ಜಿಯೋ ಗ್ರಾಹಕರೇ 399ರೂ. ರೀಚಾರ್ಜ್‌ ಮಾಡ್ಸಿದ್ರೆ, ಈ ಎಲ್ಲ ಪ್ರಯೋಜನ ಉಚಿತ!

|

ದೇಶದ ಟೆಲಿಕಾಂ ಪೂರೈಕೆದಾರ ಸಂಸ್ಥೆಗಳು ಪ್ರೀಪೇಯ್ಡ್‌ ಯೋಜನೆಗಳಂತೆ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳಲ್ಲಿಯೂ ಆಕರ್ಷಕ ಪ್ರಯೋಜನಗಳನ್ನು ನೀಡಿ ಸೈ ಎನಿಸಿಕೊಂಡಿವೆ. ಈ ನಿಟ್ಟಿನಲ್ಲಿ ರಿಲಯನ್ಸ್‌ ಜಿಯೋ ಟೆಲಿಕಾಂ ಭಿನ್ನ ಶ್ರೇಣಿಯ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳ ಆಯ್ಕೆಗಳನ್ನು ತನ್ನ ಗ್ರಾಹಕರಿಗೆ ಒದಗಿಸಿದೆ. ಆ ಪೈಕಿ ಜಿಯೋ ಟೆಲಿಕಾಂನ ಆರಂಭಿಕ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ವೊಂದು ಗ್ರಾಹಕರ ಗಮನ ಸೆಳೆದಿದೆ.

ಜಿಯೋ ಟೆಲಿಕಾಂನ ಜಿಯೋ 399ರೂ. ಪ್ಲ್ಯಾನ್‌

ಹೌದು, ಜಿಯೋ ಟೆಲಿಕಾಂನ ಜಿಯೋ 399ರೂ. ಪ್ಲ್ಯಾನ್‌ ಆಕರ್ಷಕ ಎನಿಸಿದ್ದು, ಇದು ಆರಂಭಿಕ ಪೋಸ್ಟ್‌ಪೇಯ್ಡ್‌ ಯೋಜನೆ ಆಗಿದೆ. ಇನ್ನು ಈ ಯೋಜನೆಯು ಅನಿಯಮಿತ ಡೇಟಾ ಪ್ರಯೋಜನದ ಜೊತೆಗೆ ಉಚಿತ ಓಟಿಟಿ ಚಂದಾದಾರಿಕೆಯ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಡೇಟಾ ರೋಲ್‌ ಓವರ್‌ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯವನ್ನು ಪಡೆದಿದೆ. ಹಾಗಾದರೆ ಜಿಯೋದ 399ರೂ ಪೋಸ್ಟ್‌ಪೇಯ್ಡ್‌ ಪ್ಲ್ಯಾನಿನ ಒಟ್ಟಾರೆ ಪ್ರಯೋಜನಗಳೆನು ಹಾಗೂ ಇತರೆ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳ ಬಗ್ಗೆ ಮಾಹಿತಿಯನ್ನು ಮುಂದೆ ನೋಡೋಣ ಬನ್ನಿರಿ.

ಜಿಯೋ 399ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ 399ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ 399ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 75 GB ಡೇಟಾದೊಂದಿಗೆ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಈ ಪೋಸ್ಟ್‌ಪೇಯ್ಡ್ ಪ್ಲ್ಯಾನಿನಲ್ಲಿ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ ಮತ್ತು ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯವಾಗಲಿದೆ.

ನೆಟ್‌ಫ್ಲಿಕ್ಸ್‌

ಹಾಗೆಯೇ ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌, ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸಿಗಲಿದೆ. ಇದಲ್ಲದೆ, ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಹಾಗೂ ಅನ್‌ಲಿಮಿಟೆಡ್‌ ಕಾಲರ್‌ ಟ್ಯೂನ್‌ ಸೌಲಭ್ಯಗಳು ಲಭ್ಯವಾಗಲಿವೆ.

ಜಿಯೋ 599ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ 599ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ 599ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 100 GB ಡೇಟಾದೊಂದಿಗೆ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಕಳುಹಿಸುವ ಅವಕಾಶವು ಸಿಗಲಿದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ ಮತ್ತು ಹೆಚ್ಚುವರಿ ಒಂದು ಸಿಮ್ ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ನಿಗದಿತ ಉಚಿತ ಡೇಟಾ ಖಾಲಿ ಆದ ಬಳಿಕ ಪ್ರತಿ 1GB ಗೆ 10ರೂ, ಶುಲ್ಕ ವೆಚ್ಚವಾಗಲಿದೆ.

ಚಂದಾದಾರಿಕೆ

ಇನ್ನುಳಿದಂತೆ ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌ ಚಂದಾದಾರಿಕೆ, ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸಿಗಲಿದೆ. ಇದಲ್ಲದೆ, ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಹಾಗೂ ಅನ್‌ಲಿಮಿಟೆಡ್‌ ಕಾಲರ್‌ ಟ್ಯೂನ್‌ ಸೌಲಭ್ಯಗಳು ಲಭ್ಯವಾಗಲಿವೆ.

ಜಿಯೋ 799ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ 799ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ 799ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 150 GB ಡೇಟಾದೊಂದಿಗೆ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಗ್ರಾಹಕರಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಕಳುಹಿಸುವ ಅವಕಾಶವು ಸಿಗಲಿದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ 200 GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ ಮತ್ತು ಹೆಚ್ಚುವರಿ ಎರಡು ಸಿಮ್ ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ. ನಿಗದಿತ ಉಚಿತ ಡೇಟಾ ಖಾಲಿ ಆದ ಬಳಿಕ ಪ್ರತಿ 1GB ಗೆ 10ರೂ, ಶುಲ್ಕ ವೆಚ್ಚವಾಗಲಿದೆ.

ಪೋಸ್ಟ್‌ಪೇಯ್ಡ್

ಇದರೊಂದಿಗೆ ಈ ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಹೆಚ್ಚುವರಿಯಾಗಿ ಗ್ರಾಹಕರಿಗೆ ನೆಟ್‌ಫ್ಲಿಕ್ಸ್‌ ಚಂದಾದಾರಿಕೆ, ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸಿಗಲಿದೆ. ಇದಲ್ಲದೆ, ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಹಾಗೂ ಅನ್‌ಲಿಮಿಟೆಡ್‌ ಕಾಲರ್‌ ಟ್ಯೂನ್‌ ಸೌಲಭ್ಯಗಳು ಲಭ್ಯವಾಗಲಿವೆ.

Best Mobiles in India

English summary
This Entry Level Jio Postpaid Plan Offers Best Data and Other benefits.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X