ಪದೇ ಪದೇ ರೀಚಾರ್ಜ್ ಮಾಡೋದು ಬೇಡವಾದ್ರೆ, ಈ ಪ್ಲ್ಯಾನ್ ಅನುಕೂಲ!
ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂ ಸಂಸ್ಥೆಗಳು ಆಕರ್ಷಕ ಪ್ರಿಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆ ಹೊಂದಿವೆ. ಕೆಲವೊಂದು ಯೋಜನೆಗಳು ಅಧಿಕ ಪ್ರಯೋಜನಗಳನ್ನು ಪಡೆದಿದ್ದು, ಚಂದಾದಾರರನ್ನು ಆಕರ್ಷಿಸಿವೆ. ಆ ಪೈಕಿ ಅಧಿಕ ವ್ಯಾಲಿಡಿಟಿ ಸೌಲಭ್ಯದ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಪಡೆದ ಪ್ರಿಪೇಯ್ಡ್ ಪ್ಲ್ಯಾನ್‌ಗಳು ಹೆಚ್ಚು ಡಿಮ್ಯಾಂಡ್ ಪಡೆದಿವೆ. ಈ ಪ್ಲ್ಯಾನ್‌ಗಳು ಒಮ್ಮೆ ರೀಚಾರ್ಜ್ ಮಾಡಿದರೇ ಪದೇ ಪದೇ ರೀಚಾರ್ಜ್ ಮಾಡುವ ಅಗತ್ಯ ಇರಲ್ಲ.
ಹೌದು, ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ವಾರ್ಷಿಕ ವ್ಯಾಲಿಡಿಟಿಯ ಪ್ಲ್ಯಾನ್ ಗಳ ಆಯ್ಕೆ ಹೊಂದಿವೆ. ಆ ಪೈಕಿ ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ದೀರ್ಘಾವಧಿಗೆ ಅತ್ಯುತ್ತಮ ಪ್ಲ್ಯಾನ್ ಎನಿಸಿಕೊಂಡಿದೆ. ಈ ಯೋಜನೆಯು ಅಧಿಕ ದೈನಂದಿನ ಡೇಟಾ, ಅನಿಯಮಿತ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಪ್ರಯೋಜನ ಒಳಗೊಂಡಿದೆ. ಹಾಗಾದರೇ ವಿ 3099ರೂ. ಯೋಜನೆಯ ಒಟ್ಟಾರೇ ಪ್ರಯೋಜನಗಳೇನು?..ಇತರೆ ಪ್ಲ್ಯಾನ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ವಿ ಟೆಲಿಕಾಂನ 3099 ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು : ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಈ ಪ್ಲ್ಯಾನ್ 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹಾಗೆಯೇ ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ.
ವಿ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 730 GB ಡೇಟಾ ಪ್ರಯೋಜನ ಸಿಗಲಿದ್ದು, ಜೊತೆಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು : ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.
ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಗ್ರಾಹಕರಿಗೆ 50 GB ಡೇಟಾ ಪ್ರಯೋಜನ ಸಿಗಲಿದೆ.
ಜಿಯೋದ 1066ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು : ಜಿಯೋ ಟೆಲಿಕಾಂನ 1066ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.


Click it and Unblock the Notifications








