Home
ಸುದ್ದಿಜಾಲ

ಈ ಒಂದು ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, 14 OTT ಆಪ್ಸ್‌ ಜೊತೆಗೆ 18GB ಡೇಟಾ ಪಕ್ಕಾ!

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್‌ ಜಿಯೋ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದ್ದು, ಹಲವು ಭಿನ್ನ ಪ್ರಿಪೇಯ್ಡ್ ಯೋಜನೆ ಆಯ್ಕೆಯನ್ನು ಗ್ರಾಹಕರಿಗೆ ನೀಡಿದೆ. ಆ ಪೈಕಿ ಜಿಯೋದ ಬಹುತೇಕ ರೀಚಾರ್ಜ್‌ ಯೋಜನೆಗಳು ಅಧಿಕ ದೈನಂದಿನ ಡೇಟಾ ಪ್ರಯೋಜನ ಪಡೆದಿದ್ದು, ಅದರೊಂದಿಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಸಹ ಪಡೆದಿವೆ. ಅದಾಗ್ಯೂ, ಕೆಲವೊಂದು ಯೋಜನೆಗಳು ಡೇಟಾ ಜೊತೆಗೆ ಓಟಿಟಿ (OTT) ಚಂದಾದಾರಿಕೆಯ ಪ್ರಯೋಜನ ಪಡೆದಿದ್ದು, ಆ ಪೈಕಿ ಜಿಯೋದ ಒಂದು ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 14 ಓಟಿಟಿ ಆಪ್‌ಗಳ ಸೌಲಭ್ಯ ಪಡೆದಿದೆ.

ಹೌದು, ಜಿಯೋ ಸಂಸ್ಥೆಯು ಭಿನ್ನ ಡೇಟಾ ಪ್ರಯೋಜನಗಳ ಆಯ್ಕೆ ಪಡೆದಿರುವ ಜೊತೆಗೆ ಕೆಲವು ಓಟಿಟಿ ಪ್ರಯೋಜನದ ಪ್ಲ್ಯಾನ್‌ಗಳ ಆಯ್ಕೆ ಪಡೆದುಕೊಂಡಿದೆ. ಅವುಗಳ ಪೈಕಿ ಜಿಯೋದ 1198ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 14 ಓಟಿಟಿ ಆಪ್ಸ್‌ ಚಂದಾದಾರಿಕೆ ಪಡೆದಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ 18 GB ಡೇಟಾ ಸೌಲಭ್ಯ ಸಹ ಒಳಗೊಂಡಿದೆ. ಹಾಗಾದರೇ ಈ ಯೋಜನೆಯ ಪ್ರಯೋಜನಗಳ ಬಗ್ಗೆ ಹಾಗೂ ಇತರೆ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಈ ಒಂದು ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ,14 OTT ಆಪ್ಸ್‌ ಜೊತೆ 18GB ಡೇಟಾ ಪಕ್ಕಾ

ಜಿಯೋದ 1198ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಟೆಲಿಕಾಂನ 1198ರೂ. ರೀಚಾರ್ಜ್‌ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಪಡೆದಿದೆ. ಈ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168 GB ಡೇಟಾ ಸೌಲಭ್ಯ ಸಿಗಲಿದೆ. ಇದಲ್ಲದೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಇನ್ನು ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ 14 ಓಟಿಟಿ ಅಪ್ಲಿಕೇಶನ್‌ಗಳ ಚಂದಾದಾರಿಕೆ ಸಹ ಲಭ್ಯವಾಗಲಿದೆ. ಹಾಗೆಯೇ ಹೆಚ್ಚುವರಿಯಾಗಿ 18GB ಡೇಟಾ ಪ್ರಯೋಜನ ಕೂಡಾ ಗ್ರಾಹಕರಿಗೆ ದೊರೆಯುತ್ತದೆ. ಅಮೆಜಾನ್‌ ವಿಡಿಯೋ ಪ್ರೈಮ್‌, ಡಿಸ್ನಿ+ ಹಾಟ್‌ಸ್ಟಾರ್‌, ಸೋನಿ ಲೈವ್‌, ಜೀ5, ಸನ್‌ ಸೆನ್ಸ್ಟ್‌, ಫ್ಯಾನ್‌ ಕೋಡ್‌, ಎಪಿಕ್‌ ಆನ್‌ ಸೇರಿದಂತೆ ಇನ್ನು ಕೆಲವು ಜನಪ್ರಿಯ ಓಟಿಟಿ ಆಪ್‌ ಲಭ್ಯ.

ಜಿಯೋದ 398ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಟೆಲಿಕಾಂನ 398ರೂ. ರೀಚಾರ್ಜ್‌ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಪಡೆದಿದೆ. ಈ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 56GB ಡೇಟಾ ಸೌಲಭ್ಯ ಸಿಗಲಿದೆ. ಇದಲ್ಲದೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ಸಿಗಲಿದೆ.

ಇನ್ನು ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ 13 ಓಟಿಟಿ ಅಪ್ಲಿಕೇಶನ್‌ಗಳ ಚಂದಾದಾರಿಕೆ ಸಹ ಲಭ್ಯವಾಗಲಿದೆ. ಹಾಗೆಯೇ ಹೆಚ್ಚುವರಿಯಾಗಿ 6 GB ಡೇಟಾ ಪ್ರಯೋಜನ ಕೂಡಾ ಗ್ರಾಹಕರಿಗೆ ದೊರೆಯುತ್ತದೆ. ಸೋನಿ ಲೈವ್‌, ಜೀ5, ಸನ್‌ ಸೆನ್ಸ್ಟ್‌, ಜಿಯೋ ಸಿನಿಮಾ ಪ್ರಿಮಿಯಂ, ಫ್ಯಾನ್‌ ಕೋಡ್‌, ಎಪಿಕ್‌ ಆನ್‌ ಸೇರಿದಂತೆ ಇನ್ನು ಕೆಲವು ಜನಪ್ರಿಯ ಓಟಿಟಿ ಆಪ್‌ ಲಭ್ಯ.

ಜಿಯೋದ 1099ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಟೆಲಿಕಾಂ 1099 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದ್ದು, ಬಳಕೆದಾರರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ನೀಡುತ್ತದೆ. ಅಲ್ಲದೇ ಈ ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ಸಿಗಲಿದೆ. ಇನ್ನು ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌ ಓಟಿಟಿ ಚಂದಾದಾರಿಕೆ ಗ್ರಾಹಕರಿಗೆ ಲಭ್ಯವಾಗಲಿದ್ದು, ಇದರ ಜೊತೆಗೆ ಜಿಯೋ ಆಪ್ಸ್‌ ಸಹ ಲಭ್ಯ. ಇನ್ನು ಪೂರ್ಣ ಅವಧಿಗೆ ಒಟ್ಟು 168 GB ಡೇಟಾ ಲಭ್ಯವಾಗಲಿದೆ.

Best Mobiles in India

English summary
This Jio Plan offers access to 14 OTT Platforms and 18 GB Extra Data. Check benefits and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+