ಜಸ್ಟ್ 3ರೂ.ಗೆ 1GB ಡೇಟಾ ಸಿಗುತ್ತೆ!..ಆದ್ರೆ ಇದು ಜಿಯೋ ಪ್ಲ್ಯಾನ್ ಅಲ್ಲವೇ ಅಲ್ಲ!
ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ಖಾಸಗಿ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುವಂತಹ ಕೆಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಕೆಲವೊಂದು ಪ್ರೀಪೇಯ್ಡ್ ಯೋಜನೆಗಳು ಅಧಿಕ ಡೇಟಾ ಸೌಲಭ್ಯವನ್ನು ಒಳಗೊಂಡಿದ್ದರೆ, ಮತ್ತೆ ಕೆಲವು ಪ್ರೀಪೇಯ್ಡ್ ಯೋಜನೆಗಳು ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಪಡೆದಿವೆ. ಇನ್ನೂ ಕೆಲವು ಯೋಜನೆಗಳು ಡೇಟಾ ಹಾಗೂ ವ್ಯಾಲಿಡಿಟಿ ಎರಡನ್ನು ಒಳಗೊಂಡಿವೆ. ಆ ಪೈಕಿ ಬಿಎಸ್‌ಎನ್‌ಎಲ್‌ನ ಈ ಒಂದು ಪ್ಲ್ಯಾನಿನಲ್ಲಿ 1GB ಡೇಟಾ, ಜಸ್ಟ್ 3ರೂ. ಗೆ ಲಭ್ಯ ಆಗಲಿದೆ.!

ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂ (BSNL) ಭಿನ್ನ ದರ ಶ್ರೇಣಿಯಲ್ಲಿ ಕೆಲವೊಂದು ಅತ್ಯುತ್ತಮ ಪ್ರೀಪೇಯ್ಡ್ ಯೋಜನೆಗಳನ್ನು ಒಳಗೊಂಡಿವೆ. ಅವುಗಳಲ್ಲಿ ಬಿಎಸ್‌ಎನ್‌ಎಲ್ 347ರೂ. ಪ್ರೀಪೇಯ್ಡ್ ಯೋಜನೆಯು ಬಜೆಟ್ ಬೆಲೆಯಲ್ಲಿ ದೈನಂದಿನ ಡೇಟಾ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಬಯಸುವ ಗ್ರಾಹಕರನ್ನು ಸೆಳೆಯುವಂತಿದೆ. ಮುಖ್ಯವಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 1GB ಡೇಟಾಗೆ ಕೇವಲ 3ರೂ. ವೆಚ್ಚ ತಗಲುತ್ತದೆ. ಡೇಟಾ ಜೊತೆಗೆ ವಾಯಿಸ್ ಕರೆ, ಎಸ್‌ಎಮ್‌ಎಸ್ ಪ್ರಯೋಜನಗಳು ಲಭ್ಯ. ಹಾಗಾದರೇ ಬಿಎಸ್‌ಎನ್‌ಎಲ್ 347ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

1GB ಡೇಟಾ ಬೆಲೆ ಜಸ್ಟ್ 3ರೂ. ಮಾತ್ರ!
ಬಿಎಸ್‌ಎನ್‌ಎಲ್ ಟೆಲಿಕಾಂನ 347ರೂ. ಪ್ರೀಪೇಯ್ಡ್ ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಸೌಲಭ್ಯವನ್ನು ಪಡೆದಿದ್ದು, ಪ್ರತಿದಿನ 2GB ಡೇಟಾ ಪ್ರಯೋಜನ ನೀಡುತ್ತದೆ. ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 112GB ಡೇಟಾ ಪ್ರಯೋಜನ ನೀಡುತ್ತದೆ. ಈ ಡೇಟಾ ಸೌಲಭ್ಯದಲ್ಲಿ 1GB ಡೇಟಾಗೆ ತಗಲುವ ಶುಲ್ಕ ಎಷ್ಟು ಎಂದು ಲೆಕ್ಕಾಚಾರ ಮಾಡಿ ನೋಡಿದಾಗ, 1GB ಡೇಟಾ ಬೆಲೆ ಜಸ್ಟ್ 3ರೂ. ಆಗುತ್ತದೆ. ಹೀಗಾಗಿ ಈ ಯೋಜನೆ ಆಕರ್ಷಕ ಎನಿಸಿದೆ.

