1799 ರೂ. ಪ್ರೀಪೇಯ್ಡ್ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಇದರೊಂದಿಗೆ ಈ ಯೋಜನೆಯು ಒಟ್ಟು 24GB ಡೇಟಾ ಪ್ರಯೋಜನ ಪಡೆದಿದ್ದು. ಜೊತೆಗೆ ಒಟ್ಟು 3600 ಎಸ್ಎಮ್ಎಸ್ ಪ್ರಯೋಜನ ಸಹ ಒಳಗೊಂಡಿದೆ.
ಹಾಗೆಯೇ ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ಧ್ವನಿ ಕರೆಗಳ ಸೌಲಭ್ಯ ಸಹ ಪಡೆದಿದೆ. ಈ ಯೋಜನೆಯಲ್ಲಿ ಉಚಿತ ಹೆಲೋ ಟ್ಯೂನ್, ವೆಂಕ್ ಮ್ಯೂಸಿಕ್ ಸೇರಿದಂತೆ ಇತರೆ ಏರ್‌ಟೆಲ್ ಆಪ್ಸ್ ಲಭ್ಯ.
ಏರ್‌ಟೆಲ್‌ನ 3359ರೂ. ಪ್ರೀಪೇಯ್ಡ್ ಪ್ಲಾನ್ ಮಾಹಿತಿ : ಭಾರ್ತಿ ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯ ವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.
ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್ ಪ್ಲಾನ್ ಮಾಹಿತಿ : ಭಾರ್ತಿ ಏರ್‌ಟೆಲ್ ಟೆಲಿಕಾಂ ನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಪಡೆದಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ದೊರೆಯುತ್ತದೆ.
ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಂ ಸೇವೆ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಸಿಗುತ್ತವೆ.
ಏರ್‌ಟೆಲ್ 999ರೂ. ಪ್ರೀಪೇಯ್ಡ್ ಪ್ಲ್ಯಾನ್ ಮಾಹಿತಿ ಇಲ್ಲಿದೆ: ಭಾರ್ತಿ ಏರ್‌ಟೆಲ್ ಟೆಲಿಕಾಂನ 999 ರೂ. ರೀಚಾರ್ಜ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಅಲ್ಲದೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಪಡೆದುಕೊಂಡಿದೆ.
ಇದರೊಂದಿಗೆ ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ಧ್ವನಿ ಕರೆಗಳ ಪ್ರಯೋಜನ ಪಡೆದಿದ್ದು, ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ಸಹ ಸಿಗಲಿದೆ.


Click it and Unblock the Notifications








