ಜಿಯೋದ ಈ ಪ್ಲ್ಯಾನ್‌ನಲ್ಲಿ ಸಿಗುತ್ತೆ ಅಧಿಕ ಡೇಟಾ ಜೊತೆಗೆ ಭರಪೂರ ಮನರಂಜನೆ!
ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್ ಗಳನ್ನು ಪರಿಚಯಿಸಿದೆ. ಅದೇ ಹಾದಿ ಯಲ್ಲಿ ಮುಂದೆ ಸಾಗಿರುವ ಜಿಯೋ ಇದೀಗ ಅಲ್ಪಾವಧಿಯ ಯೋಜನೆ ಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್ ಗಳನ್ನು ಪಡೆದಿದೆ. ಆ ಪೈಕಿ ಜಿಯೋ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಆಕರ್ಷಕ ಪ್ರಯೋಜನ ಗಳನ್ನು ಪಡೆದಿದೆ.

ಹೌದು, ಜಿಯೋ ಟೆಲಿಕಾಂನ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಅಲ್ಪಾವಧಿ ವ್ಯಾಲಿಡಿಟಿಯ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಹೊಂದಿದೆ. ಇದರೊಂದಿಗೆ ಜಿಯೋ ಆಪ್ಸ್‌ಗಳ ಪ್ರಯೋಜನ ಗಳು ಸಹ ಲಭ್ಯವಾಗಲಿವೆ. ಹಾಗಾದರೇ ಜಿಯೋ ಟೆಲಿಕಾಂನ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಉತ್ತಮವೇ?..ಹಾಗೂ ಜಿಯೋದ ಇತರೆ ಆಕರ್ಷಕ ಪ್ಲ್ಯಾನ್ ಗಳ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದು ಕೊಂಡಿದೆ. ಈ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯ ವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಪಡೆದಿದೆ. ಹಾಗೆಯೇ 6GB ಡೇಟಾ ಸಿಗಲಿದ್ದು, ಪೂರ್ಣ ವ್ಯಾಲಿಡಿಟಿಯ ಅವಧಿಗೆ ಒಟ್ಟಾರೇ 90 GB ಡೇಟಾ ಪ್ರಯೋಜನ ಲಭ್ಯವಾಗಲಿದೆ.

ಜಿಯೋ 3,499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 3,499ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ 2,399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 2399ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್ಸ್ ಪ್ರಯೋಜನ ಲಭ್ಯ.

ಜಿಯೋ 999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ರಿಲಾಯನ್ಸ್ ಜಿಯೋ 999ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಜೊತೆಗೆ ಉಚಿತ ಎಸ್‌ಎಮ್‌ಎಸ್ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

ಜಿಯೋ 555ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ 555ರೂ. ಪ್ರೀಪೇಯ್ಡ್ ಪ್ಲ್ಯಾನ್ ಆಕರ್ಷಕ ಕೊಡುಗೆಯ ಪ್ಲ್ಯಾನ್ ಆಗಿದ್ದು, ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.


Click it and Unblock the Notifications








