ಇದು ಏರ್‌ಟೆಲ್‌ನ ದುಬಾರಿ ಪ್ರೀಪೇಯ್ಡ್ ಪ್ಲ್ಯಾನ್!..ರೀಚಾರ್ಜ್‌ಗೆ ಉತ್ತಮವೇ?
ದೇಶದ ಎರಡನೇ ದೊಡ್ಡ ಟೆಲಿಕಾಂ ಸಂಸ್ಥೆಯಾಗಿ ಕಾಣಿಸಿಕೊಂಡಿರುವ ಏರ್‌ಟೆಲ್, ಗ್ರಾಹಕರುನ್ನು ಸೆಳೆಯಲು ಆಕರ್ಷಕ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುಂದೆ ನಡೆದಿರುವ ಏರ್‌ಟೆಲ್ ಇದೀಗ ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಪಡೆದಿದೆ. ಅವುಗಳಲ್ಲಿ ಏರ್‌ಟೆಲ್ 3,359ರೂ. ಪ್ರೀಪೇಯ್ಡ್ ಪ್ಲ್ಯಾನ್ ದುಬಾರಿ ಆಗಿದ್ದು, ಇದು ಉತ್ತಮವೇ?
ಹೌದು, ಏರ್‌ಟೆಲ್ ಟೆಲಿಕಾಂನ 3,359ರೂ. ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಪ್ಲ್ಯಾನಿನಲ್ಲಿ ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಲಭ್ಯ. ಇದರೊಂದಿಗೆ ಏರ್‌ಟೆಲ್ ಆಪ್ಸ್ ಸೇವೆಗಳು ಹಾಗೂ ಹೆಚ್ಚುವರಿ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಏರ್‌ಟೆಲ್ ಟೆಲಿಕಾಂನ 3,359ರೂ. ಪ್ರೀಪೇಯ್ಡ್ ಪ್ಲ್ಯಾನ್ ಉತ್ತಮವೇ?..ಹಾಗೂ ಇತರೆ ಕೆಲವು ಅತ್ಯುತ್ತಮ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ನ 3359ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು : ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯ ವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.
ಏರ್‌ಟೆಲ್‌ನ ಈ ಯೋಜನೆಯು ಪದೇ ಪದೇ ರೀಚಾರ್ಜ್ ಮಾಡಿಸೋದು ಬೇಡ ಎನ್ನುವ ಗ್ರಾಹಕರಿಗೆ ಆಕರ್ಷಕ ಎನಿಸುತ್ತದೆ. ಹಾಗೆಯೇ ಅಧಿಕ ದೈನಂದಿನ ಡೇಟಾ ಪ್ರಯೋಜನ ಬಯಸುವ ಗ್ರಾಹಕರ ಗಮನ ಸೆಳೆಯುತ್ತದೆ. ಏಕೆಂದರೆ ಈ ಯೋಜನೆಯಲ್ಲಿ ಪ್ರತಿದಿನ 2.5GB ಡೇಟಾ ಲಭ್ಯ.
ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು : ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 838ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ಏರ್‌ಟೆಲ್ ಟೆಲಿಕಾಂನ 838ರೂ. ಪ್ರೀಪೇಡ್ ಪ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ, ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.
ಏರ್‌ಟೆಲ್ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ಏರ್‌ಟೆಲ್ ಟೆಲಿಕಾಂನ ಜನಪ್ರಿಯ ಪ್ರೀಪೇಡ್ ಪ್ಯಾನ್‌ಗಳಲ್ಲಿ ಒಂದಾಗಿರುವ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ.


Click it and Unblock the Notifications








