BSNLನ ಈ ಅಗ್ಗದ ಪ್ಲ್ಯಾನಿನಲ್ಲಿ ಸಿಗುತ್ತೆ ಭರ್ಜರಿ ಪ್ರಯೋಜನ; ಡೇಟಾ ಎಷ್ಟು ಗೊತ್ತಾ?

|

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಟೆಲಿಕಾಂ ಸೇರಿದಂತೆ ಜಿಯೋ, ವೊಡಾಫೋನ್-ಐಡಿಯಾ ಮತ್ತು ಏರ್‌ಟೆಲ್ ಟೆಲಿಕಾಂಗಳು ಪ್ರಸ್ತುತ ಆಕರ್ಷಕ ಪ್ಲ್ಯಾನ್ ಪರಿಚಯಿಸುತ್ತಾ ಸಾಗಿವೆ. ಖಾಸಗಿ ಟೆಲಿಕಾಂಗಳಿಗೆ ಪೈಪೋಟಿ ನೀಡುವಂತಹ ಕೆಲವು ಯೋಜನೆಗಳನ್ನು ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಸಂಸ್ಥೆ ನೀಡಿದೆ. ಅವುಗಳು ಅಧಿಕ ವ್ಯಾಲಿಡಿಟಿ, ವಾಯಿಸ್ ಕರೆ ಹಾಗೂ ಡೇಟಾ ಪ್ರಯೋಜನಗಳನ್ನು ಒಳಗೊಂಡಿದೆ. ಬಜೆಟ್‌ ದರದಲ್ಲಿ ಬಿಎಸ್‌ಎನ್‌ಎಲ್‌ ಆಲ್‌ ಇನ್ ಒನ್ ಪ್ರೀಪೇಯ್ಡ್‌ ಪ್ಲ್ಯಾನ್‌ ಗ್ರಾಹಕರ ಗಮನ ಸೆಳೆದಿದ್ದು, ಈ ಯೋಜನೆ ರೀಚಾರ್ಜ್‌ ಮಾಡಿಸಲು ಯೋಗ್ಯವೇ?

ಎಸ್‌ಟಿಡಿ

ಹೌದು, ಬಿಎಸ್‌ಎನ್‌ಎಲ್‌ ಟೆಲಿಕಾಂ ಭಿನ್ನ ಪ್ರೈಸ್‌ ಟ್ಯಾಗ್‌ಗಳಲ್ಲಿ ಪ್ರಿಪೇಯ್ಡ್‌ ಯೋಜನೆಗಳ ಆಯ್ಕೆ ಹೊಂದಿದೆ. ಆ ಪೈಕಿ ಬಿಎಸ್‌ಎನ್‌ಎಲ್‌ 247ರೂ. ಆಲ್ ಇನ್ ಒನ್ ಪ್ರೀಪೇಯ್ಡ್‌ ಪ್ಲ್ಯಾನ್ (STV_247 ) ಸಹ ಒಂದಾಗಿದೆ. ಬಜೆಟ್ ದರದಲ್ಲಿ, ಲೋಕಲ್, ಎಸ್‌ಟಿಡಿ ವಾಯಿಸ್‌ ಕರೆ, ಡೇಟಾ ಬಯಸುವ ಚಂದಾದಾರರಿಗೆ ಈ ಯೋಜನೆಯು ಯೋಗ್ಯ ಎನಿಸಲಿದೆ. ಈ ಪ್ಲ್ಯಾನಿನಲ್ಲಿ ಚಂದಾದಾರರಿಗೆ ಪ್ರತಿದಿನ ಎಸ್‌ಎಮ್‌ಎಸ್‌ ಪ್ರಯೋಜನ ದೊರೆಯಲಿದೆ ಹಾಗೂ ಅಧಿಕ ವ್ಯಾಲಿಡಿಟಿಯ ಸೌಲಭ್ಯವು ಲಭ್ಯವಾಗಲಿದೆ. ಹಾಗಾದರೇ ಬಿಎಸ್‌ಎನ್‌ಎಲ್‌ನ 247ರೂ. ಪ್ರೀಪೇಯ್ಡ್‌ ಯೋಜನೆ ಇತರೆ ಪ್ರಯೋಜನಗಳೇನು? ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್‌ 247ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ 247ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ 247ರೂ. ಪ್ರೀಪೇಯ್ಡ್‌ ಯೋಜನೆಯಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಆಗಲಿದೆ. ಇದರೊಂದಿಗೆ ಲೋಕಲ್ ಹಾಗೂ ಎಸ್‌ಟಿಡಿ ವಾಯಿಸ್‌ ಕರೆಗಳ ಪ್ರಯೋಜನ ಸಿಗಲಿದೆ. ಹಾಗೆಯೇ ಒಟ್ಟಾರೇ 50 GB ಹೈ ಸ್ಪೀಡ್‌ ಡೇಟಾ ಪ್ರಯೋಜನ ಸಹ ದೊರೆಯುತ್ತದೆ. ನಿಗದಿತ ಡೇಟಾ ಮುಗಿದ ಬಳಿಕ 80 Kbps ವೇಗದಲ್ಲಿ ಇಂಟರ್ನೆಟ್ ಮುಂದುವರೆಯಲಿದೆ. ಇನ್ನು ಈ ಯೋಜನೆಯು 30 ದಿನಗಳ ವ್ಯಾಲಿಡಿಟಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಈ ಯೋಜನೆಯು ಬಿಎಸ್‌ಎನ್‌ಎಲ್‌ ಟ್ಯೂನ್‌ಗಳಿಗೆ ಪ್ರವೇಶವನ್ನು ನೀಡುತ್ತದೆ ಮತ್ತು Eros Now ಓಟಿಟಿ ಪ್ಲಾಟ್‌ಫಾರ್ಮ್‌ಗೆ ಚಂದಾದಾರಿಕೆಯನ್ನು ನೀಡುತ್ತದೆ.

