ಜಿಯೋದ ಈ ಪ್ಲ್ಯಾನಿನಲ್ಲಿ 28GB ಡೇಟಾ, ಅನಿಯಮಿತ ವಾಯಿಸ್ ಕರೆ ಪ್ರಯೋಜನ!
ಜನಪ್ರಿಯ ಜಿಯೋ ಟೆಲಿಕಾಂ ಇತ್ತೀಚಿಗೆ ತನ್ನ ಪ್ರಿಪೇಯ್ಡ್ ಪ್ಲ್ಯಾನ್ ದರ ಏರಿಕೆ ಮಾಡಿದೆ. ಜಿಯೋದ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಅನಿಯಮಿತ ವಾಯಿಸ್ ಕರೆ ಸೌಲಭ್ಯ, ಎಸ್‌ಎಮ್‌ಎಸ್ ಪ್ರಯೋಜನ ಪಡೆದಿವೆ. ಬೆಲೆ ಏರಿಕೆ ನಂತರ ಕಡಿಮೆ ದರದಲ್ಲಿ ಲಭ್ಯ ಇರುವ ಆಕರ್ಷಕ ಪ್ರಯೋಜನ ಗಳ ಯೋಜನೆ ಗಳು ಗ್ರಾಹಕರ ಗಮನ ಸೆಳೆದಿವೆ. ಆ ಪೈಕಿ ಜಿಯೋ ಟೆಲಿಕಾಂನ 209ರೂ. ಪ್ರಿಪೇಯ್ಡ್ ಯೋಜನೆ ಹೆಚ್ಚು ಗಮನ ಸೆಳೆದಿದೆ.

ಹೌದು, ರಿಲಯನ್ಸ್ ಜಿಯೋ ಟೆಲಿಕಾಂನ 209ರೂ. ಬೆಲೆಯ ಪ್ರಿಪೇಯ್ಡ್ ಯೋಜನೆಯ ಆಯ್ಕೆ ಹೊಂದಿದೆ. ಈ ಯೋಜನೆಯು ಡೇಟಾ ಪ್ರಯೋಜನದ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಹಾಗೂ ವಾಯಿಸ್ ಕರೆಯ ಪ್ರಯೋಜನ ಪಡೆದಿದೆ. ಕಡಿಮೆ ದರದಲ್ಲಿ ಡೈಲಿ ಡೇಟಾ ಹಾಗೂ ವಾಯಿಸ್ ಕರೆ ಬಯಸುವ ಗ್ರಾಹಕರಿಗೆ ಈ ಯೋಜನೆ ಅತ್ಯುತ್ತಮ ಎನಿಸಲಿದೆ. ಹಾಗಾದರೇ ಜಿಯೋ ಟೆಲಿಕಾಂನ 209ರೂ. ಬೆಲೆಯ ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳ ಬಗ್ಗೆ ಹಾಗೂ ಜಿಯೋದ ಇತರೆ ಆಕರ್ಷಕ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 209ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 209ರೂ. ಪ್ರಿಪೇಯ್ಡ್ ಪ್ಲ್ಯಾನ್ 28 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಯೋಜನೆಯಲ್ಲಿ ಪ್ರತಿದಿನ 1 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಗಳು ದೊರೆಯುತ್ತವೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 28GB ಡೇಟಾ ಪ್ರಯೋಜನ ಸಿಗಲಿದೆ.

ಜಿಯೋ 119ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 119ರೂ. ಪ್ರಿಪೇಯ್ಡ್ ಪ್ಲ್ಯಾನ್ 14 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಯೋಜನೆಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್‌ಎಮ್‌ಎಸ್‌ಗಳು ದೊರೆಯುತ್ತವೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 21 GB ಡೇಟಾ ಪ್ರಯೋಜನ ಸಿಗಲಿದೆ.

ಜಿಯೋದ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 239ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5 GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್ ಸೇವೆ ಲಭ್ಯ.

ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.

ಜಿಯೋ 395ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರಿಪೇಯ್ಡ್ ಪ್ಲ್ಯಾನಿನಲ್ಲಿ ಒಟ್ಟು 6 GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಜಿಯೋ ಆಪ್ಸ್ ಸಹ ಲಭ್ಯ.

ಜಿಯೋ 479ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 479ರೂ. ಪ್ರೀಪೇಯ್ಡ್ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5 GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋ ದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112 GB). ಹಾಗೆಯೇ ಜಿಯೋ ದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ.

ಜಿಯೋ 601ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 601 ರೂ. ಪ್ರೀಪೇಯ್ಡ್ ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 3 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ 6 GB ಡೇಟಾ ಸಿಗಲಿದ್ದು, ಹಾಗೆಯೇ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 90 GB ಡೇಟಾ ಪ್ರಯೋಜನ ದೊರೆಯಲಿದೆ.


Click it and Unblock the Notifications








