ಉಚಿತವಾಗಿ ಅಮೆಜಾನ್ ಪ್ರೈಮ್ ಸದಸ್ಯತ್ವ ಬೇಕಿದ್ದರೇ ಈ ಪ್ಲ್ಯಾನ್ ರೀಚಾರ್ಜ್ ಮಾಡ್ಸಿ!

|

ಪ್ರಸ್ತುತ ಓಟಿಟಿ ಅಪ್ಲಿಕೇಶನ್‌ಗಳು ಹೆಚ್ಚು ಟ್ರೆಂಡಿಂಗ್‌ನಲ್ಲಿದ್ದು, ಬಹುತೇಕ ಬಳಕೆದಾರರು ವೆಬ್‌ ಸೀರೀಯಲ್‌ಗಳಿಗೆ ಅಡಿಕ್ಟ್ ಆಗಿದ್ದಾರೆ. ಆದರೆ ಗ್ರಾಹಕರುಅಮೆಜಾನ್ ಪ್ರೈಮ್, ನೆಟ್‌ಫ್ಲಿಕ್ಸ್‌, ALT ಭಾಲಾಜಿ, ಹಾಟ್‌ಸ್ಟಾರ್‌, ಜೀ5 ಓಟಿಟಿ ಆಪ್‌ಗಳ ಸೇವೆ ಪಡೆಯಲು ಗ್ರಾಹಕರು ಚಂದಾದಾರಿಕೆ ಪಡೆಯಬೇಕಿದೆ. ಆದರೆ ಕೆಲವೊಂದು ಜನಪ್ರಿಯ ಓಟಿಟಿ ಪ್ಲಾಟ್‌ಫಾರ್ಮ್ ಗಳನ್ನು ಉಚಿತವಾಗಿ ವೀಕ್ಷಣೆ ಮಾಡಲು ಅವಕಾಶಗಳಿವೆ.

ಅಮೆಜಾನ್ ಪ್ರೈಮ್

ಹೌದು, ಸದ್ಯ ಭಾರತದಲ್ಲಿ ಅಮೆಜಾನ್ ಪ್ರೈಮ್ ಹಾಗೂ ನೆಟ್‌ಫ್ಲಿಕ್ಸ್‌ ತಾಣಗಳು ಮೂಂಚೂಣಿಯಲ್ಲಿ ಗುರುತಿಸಿಕೊಂಡಿದ್ದು, ತಿಂಗಳ ಚಂದಾ ಶುಲ್ಕವನ್ನು ನಿಗದಿಪಡಿಸಿವೆ. ಆದರೆ ಏರ್‌ಟೆಲ್‌ ಗ್ರಾಹಕರು ಅಮೆಜಾನ್ ಪ್ರೈಮ್ ಚಂದಾದಾರಿಕೆಯನ್ನು ಉಚಿತವಾಗಿ ಪಡೆಯಬಹುದಾಗಿದ್ದು, ಜೊತೆಗೆ ಡೇಟಾ ಹಾಗೂ ವಾಯಿಸ್‌ ಕರೆ ಸಹ ಲಭ್ಯವಾಗಲಿವೆ. ಏರ್‌ಟೆಲ್‌ನ 349ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ನಲ್ಲಿ ಈ ಸೌಲಭ್ಯ ದೊರೆಲಿದೆ. ಹಾಗಾದರೇ ಏರ್‌ಟೆಲ್‌ನ 349ರೂ. ಪ್ಲ್ಯಾನ್ ಪ್ರಯೋಜನಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಏರ್‌ಟೆಲ್ 349ರೂ. ಪ್ಲ್ಯಾನ್

ಏರ್‌ಟೆಲ್ 349ರೂ. ಪ್ಲ್ಯಾನ್

ಏರ್‌ಟೆಲ್‌ನ 349ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೇ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಮತ್ತು ಅಮೆಜಾನ್ ಪ್ರೈಮ್ ಸದಸ್ಯತ್ವ ಒದಗಿಸುತ್ತದೆ.

ಏರ್‌ಟೆಲ್ 448ರೂ. ಪ್ಲ್ಯಾನ್

ಏರ್‌ಟೆಲ್ 448ರೂ. ಪ್ಲ್ಯಾನ್

ಏರ್‌ಟೆಲ್‌ನ 448ರೂ. ಪ್ರೀಪೇಡ್‌ ಪ್ಲ್ಯಾನ್‌ ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 3GB ಡೇಟಾ ಹಾಗೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೇ ಈ ಪ್ಲ್ಯಾನ್ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಒಳಗೊಂಡಿದೆ.

ಏರ್‌ಟೆಲ್ 2698ರೂ. ಪ್ಲ್ಯಾನ್

ಏರ್‌ಟೆಲ್ 2698ರೂ. ಪ್ಲ್ಯಾನ್

ಅದೇ ರೀತಿ ಏರ್‌ಟೆಲ್‌ನ 2698ರೂ. ಪ್ರೀಪೇಡ್‌ ಪ್ಲ್ಯಾನ್‌ ವಾರ್ಷಿಕ ಪ್ಲ್ಯಾನ್ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೇ ಈ ಪ್ಲ್ಯಾನ್ ಸಹ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಒಳಗೊಂಡಿದೆ.

Most Read Articles
Best Mobiles in India

English summary
Airtel is offering 28 days of Amazon Prime membership at no extra cost.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X