Home
ಸುದ್ದಿಜಾಲ

ಜಿಯೋದ ಈ ಪ್ಲ್ಯಾನಿನಲ್ಲಿ 56GB ಡೇಟಾ, ಅನಿಯಮಿತ ವಾಯಿಸ್ ಕರೆ ಪ್ರಯೋಜನ!

ರಿಲಯನ್ಸ್‌ ಜಿಯೋ ಟೆಲಿಕಾಂ ಆಕರ್ಷಕ ಡೇಟಾ ಪ್ರಯೋಜನದ ಯೋಜನೆಗಳ ಮೂಲಕ ಲೀಡಿಂಗ್‌ನಲ್ಲಿ ಕಾಣಿಸಿಕೊಂಡಿದೆ. ಜಿಯೋದ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಅನಿಯಮಿತ ವಾಯಿಸ್ ಕರೆ ಸೌಲಭ್ಯ, ಎಸ್‌ಎಮ್‌ಎಸ್‌ ಪ್ರಯೋಜನ ಪಡೆದಿವೆ. ಬೆಲೆ ಏರಿಕೆ ನಂತರ ಕಡಿಮೆ ದರದಲ್ಲಿ ಲಭ್ಯ ಇರುವ ಆಕರ್ಷಕ ಪ್ರಯೋಜನ ಗಳ ಯೋಜನೆ ಗಳು ಗ್ರಾಹಕರ ಗಮನ ಸೆಳೆದಿವೆ. ಆ ಪೈಕಿ ಜಿಯೋ ಟೆಲಿಕಾಂನ 299ರೂ. ಪ್ರಿಪೇಯ್ಡ್‌ ಯೋಜನೆ ಹೆಚ್ಚು ಗಮನ ಸೆಳೆದಿದೆ.

ಜಿಯೋದ ಈ ಪ್ಲ್ಯಾನಿನಲ್ಲಿ 56GB ಡೇಟಾ, ಅನಿಯಮಿತ ವಾಯಿಸ್ ಕರೆ ಪ್ರಯೋಜನ!

ಹೌದು, ರಿಲಯನ್ಸ್‌ ಜಿಯೋ ಟೆಲಿಕಾಂನ 299 ರೂ. ಬೆಲೆಯ ಪ್ರಿಪೇಯ್ಡ್ ಯೋಜನೆಯ ಆಯ್ಕೆ ಹೊಂದಿದೆ. ಈ ಯೋಜನೆಯು ಡೇಟಾ ಪ್ರಯೋಜನದ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಹಾಗೂ ವಾಯಿಸ್ ಕರೆಯ ಪ್ರಯೋಜನ ಪಡೆದಿದೆ. ಕಡಿಮೆ ದರದಲ್ಲಿ ಡೈಲಿ ಡೇಟಾ ಹಾಗೂ ವಾಯಿಸ್ ಕರೆ ಬಯಸುವ ಗ್ರಾಹಕರಿಗೆ ಈ ಯೋಜನೆ ಅತ್ಯುತ್ತಮ ಎನಿಸಲಿದೆ. ಹಾಗಾದರೆ ರಿಲಯನ್ಸ್‌ ಜಿಯೋ ಟೆಲಿಕಾಂನ 299 ರೂ. ಬೆಲೆಯ ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳ ಬಗ್ಗೆ ಹಾಗೂ ಜಿಯೋದ ಇತರೆ ಆಕರ್ಷಕ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆ ಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್‌ ಸಹ ಲಭ್ಯ.

ಜಿಯೋದ ಈ ಪ್ಲ್ಯಾನಿನಲ್ಲಿ 56GB ಡೇಟಾ, ಅನಿಯಮಿತ ವಾಯಿಸ್ ಕರೆ ಪ್ರಯೋಜನ!

ಜಿಯೋ 479ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 1.5 GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋ ದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್‌ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋದ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5 GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್‌ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್‌ ಸೇವೆ ಲಭ್ಯ.

ಜಿಯೋ 119ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 119 ರೂ. ಪ್ರಿಪೇಯ್ಡ್‌ ಪ್ಲ್ಯಾನ್‌ 14 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಯೋಜನೆಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್‌ಎಮ್‌ಎಸ್‌ಗಳು ದೊರೆಯುತ್ತವೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 21 GB ಡೇಟಾ ಪ್ರಯೋಜನ ಸಿಗಲಿದೆ.

Best Mobiles in India

English summary
This Jio Prepaid Plan Offers 56GB Data with Attractive Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+