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಯೋಜನೆಯಲ್ಲಿ ಪ್ರತಿದಿನ 5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್‌ 499ರೂ. ಪ್ರಿಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ 499ರೂ. ಪ್ರಿಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ನ ಈ SVT 499ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್‌ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್‌ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್‌ 184ರೂ. ಯೋಜನೆಯ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 184ರೂ. ಯೋಜನೆಯ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ ಟೆಲಿಕಾಂನ 184ರೂ. ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 1GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್‌ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ Lystn ಪಾಡ್‌ಕ್ಯಾಸ್ಟ್‌ನ ಹೆಚ್ಚುವರಿ ಸಿಗಲಿದೆ.

ಬಿಎಸ್‌ಎನ್‌ಎಲ್‌ 185ರೂ. ಯೋಜನೆಯ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 185ರೂ. ಯೋಜನೆಯ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ ಟೆಲಿಕಾಂನ 185ರೂ. ಯೋಜನೆಯು ಸಹ 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 1GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್‌ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ ಗ್ರಾಹಕರು M/S ಆನ್‌ಮೊಬೈಲ್ ಗ್ಲೋಬಲ್ ಲಿಮಿಟೆಡ್ ಮತ್ತು ಬಿಎಸ್‌ಎನ್‌ಎಲ್‌ ಟ್ಯೂನ್ಸ್‌ನಿಂದ ಪ್ರೋಗ್ರೆಸ್ಸಿವ್ ವೆಬ್ APP (PWA) ನಲ್ಲಿ ಸವಾಲುಗಳ ಅರೆನಾ ಮೊಬೈಲ್ ಗೇಮಿಂಗ್ ಸೇವೆಯನ್ನು ಪಡೆಯುತ್ತಾರೆ.

ಬಿಎಸ್‌ಎನ್‌ಎಲ್‌ 186ರೂ. ಯೋಜನೆಯ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 186ರೂ. ಯೋಜನೆಯ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ ಟೆಲಿಕಾಂನ 186ರೂ. ಯೋಜನೆಯು ಸಹ 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 1GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್‌ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ ಹಾರ್ಡಿ ಗೇಮ್ಸ್ ಮತ್ತು BSNL ಟ್ಯೂನ್‌ಗಳ ಹೆಚ್ಚುವರಿ ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್‌ 347ರೂ. ಯೋಜನೆಯ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 347ರೂ. ಯೋಜನೆಯ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ ಟೆಲಿಕಾಂನ 347ರೂ. ಯೋಜನೆಯು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 2GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್‌ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ ಗ್ರಾಹಕರು M/S ಆನ್‌ಮೊಬೈಲ್ ಗ್ಲೋಬಲ್ ಲಿಮಿಟೆಡ್ ಮತ್ತು ಬಿಎಸ್‌ಎನ್‌ಎಲ್‌ ಟ್ಯೂನ್ಸ್‌ನಿಂದ ಪ್ರೋಗ್ರೆಸ್ಸಿವ್ ವೆಬ್ APP (PWA) ನಲ್ಲಿ ಸವಾಲುಗಳ ಅರೆನಾ ಮೊಬೈಲ್ ಗೇಮಿಂಗ್ ಸೇವೆಯನ್ನು ಪಡೆಯುತ್ತಾರೆ.

ಬಿಎಸ್‌ಎನ್‌ಎಲ್‌ 2399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 2399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 2399ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದೆ. ಈ ಯೋಜನೆಯು ಒಟ್ಟು 425 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವು ದೊರೆಯಲಿದೆ. ಹಾಗೆಯೇ ಮುಂಬೈ ಮತ್ತು ದೆಹಲಿ ಎಮ್‌ಟಿಎನ್‌ಎಲ್‌ ಬಳಕೆದಾರರಗೆ ಅನಿಯಮಿತ ಸಾಂಗ್ ಚೇಂಜ್ ಹಾಗೂ EROS ಚಂದಾದಾರಿಕೆ ಸಹ ಲಭ್ಯ ಆಗಲಿದೆ.

Most Read Articles
Best Mobiles in India

English summary
This BSNL All in One Prepaid Plan Offers Data, Voice Call with Best Validity.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X