ಬಿಎಸ್‌ಎನ್‌ಎಲ್ 347ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 347ರೂ. ಯೋಜನೆಯು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 2GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ ಗ್ರಾಹಕರು M/S ಆನ್‌ಮೊಬೈಲ್ ಗ್ಲೋಬಲ್ ಲಿಮಿಟೆಡ್ ಮತ್ತು ಬಿಎಸ್‌ಎನ್‌ಎಲ್ ಟ್ಯೂನ್ಸ್‌ನಿಂದ ಪ್ರೋಗ್ರೆಸ್ಸಿವ್ ವೆಬ್ APP (PWA) ನಲ್ಲಿ ಸವಾಲುಗಳ ಅರೆನಾ ಮೊಬೈಲ್ ಗೇಮಿಂಗ್ ಸೇವೆಯನ್ನು ಪಡೆಯುತ್ತಾರೆ.

ಬಿಎಸ್‌ಎನ್‌ಎಲ್ 184ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 184ರೂ. ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 1GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ Lystn ಪಾಡ್‌ಕ್ಯಾಸ್ಟ್‌ನ ಹೆಚ್ಚುವರಿ ಸಿಗಲಿದೆ.

ಬಿಎಸ್‌ಎನ್‌ಎಲ್ 185ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 185ರೂ. ಯೋಜನೆಯು ಸಹ 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 1GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ ಗ್ರಾಹಕರು M/S ಆನ್‌ಮೊಬೈಲ್ ಗ್ಲೋಬಲ್ ಲಿಮಿಟೆಡ್ ಮತ್ತು ಬಿಎಸ್‌ಎನ್‌ಎಲ್ ಟ್ಯೂನ್ಸ್‌ನಿಂದ ಪ್ರೋಗ್ರೆಸ್ಸಿವ್ ವೆಬ್ APP (PWA) ನಲ್ಲಿ ಸವಾಲುಗಳ ಅರೆನಾ ಮೊಬೈಲ್ ಗೇಮಿಂಗ್ ಸೇವೆಯನ್ನು ಪಡೆಯುತ್ತಾರೆ.

ಬಿಎಸ್‌ಎನ್‌ಎಲ್ 186ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 186ರೂ. ಯೋಜನೆಯು ಸಹ 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 1GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ ಹಾರ್ಡಿ ಗೇಮ್ಸ್ ಮತ್ತು BSNL ಟ್ಯೂನ್‌ಗಳ ಹೆಚ್ಚುವರಿ ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್ 187ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 187ರೂ. ಯೋಜನೆಯು ಸಹ 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 2GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ.

ಬಿಎಸ್‌ಎನ್‌ಎಲ್ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್‌ನ ಈ SVT 499 ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180 GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್ 2399ರೂ. ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ 2399ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದೆ. ಈ ಯೋಜನೆಯು ಇದೀಗ ಹೆಚ್ಚುವರಿಯಾಗಿ 60 ದಿನಗಳ ವ್ಯಾಲಿಡಿಟಿಯನ್ನು ಪಡೆದಿದೆ. ಹೀಗಾಗಿ ಒಟ್ಟು 425 ದಿನಗಳ ವ್ಯಾಲಿಡಿಟಿ ಸಿಗಲಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವು ದೊರೆಯಲಿದೆ. ಹಾಗೆಯೇ ಮುಂಬೈ ಮತ್ತು ದೆಹಲಿ ಎಮ್‌ಟಿಎನ್‌ಎಲ್ ಬಳಕೆದಾರರಗೆ ಅನಿಯಮಿತ ಸಾಂಗ್ ಚೇಂಜ್ ಹಾಗೂ EROS ಚಂದಾದಾರಿಕೆ ಸಹ ಲಭ್ಯ ಆಗಲಿದೆ.


Click it and Unblock the Notifications








