ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, ಒಂದು ವರ್ಷಕ್ಕಿಂತ ಅಧಿಕ ವ್ಯಾಲಿಡಿಟಿ ಪಕ್ಕಾ!
ಪ್ರಸ್ತುತ ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಪೈಪೋಟಿ ಹೆಚ್ಚಿದೆ. ಆ ಪೈಕಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ಖಾಸಗಿ ಟೆಲಿಕಾಂಗಳಿಗೆ ನೇರ ಫೈಟ್ ನೀಡುವ ಹೆಜ್ಜೆಗಳನ್ನು ಹಾಕುತ್ತ ಮುಂದೆ ಸಾಗಿದೆ. ಬಿಎಸ್‌ಎನ್‌ಎಲ್ ಭಿನ್ನ ಶ್ರೇಣಿಯ ಪ್ರಿಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳಲ್ಲಿ ಅಲ್ಪಾವಧಿಯ ಪ್ಲ್ಯಾನ್‌ಗಳ ಜೊತೆಗೆ ದೀರ್ಘಾವಧಿಯ ಯೋಜನೆಗಳು ಸೇರಿವೆ. ಆ ಪೈಕಿ ಬಿಎಸ್‌ಎನ್‌ಎಲ್ ಇದೀಗಈ ಒಂದು ಪ್ಲಾನ್ ಸಖತ್ ಟ್ರೆಂಡಿ ಎನಿಸಿದೆ.
ಹೌದು, ಬಿಎಸ್‌ಎನ್‌ಎಲ್ ಸಂಸ್ಥೆಯು ಹಲವು ದೀರ್ಘಾವಧಿ ಪ್ರಿಪೇಯ್ಡ್ ಪ್ಲಾನ್‌ಗಳ ಆಯ್ಕೆ ಹೊಂದಿದೆ. ಅವುಗಳಲ್ಲಿ ಬಿಎಸ್‌ಎನ್‌ಎಲ್‌ನ 2399ರೂ. ಬೆಲೆಯ ಪ್ರಿಪೇಯ್ಡ್ ಪ್ಲಾನ್ ಆಕರ್ಷಕ ಎನಿಸಿದೆ. ಈ ಯೋಜನೆಯು ವಾರ್ಷಿಕ ಅವಧಿಗಿಂತ ಹೆಚ್ಚಿನ ವ್ಯಾಲಿಡಿಟಿ ಪಡೆದಿದ್ದು, ಜೊತೆಗೆ ಅಧಿಕ ಡೇಟಾ ಪ್ರಯೋಜನ ಸಹ ಒಳಗೊಂಡಿದೆ. ಹಾಗಾದರೆ ಈ ಯೋಜನೆಯ ಒಟ್ಟಾರೇ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ 2399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ಬಿಎಸ್‌ಎನ್‌ಎಲ್ 2399ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದೆ. ಈ ಯೋಜನೆಯು ಹೆಚ್ಚುವರಿಯಾಗಿ 30 ದಿನಗಳ ವ್ಯಾಲಿಡಿಟಿಯನ್ನು ಪಡೆದಿದೆ. ಹೀಗಾಗಿ ಗ್ರಾಹಕರಿಗೆ ಒಟ್ಟು 395 ದಿನಗಳ ವ್ಯಾಲಿಡಿಟಿ ಸಿಗಲಿದೆ.
ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವು ದೊರೆಯಲಿದೆ. ಹಾಗೆಯೇ 30 ದಿನಗಳವರೆಗೆ ಉಚಿತ EROS Now ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ.

ಬಿಎಸ್‌ಎನ್‌ಎಲ್ 1198ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ಬಿಎಸ್‌ಎನ್‌ಎಲ್ 1198ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಪಡೆದಿದೆ. ಹಾಗೆಯೇ 300 ನಿಮಿಷಗಳ ಕಾಲಿಂಗ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಒಟ್ಟಾರೇ ಅವಧಿಗೆ 3GB ಡೇಟಾ ಹಾಗೂ 30 ಎಸ್‌ಎಮ್‌ಎಸ್ ಪ್ರಯೋಜನ ಪಡೆದಿದೆ.
ಬಿಎಸ್‌ಎನ್‌ಎಲ್ 499ರೂ. ಪ್ಲ್ಯಾನ್ ಪ್ರಯೋಜನಗಳು ಬಿಎಸ್‌ಎನ್‌ಎಲ್‌ನ ಈ SVT 499 ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 75 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1 GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 75 GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್ 447ರೂ. ಯೋಜನೆ ಪ್ರಯೋಜನಗಳು ಬಿಎಸ್‌ಎನ್‌ಎಲ್ STV 447 ರೂ. ಯೋಜನೆ 100GB ಹೈ ಸ್ಪೀಡ್ ಡೇಟಾವನ್ನು ನೀಡುತ್ತದೆ. 100GB ಡೇಟಾದ ನಿಗದಿತ ಮಿತಿಯನ್ನು ಮೀರಿ, ಬಳಕೆದಾರರು 80 Kbps ವೇಗದಲ್ಲಿ ಇಂಟರ್ನೆಟ್ ಅನ್ನು ಪ್ರವೇಶಿಸಬಹುದು. ಯೋಜನೆಯು 60 ಕ್ಯಾಲೆಂಡರ್ ದಿನಗಳ ಮಾನ್ಯತೆಯ ಅವಧಿಯೊಂದಿಗೆ ಬರುತ್ತದೆ ಮತ್ತು ಇದನ್ನು ವೆಬ್‌ಸೈಟ್‌ನಲ್ಲಿ 'ಡೇಟಾ ವೋಚರ್' ಅಡಿಯಲ್ಲಿ ನಮೂದಿಸಿದ್ದರೂ ಸಹ, ಇದು ದಿನಕ್ಕೆ 100 ಎಸ್‌ಎಮ್‌ಎಸ್ ಜೊತೆಗೆ ಅನಿಯಮಿತ ಧ್ವನಿ ಕರೆಯನ್ನು ನೀಡುತ್ತದೆ.
ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು ಬಿಎಸ್‌ಎನ್‌ಎಲ್ 599 ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 3 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಸಹ ಲಭ್ಯವಾಗಲಿದೆ.


Click it and Unblock the Notifications








