ಈ ಎಂಟ್ರಿ ಲೆವೆಲ್ ಫೋನಿಗೆ ಈಗ ಬಿಗ್ ಡಿಸ್ಕೌಂಟ್!..ಗ್ರಾಹಕರು ಫುಲ್ ಖುಷ್!
ರಿಯಲ್‌ಮಿ ಕೆಲವು ಎಂಟ್ರಿ ಲೆವೆಲ್ ಮಾದರಿಯ ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಆಕರ್ಷಿಸಿದೆ. ಸಂಸ್ಥೆಯ ಅಂತಹ ಫೋನ್‌ಗಳ ಪೈಕಿ ರಿಯಲ್‌ಮಿ ನಾರ್ಜೊ 50i ಪ್ರೈಮ್ ಮೊಬೈಲ್ ಸಹ ಸೇರಿದೆ. ಇ ಕಾಮರ್ಸ್ ದಿಗ್ಗಜ ಅಮೆಜಾನ್ ತಾಣದಲ್ಲಿ ಈ ಫೋನ್ ಇದೀಗ ಭಾರೀ ಡಿಸ್ಕೌಂಟ್ ಪಡೆದುಕೊಂಡಿದೆ.
ಹೌದು, ರಿಯಲ್‌ಮಿ ಸ್ಮಾರ್ಟ್‌ಫೋನ್ ಕಂಪೆನಿ ತನ್ನ ರಿಯಲ್‌ಮಿ ನಾರ್ಜೊ 50i ಪ್ರೈಮ್ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಶೇ. 20% ರಷ್ಟು ರಿಯಾಯಿತಿ ಮಾಡಿದೆ. ಈ ಮೊಬೈಲ್‌ನ 4 GB RAM + 64 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 7,945ರೂ. ಗಳ ಬೆಲೆಗೆ ಖರೀದಿಗೆ ಲಭ್ಯ. ಇದರೊಂದಿಗೆ ಗ್ರಾಹಕರು ಅಮೆಜಾನ್ ತಾಣದಲ್ಲಿ ಲಭ್ಯ ಇರುವ ಇತರೆ ಕೊಡುಗೆ ಸಹ ಪಡೆದುಕೊಳ್ಳಬಹುದು.

ಅಂದಹಾಗೆ ಈ ಅಗ್ಗದ ಫೋನ್ ಯುನಿಸೋಕ್ 9863 SoC ಪ್ರೊಸೆಸರ್ ಬಲ ಒಳಗೊಂಡಿದ್ದು, ಸಿಂಗಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಹಾಗೆಯೇ ಇದು 5,000mAh ಸಾಮರ್ಥ್ಯದ ಬ್ಯಾಕ್‌ಅಪ್ ಬ್ಯಾಕ್‌ಅಪ್ ಕೂಡಾ ಪಡೆದುಕೊಂಡಿದೆ. ಹಾಗಾದರೇ ರಿಯಲ್‌ಮಿ ನಾರ್ಜೊ 50i ಪ್ರೈಮ್ ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಡಿಸೈನ್ ಮತ್ತು ಪ್ರೊಸೆಸರ್ ಪವರ್ ಮಾಹಿತಿ
ರಿಯಲ್‌ಮಿ ಸಂಸ್ಥೆಯ ನಾರ್ಜೊ 50i ಮೊಬೈಲ್ 6.5 ಇಂಚಿನ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಇದು ಯುನಿಸೋಕ್ T612 SoC ಪ್ರೊಸೆಸರ್ ಸಾಮರ್ಥ್ಯ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಬೆಂಬಲದೊಂದಿಗೆ ಕೆಲಸ ನಿರ್ವಹಿಸುತ್ತದೆ.

ಹಾಗೆಯೇ ರಿಯಲ್‌ಮಿ ನಾರ್ಜೊ 50i ಪ್ರೈಮ್ ಮೊಬೈಲ್ 4GB RAM ಮತ್ತು 64 GB ಆಂತರೀಕ ಸ್ಟೋರೇಜ್ ಸಾಮರ್ಥ್ಯ ಅನ್ನು ಒಳಗೊಂಡಿದೆ. ಇದರ ಜೊತೆಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ಅನ್ನು 1TB ವರೆಗೂ ಸಹ ಹೆಚ್ಚಿಸುವ ಆಯ್ಕೆ ನೀಡಿದೆ. ಅಲ್ಲದೇ ಗೇಮಿಂಗ್ ಹಾಗೂ ಮಲ್ಟಿ ಟಾಸ್ಕಿಂಗ್ ಕೆಲಸಗಳಿಗೆ ಈ ಪ್ರೊಸೆಸರ್ ಬೆಂಬಲ ಆಗಿದೆ.
ಕ್ಯಾಮೆರಾ ಸೆನ್ಸಾರ್ ಮತ್ತು ಬ್ಯಾಟರಿ ಬ್ಯಾಕ್‌ಅಪ್
ರಿಯಲ್‌ಮಿ ಕಂಪನಿಯ ಈ ಎಂಟ್ರಿ ಲೆವೆಲ್ ಮೊಬೈಲ್ ಹಿಂಬದಿಯಲ್ಲಿ ಸಿಂಗಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಅದು 8 ಮೆಗಾ ಪಿಕ್ಸೆಲ್ AI ಸೆನ್ಸಾರ್ ಅನ್ನು ಪಡೆದಿದೆ. ಅಲ್ಲದೆ ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾ ಅನ್ನು ನೀಡಲಾಗಿದೆ.

ಇದರ ಜತೆಗೆ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದು 43 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ಒದಗಿಸಲಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ಕೂಡಾ ಹೊಂದಿರುವುದು ಪ್ರಮುಖ ಹೈಲೈಟ್ ಆಗಿದೆ.
ಮೆಮೊರಿ ಆಯ್ಕೆ ಹಾಗೂ ಕಲರ್ ಆಯ್ಕೆ ಮಾಹಿತಿ
ಅಂದಹಾಗೆ ರಿಯಲ್‌ಮಿ ನಾರ್ಜೊ 50i ಪ್ರೈಮ್ ಸ್ಮಾರ್ಟ್ ಫೋನ್ ಎರಡು ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದ್ದು, ಅವುಗಳು ಕ್ರಮವಾಗಿ 3 GB RAM + 32GB ಸ್ಟೋರೇಜ್ ವೇರಿಯಂಟ್ ಹಾಗೂ 4GB RAM + 64GB ಸ್ಟೋರೇಜ್ ವೇರಿಯಂಟ್ ಆಯ್ಕೆ ಆಗಿವೆ. ಇನ್ನು ಈ ಮೊಬೈಲ್ ಫೋನ್ ಮಿಂಟ್ ಗ್ರೀನ್ ಕಾರ್ಬನ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ ಇದೆ.


Click it and Unblock the Notifications








