Home
ಸುದ್ದಿಜಾಲ

Jio ಬಳಕೆದಾರರಿಗೆ ಇಲ್ಲಿದೆ ನೋಡಿ ಸಖತ್‌ ರೀಚಾರ್ಜ್‌ ಪ್ಲ್ಯಾನ್‌ಗಳ ಆಯ್ಕೆ!

ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ ಟೆಲಿಕಾಂ ಈಗಾಗಲೇ ಬೊಂಬಾಟ್‌ ಪ್ಲ್ಯಾನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸಬ್ಬರಿಸಿದೆ. ಆ ಪೈಕಿ ಜಿಯೋ ಟೆಲಿಕಾಂನ ಬಹುತೇಕ ರೀಚಾರ್ಜ್‌ ಪ್ಲ್ಯಾನ್‌ಗಳು ಅನಿಯಮಿತ ವಾಯಿಸ್ ಕರೆ, ದೈನಂದಿನ ಡೇಟಾ ಸೌಲಭ್ಯ ಪಡೆದುಕೊಂಡಿವೆ. ಅದೇ ರೀತಿ ಜಿಯೋ ಸಂಸ್ಥೆಯು ತನ್ನ ಜಿಯೋ ಫೋನ್‌ (JioPhone) ಗ್ರಾಹಕರಿಗಾಗಿ ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಕೆಲವು ಅತ್ಯುತ್ತಮ ಯೋಜನೆಗಳ ಆಯ್ಕೆ ನೀಡಿದೆ. ಅವುಗಳ ಪೈಕಿ 895ರೂ. ಪ್ಲ್ಯಾನ್‌ ವ್ಯಾಲಿಡಿಟಿಯಿಂದ ಸದ್ದು ಮಾಡಿದೆ.

ಹೌದು, ಜಿಯೋ ಟೆಲಿಕಾಂನ 895ರೂ. ರೀಚಾರ್ಜ್‌ ಪ್ಲ್ಯಾನ್‌ ದೀರ್ಘಾವಧಿಯ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಜಿಯೋ ಫೋನ್‌ (Jio Phone) ಬಳಕೆದಾರರಿಗೆ ಭರ್ಜರಿ ಉಪಯುಕ್ತ ಎನಸಿದೆ. ಗ್ರಾಹಕ ಸ್ನೇಹಿ ದರದ ಈ ಯೋಜನೆಯು ಆಕರ್ಷಕ ಪ್ರಯೋಜನಗಳನ್ನು ಪಡೆದಿದ್ದು, ಅನಿಯಮಿತ ವಾಯಿಸ್‌ ಕರೆ ಸೌಲಭ್ಯ, ಎಸ್‌ಎಮ್‌ಎಸ್‌ ಪ್ರಯೋಜನ ಸಹ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ ಈ 895ರೂ. ಪ್ಲ್ಯಾನಿನ ಹಾಗೂ ಇತರೆ ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

Jio ಬಳಕೆದಾರರಿಗೆ ಇಲ್ಲಿದೆ ನೋಡಿ ಸಖತ್‌ ರೀಚಾರ್ಜ್‌ ಪ್ಲ್ಯಾನ್‌ಗಳ ಆಯ್ಕೆ!

ಜಿಯೋ ಟೆಲಿಕಾಂನ 895ರೂ. ರೀಚಾರ್ಜ್‌ ಯೋಜನೆ

ಜಿಯೋ ಟೆಲಿಕಾಂನ 895ರೂ. ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 336 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು ಒಟ್ಟು 24GB ಡೇಟಾ ಸೌಲಭ್ಯಗಳು ಗ್ರಾಹಕರಿಗೆ ಪಡೆದಿದ್ದು, 28 ದಿನಗಳಿಗೆ 2GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಸಹ ಸಿಗುತ್ತದೆ. ಇದಲ್ಲದೇ ಪೂರ್ಣ ವ್ಯಾಲಿಡಿಟಿ ಅವಧಿಯಲ್ಲಿ 28 ದಿನಗಳಿಗೊಮ್ಮೆ 50 ಎಸ್‌ಎಮ್ಎಸ್‌ ಸೌಲಭ್ಯ ಲಭ್ಯ. ಈ ಯೋಜನೆಯು ಜಿಯೋ ಫೋನ್‌ ಬಳಕೆದಾರರಿಗೆ ಅನ್ವಯಿಸುತ್ತದೆ.

