ಪುನೀತ್ ರಾಜ್‌ಕುಮಾರ್ ಮಾಡಿದ ಕೊನೆಯ ಟ್ವೀಟ್ ಇಲ್ಲಿದೆ ನೋಡಿ!
ಕನ್ನಡ ಚಿತ್ರರಂಗದ ಪವರ್‌ಸ್ಟಾರ್ ಖ್ಯಾತಿಯ ನಟ ಪುನೀತ್ ರಾಜ್‌ಕುಮಾರ್ ಅವರು ಹೃದಯಾಘಾತದಿಂದ ಬಾರದ ಲೋಕಕ್ಕೆ ಹೋಗಿದ್ದಾರೆ. ಡಾ.ರಾಜ್‌ಕುಮಾರ್ ಅವರಂತೆ ತಾವೂ ಕೂಡ ನೇತ್ರದಾನ ಮಾಡುವ ಮೂಲಕ ಪುನೀತ್ ರಾಜ್‌ಕುಮಾರ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ರಾಜ್‌ಕುಮಾರ್ ಸಾವು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಲಕ್ಷಾಂತರ ಅಭಿಮಾನಿಗಳಿಗೆ ನಿಜಕ್ಕೂ ಆಘಾತ ಮೂಡಿಸಿದೆ.

ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕೀಯ ಗಣ್ಯರು, ಕ್ರಿಕೆಟ್ ಆಟಗಾರರು ನುಡಿ ನಮನ ಸಲ್ಲಿಸಿದ್ದಾರೆ. ಅವರ ಅಪಾರ ಅಭಿಮಾನಿಗಳು ಸಹ ಅಪ್ಪು ಅವರ ಮೇಲಿನ ಪ್ರೀತಿಯನ್ನು ಭಾವುಕತೆಯ ಮೂಲಕ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಇಂದು ಶಿವರಾಜ್‌ಕುಮಾರ್ ನಟನೆಯ ಭಜರಂಗಿ 2 ಸಿನಿಮಾ ಬಿಡುಗಡೆ ಆಗಿದೆ. ಪುನೀತ್ ರಾಜ್‌ಕುಮಾರ್ ಇಂದು (ಅ.29) ಮುಂಜಾನೆ 7:33ಕ್ಕೆ 'ಭಜರಂಗಿ 2' ಸಿನಿಮಾ ತಂಡಕ್ಕೆ ಶುಭಾಶಯ ಕೋರಿ ಟ್ವಿಟ್ ಮಾಡಿದ್ದರು. ಅಣ್ಣನ ಸಿನಿಮಾಗೆ ಶುಭ ಕೋರಿದ್ದೆ ಅವರ ಕೊನೆಯ ಟ್ವಿಟ್ ಆಗಿ ಉಳಿಯುತ್ತೆ ಅಂತಾ ಯಾರೂ ಊಹಿಸಿರಲಿಲ್ಲ. ಈ ಟ್ವೀಟ್ ನಲ್ಲಿ ಭಜರಂಗಿ 2 ಸಿನಿಮಾದ ನಟ ಶಿವರಾಜ್‌ಕುಮಾರ್, ನಿರ್ದೇಶಕ ಎ.ಹರ್ಷಾ, ಜಯಣ್ಣ ಅವರನ್ನು ಟ್ಯಾಗ್ ಮಾಡಿದ್ದರು. ಪುನೀತ್ ರಾಜ್‌ಕುಮಾರ್ ಸಾವು ಕನ್ನಡ ಚಿತ್ರರಂಗಕ್ಕೆ ಬರಸಿಡಿಲಿನಂತೆ ಎಗರಿದೆ.
ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಗಣ್ಯರ ಸಂತಾಪ


Click it and Unblock the Notifications