ಪ್ರತಿದಿನ 5GB ಡೇಟಾ ಗ್ಯಾರಂಟಿ!..ಈ ಪ್ಲ್ಯಾನ್ ಗ್ರಾಹಕರ ಗಮನ ಸೆಳೆದಿದೆ!
ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ (BSNL) ಟೆಲಿಕಾಂ ಸಂಸ್ಥೆಯು ತನ್ನ ಗ್ರಾಹಕರಿಗಾಗಿ ಹಲವು ಅತ್ಯುತ್ತಮ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದರಲ್ಲಿ ಕೆಲವು ಯೋಜನೆಗಳು ಅಧಿಕ ಡೇಟಾ ಮತ್ತು ವ್ಯಾಲಿಡಿಟಿ ಪ್ರಯೋಜನ ಪಡೆದಿದ್ದು, ನೇರವಾಗಿ ಖಾಸಗಿ ಟೆಲಿಕಾಂಗಳಿಗೆ ಸೆಡ್ಡು ಹೊಡೆಯುವಂತಿವೆ. ಆ ಪೈಕಿ ಬಿಎಸ್‌ಎನ್‌ಎಲ್‌ನ ಈ ಒಂದು ಪ್ರೀಪೇಯ್ಡ್ ಪ್ಲ್ಯಾನಿನ ಪ್ರಯೋಜನಗಳು ಗ್ರಾಹಕರು ಫುಲ್ ಫಿದಾ ಆಗುವಂತಿವೆ.
ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ ಹೆಚ್ಚಿನ ಪ್ರಯೋಜನ ಲಭ್ಯ. ಈ ಯೋಜನೆಯಲ್ಲಿ ಅಧಿಕ ದೈನಂದಿನ ಡೇಟಾ ಹಾಗೂ ಹೆಚ್ಚಿನ ವ್ಯಾಲಿಡಿಟಿ ಎರಡು ದೊರೆಯುತ್ತವೆ. ಹಾಗಾದರೆ ಬಿಎಸ್‌ಎನ್‌ಎಲ್ ಟೆಲಿಕಾಂನ 997ರೂ. ಪ್ರೀಪೇಯ್ಡ್ ಯೋಜನೆ ಇತರೆ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ಬಿಎಸ್‌ಎನ್‌ಎಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 769ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ಬಿಎಸ್‌ಎನ್‌ಎಲ್ ಟೆಲಿಕಾಂನ 769 ರೂ. ಪ್ಲ್ಯಾನ್, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಹೆಚ್ಚುವರಿಯಾಗಿ ಎರೋಸ್ ನೌ ಎಂಟರ್‌ಟೈನ್‌ಮೆಂಟ್, ಲಿಸ್ಟ್ನ್ ಪಾಡ್‌ಕ್ಯಾಸ್ಟ್ ಸೇವೆ ಗಳು ಲಭ್ಯ.

ಬಿಎಸ್‌ಎನ್‌ಎಲ್ 997ರೂ. ಪ್ಲ್ಯಾನ್ ಪ್ರಯೋಜನಗಳು : ಬಿಎಸ್‌ಎನ್‌ಎಲ್ ಟೆಲಿಕಾಂನ ಈ ಯೋಜನೆಯು ಒಟ್ಟು 160 ದಿನಗಳ ವ್ಯಾಲಿಡಿಟಿ ಪ್ರಯೋಜನವನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ಪ್ರತಿದಿನ 100 ಎಸ್ಎಮ್‌ಎಸ್ ಪ್ರಯೋಜನ ಸಹ ದೊರೆಯುತ್ತದೆ. ಅಲ್ಲದೇ ಹೆಚ್ಚುವರಿ ಎರಡು ತಿಂಗಳವರೆಗೆ ಉಚಿತ PRBT ಸೇವೆ ಮತ್ತು ಉಚಿತ ಲೋಕಧುನ್ ಸೇವೆ ಸಹ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 1198ರೂ. ರೀಚಾರ್ಜ್ ಪ್ಲ್ಯಾನ್ ಪ್ರಯೋಜನಗಳು : ಬಿಎಸ್‌ಎನ್‌ಎಲ್ ಟೆಲಿಕಾಂನ 1198ರೂ. ರೀಚಾರ್ಜ್ ಯೋಜನೆಯಲ್ಲಿ ಪ್ರತಿ ತಿಂಗಳು 3 GB ಡೇಟಾ, ಇದರೊಂದಿಗೆ ಪ್ರತಿ ತಿಂಗಳು 300 ನಿಮಿಷಗಳ ಉಚಿತ ವಾಯಿಸ್ ಕರೆ ಪ್ರಯೋಜನ ಲಭ್ಯವಿದೆ. ಇನ್ನು ಈ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ 36GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಮುಖ್ಯವಾಗಿ ಅಧಿಕ ವ್ಯಾಲಿಡಿಟಿ ನಿರೀಕ್ಷಿಸುವ ಗ್ರಾಹಕರಿಗೆ ಅತ್ಯುತ್ತಮ ಪ್ಲ್ಯಾನ್ ಎನಿಸುತ್ತದೆ.
ಬಿಎಸ್‌ಎನ್‌ಎಲ್ 269ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ಬಿಎಸ್‌ಎನ್‌ಎಲ್ ಟೆಲಿಕಾಂನ 269 ರೂ. ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, ಒಟ್ಟು 30 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಹೆಚ್ಚುವರಿ ಯಾಗಿ ಎರೋಸ್ ನೌ ಎಂಟರ್‌ಟೈನ್‌ಮೆಂಟ್, ಲಿಸ್ಟ್ನ್ ಪಾಡ್‌ಕ್ಯಾಸ್ಟ್ ಸೇವೆಗಳು ಲಭ್ಯ.


Click it and Unblock the Notifications