ಜಿಯೋ ಸಂಸ್ಥೆಯ 223ರೂ. ರೀಚಾರ್ಜ್‌ ಯೋಜನೆ

ಜಿಯೋ ಸಂಸ್ಥೆಯ 222 ರೂ. ರೀಚಾರ್ಜ್‌ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಪ್ಲ್ಯಾನಿನಲ್ಲಿ ಒಟ್ಟು 56 GB ಡೇಟಾ ಸೌಲಭ್ಯಗಳು ಗ್ರಾಹಕರಿಗೆ ದೊರೆಯಲಿದ್ದು, ಪ್ರತಿದಿನ 2GB ಡೇಟಾ ಸೌಲಭ್ಯ ಸಿಗಲಿದೆ. ಅಲ್ಲದೇ ಅನಿಯಮಿತ ಧ್ವನಿ ಕರೆಯ ಸೌಲಭ್ಯ ಸಹ ಸಿಗುತ್ತದೆ. ಇದಲ್ಲದೇ ಪ್ರತಿದಿನ 100 ಎಸ್‌ಎಮ್ಎಸ್‌ ಸೌಲಭ್ಯ ಲಭ್ಯ. ಈ ಯೋಜನೆಯು ಜಿಯೋ ಫೋನ್‌ ಬಳಕೆದಾರರಿಗೆ ಬಳಕೆದಾರರಿಗಾಗಿ.

ಜಿಯೋ ಸಂಸ್ಥೆಯ 186ರೂ. ರೀಚಾರ್ಜ್‌ ಯೋಜನೆ

ಜಿಯೋ ಸಂಸ್ಥೆಯ 186ರೂ. ರೀಚಾರ್ಜ್‌ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಪ್ಲ್ಯಾನಿನಲ್ಲಿ ಒಟ್ಟು 28 GB ಡೇಟಾ ಸೌಲಭ್ಯಗಳು ಗ್ರಾಹಕರಿಗೆ ದೊರೆಯಲಿದ್ದು, ಪ್ರತಿದಿನ 1GB ಡೇಟಾ ಸೌಲಭ್ಯ ಸಿಗಲಿದೆ. ಇದರೊಂದಿಗೆ ಅನಿಯಮಿತ ಧ್ವನಿ ಕರೆಯ ಪ್ರಯೋಜನ ಸಹ ಸಿಗುತ್ತದೆ. ಇದಲ್ಲದೇ ಪ್ರತಿದಿನ 100 ಎಸ್‌ಎಮ್ಎಸ್‌ ಸೌಲಭ್ಯ ಲಭ್ಯ. ಈ ರೀಚಾರ್ಜ್ ಪ್ಲ್ಯಾನ್‌ ಜಿಯೋ ಫೋನ್‌ ಬಳಕೆದಾರರಿಗೆ ಅನ್ವಯಿಸುತ್ತದೆ.

ಜಿಯೋ ಸಂಸ್ಥೆಯ 152ರೂ. ರೀಚಾರ್ಜ್‌ ಯೋಜನೆ

ಜಿಯೋ ಸಂಸ್ಥೆಯ 152ರೂ. ರೀಚಾರ್ಜ್‌ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಪ್ಲ್ಯಾನಿನಲ್ಲಿ ಒಟ್ಟು 14 GB ಡೇಟಾ ಸೌಲಭ್ಯಗಳು ಗ್ರಾಹಕರಿಗೆ ದೊರೆಯಲಿದ್ದು, ಪ್ರತಿದಿನ 0.5 GB ಡೇಟಾ ಸೌಲಭ್ಯ ಸಿಗಲಿದೆ. ಅದೇ ರೀತಿ ಅನಿಯಮಿತ ಧ್ವನಿ ಕರೆಯ ಸೌಲಭ್ಯ ಸಹ ಸಿಗುತ್ತದೆ. ಇದಲ್ಲದೇ ಪೂರ್ಣ ವ್ಯಾಲಿಡಿಟಿ ಅವಧಿಗೆ 300 ಎಸ್‌ಎಮ್ಎಸ್‌ ಸೌಲಭ್ಯ ಲಭ್ಯ. ಈ ರೀಚಾರ್ಜ್ ಯೋಜನೆಯು ಜಿಯೋ ಫೋನ್‌ ಬಳಕೆದಾರರಿಗಾಗಿ.

Best Mobiles in India

English summary
This is the Best Recharge Plan for Jio Phone Users. check benefits and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+