ಏರ್‌ಟೆಲ್ ಗ್ರಾಹಕರಿಗೆ ಸಿಹಿಸುದ್ದಿ.. ಈ ಪ್ಲ್ಯಾನಿನಲ್ಲಿ 168GB ಡೇಟಾ ಜೊತೆಗೆ ಓಟಿಟಿ ಲಭ್ಯ!
ದೇಶದ ಟೆಲಿಕಾಂ ವಿಭಾಗದಲ್ಲಿ ಎರಡನೇ ದೊಡ್ಡ ಸಂಸ್ಥೆ ಎನಿಸಿರುವ ಭಾರ್ತಿ ಏರ್‌ಟೆಲ್ ಈಗಾಗಲೇ ಆಕರ್ಷಕ ರೀಚಾರ್ಜ್ ಯೋಜನೆಗಳನ್ನು ಪರಿಚಯಿಸುವ ಮೂಲಕ ಸದ್ದು ಮಾಡಿವೆ. ಆ ಪೈಕಿ ಏರ್‌ಟೆಲ್ ಸಂಸ್ಥೆಯ ಬಹುತೇಕ ರೀಚಾರ್ಜ್ ಪ್ಲ್ಯಾನ್‌ಗಳು ಅನಿಯಮಿತ ವಾಯಿಸ್ ಕರೆ, ದೈನಂದಿನ ಡೇಟಾ ಪ್ರಯೋಜನ ಪಡೆದಿದ್ದು, ಗ್ರಾಹಕರನ್ನು ಸೆಳೆದಿವೆ. ಅದೇ ರೀತಿ ಏರ್‌ಟೆಲ್ ತನ್ನ ಗ್ರಾಹಕರಿಗಾಗಿ ತನ್ನ ಬಜೆಟ್ ಬೆಲೆಯ ಪ್ಲ್ಯಾನ್‌ವೊಂದರಲ್ಲಿ ಅಮೆಜಾನ್ ಪ್ರೈಮ್ ವಿಡಿಯೋ ಸೌಲಭ್ಯ ಲಭ್ಯ ಮಾಡಿದ್ದು, ಚಂದಾದಾರರಿಗೆ ಖುಷಿ ನೀಡಿದೆ.
ಹೌದು, ಭಾರ್ತಿ ಏರ್‌ಟೆಲ್ ಸಂಸ್ಥೆಯು ತನ್ನ 699ರೂ. ರೀಚಾರ್ಜ್ ಯೋಜನೆಯಲ್ಲಿ ಅಮೆಜಾನ್ ಪ್ರೈಮ್ ವಿಡಿಯೋ (Amazon Prime subscription) ಸೌಲಭ್ಯ ಒದಗಿಸಿದೆ. ಈ ರೀಚಾರ್ಜ್ ಯೋಜನೆಯು ದೇಶಾದ್ಯಂತ ಗ್ರಾಹಕರಿಗೆ ಲಭ್ಯವಿದೆ. ಅಂದಹಾಗೆ ಒಂದು ತಿಂಗಳಿಗೆ ಅಮೆಜಾನ್ ಪ್ರೈಮ್ ಚಂದಾದಾರಿಕೆ 299ರೂ. ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಈ ಯೋಜನೆಯು ಅತ್ಯುತ್ತಮ ಪ್ರಯೋಜನಗಳನ್ನು ಪಡೆದಿದೆ. ಹಾಗಾದರೇ ಈ ಪ್ಲ್ಯಾನಿನ ಇತರೆ ಸೌಲಭ್ಯಗಳೆನು ಹಾಗೂ ಇತರೆ ಜನಪ್ರಿಯ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್ 699ರೂ. ರೀಚಾರ್ಜ್ ಪ್ಲ್ಯಾನ್
ಏರ್‌ಟೆಲ್ ಸಂಸ್ಥೆಯ ಈ 699ರೂ. ರೀಚಾರ್ಜ್ ಯೋಜನೆಯು ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಈ ಪ್ಲ್ಯಾನಿನಲ್ಲಿ ಪ್ರತಿದಿನ 3GB ಡೇಟಾ ಸೌಲಭ್ಯಗಳು ಗ್ರಾಹಕರಿಗೆ ದೊರೆಯಲಿದ್ದು, ಇದರ ಜೊತೆಗೆ ಅನಿಯಮಿತ ಧ್ವನಿ ಕರೆಯ ಪ್ರಯೋಜನ ಸಹ ಸಿಗುತ್ತದೆ. ಇದಲ್ಲದೇ ನಿತ್ಯ 100 ಉಚಿತ ಎಸ್‌ಎಮ್ಎಸ್ ಸೌಲಭ್ಯ ಲಭ್ಯ.
ಇದರೊಂದಿಗೆ ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ವಿಡಿಯೋ (Amazon Prime subscription) ಸದಸ್ಯತ್ವ ಸಹ ಗ್ರಾಹಕರಿಗೆ ದೊರೆಯುತ್ತದೆ. ಅಲ್ಲದೇ ಏರ್‌ಟೆಲ್ ಎಕ್ಸ್‌ಟ್ರೀಮ್ ಪ್ಲೇ, ಹೆಲ್ಲೋ ಟ್ಯೂನ್ ಸೌಲಭ್ಯ, ವೆಂಕ್ ಮ್ಯೂಸಿಕ್ ಪ್ರಯೋಜನ ಸಹ ಬಳಕೆದಾರರಿಗೆ ಲಭ್ಯವಾಗಲಿದೆ.
ಏರ್‌ಟೆಲ್ 499ರೂ. ರೀಚಾರ್ಜ್ ಪ್ಲ್ಯಾನ್
ಏರ್‌ಟೆಲ್ ಸಂಸ್ಥೆಯ ಈ 499ರೂ. ರೀಚಾರ್ಜ್ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಈ ಪ್ಲ್ಯಾನಿನಲ್ಲಿ ಪ್ರತಿದಿನ 3GB ಡೇಟಾ ಸೌಲಭ್ಯಗಳು ಗ್ರಾಹಕರಿಗೆ ದೊರೆಯಲಿದ್ದು, ಇದರ ಜೊತೆಗೆ ಅನಿಯಮಿತ ಧ್ವನಿ ಕರೆಯ ಪ್ರಯೋಜನ ಸಹ ಸಿಗುತ್ತದೆ. ಇದಲ್ಲದೇ ನಿತ್ಯ 100 ಉಚಿತ ಎಸ್‌ಎಮ್ಎಸ್ ಸೌಲಭ್ಯ ಲಭ್ಯ. ಹಾಗೆಯೇ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ಲಭ್ಯ.
ಏರ್‌ಟೆಲ್ 399ರೂ. ರೀಚಾರ್ಜ್ ಪ್ಲ್ಯಾನ್
ಏರ್‌ಟೆಲ್ ಸಂಸ್ಥೆಯ ಈ 399ರೂ. ರೀಚಾರ್ಜ್ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಈ ಯೋಜನೆಯು ಕೂಡಾ ಪ್ರತಿದಿನ 3GB ಡೇಟಾ ಸೌಲಭ್ಯಗಳು ಗ್ರಾಹಕರಿಗೆ ದೊರೆಯಲಿದ್ದು, ಇದರ ಜೊತೆಗೆ ಅನಿಯಮಿತ ಧ್ವನಿ ಕರೆಯ ಪ್ರಯೋಜನ ಸಹ ಸಿಗುತ್ತದೆ. ಹಾಗೆಯೇ ನಿತ್ಯ 100 ಉಚಿತ ಎಸ್‌ಎಮ್ಎಸ್ ಸೌಲಭ್ಯ ಲಭ್ಯ. ಹಾಗೆಯೇ ಏರ್‌ಟೆಲ್ ಎಕ್ಸ್‌ಟ್ರೀಮ್ ಪ್ಲೇ ಸೌಲಭ್ಯ ಸಹ ಲಭ್ಯ.
ಏರ್‌ಟೆಲ್ 395ರೂ. ರೀಚಾರ್ಜ್ ಪ್ಲ್ಯಾನ್
ಏರ್‌ಟೆಲ್ ಟೆಲಿಕಾಂನ ಈ 395ರೂ. ರೀಚಾರ್ಜ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದ್ದು, ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಇದು ಬೆಸ್ಟ್. ಈ ಯೋಜನೆಯು ಪೂರ್ಣ ವ್ಯಾಲಿಡಿಟಿಗೆ ಒಟ್ಟು 6GB ಡೇಟಾ ಸೌಲಭ್ಯ ಗ್ರಾಹಕರಿಗೆ ಒದಗಿಸುತ್ತದೆ. ಇದರ ಜೊತೆಗೆ ಅನಿಯಮಿತ ಧ್ವನಿ ಕರೆಯ ಪ್ರಯೋಜನ ಸಹ ಲಭ್ಯ ಇದ್ದು, ಹಾಗೆಯೇ ಒಟ್ಟು 600 ಉಚಿತ ಎಸ್‌ಎಮ್ಎಸ್ ಸೌಲಭ್ಯ ಸಿಗಲಿವೆ. ಹಾಗೆಯೇ ಹೆಲ್ಲೋ ಟ್ಯೂನ್ ಸೌಲಭ್ಯ, ವೆಂಕ್ ಮ್ಯೂಸಿಕ್ ಪ್ರಯೋಜನ ಸಹ ಬಳಕೆದಾರರಿಗೆ ಲಭ್ಯವಾಗಲಿದೆ.


Click it and Unblock the Notifications








