Home
ಸುದ್ದಿಜಾಲ

ಈ ಪ್ಲ್ಯಾನಿನಲ್ಲಿ 45GB ಡೇಟಾ, 30 ದಿನ ವ್ಯಾಲಿಡಿಟಿ ಪಕ್ಕಾ!.ಯಾವ ಪ್ಲ್ಯಾನ್?.ಬೆಲೆ ಎಷ್ಟು?

ದೇಶದ ಟೆಲಿಕಾಂ ವಲಯದಲ್ಲಿ ಲೀಡಿಂಗ್ ಸಂಸ್ಥೆ ಆಗಿ ಗುರುತಿಸಿಕೊಂಡಿರುವ ಜಿಯೋ, ಭಿನ್ನ ಶ್ರೇಣಿಯ ಯೋಜನೆಗಳನ್ನು ಹೊಂದಿದೆ. ಅವುಗಳಲ್ಲಿ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಅನಿಯಮಿತ ವಾಯಿಸ್ ಕರೆ ಸೌಲಭ್ಯ, ಎಸ್‌ಎಮ್‌ಎಸ್‌ ಪ್ರಯೋಜನ ಪಡೆದಿವೆ. ಗ್ರಾಹಕ ಸ್ನೇಹಿ ದರದಲ್ಲಿರುವ ಕೆಲವೊಂದು ಯೋಜನೆಗಳು ಗ್ರಾಹಕರನ್ನು ಸೆಳೆದಿವೆ. ಆ ಪೈಕಿ ಜಿಯೋ ಟೆಲಿಕಾಂನ 259ರೂ. ಪ್ರಿಪೇಯ್ಡ್‌ ಯೋಜನೆ ಹೆಚ್ಚು ಗಮನ ಸೆಳೆದಿದೆ.

ಹೊಂದಿದೆ

ಹೌದು, ರಿಲಯನ್ಸ್‌ ಜಿಯೋ ಟೆಲಿಕಾಂನ 259ರೂ. ಬೆಲೆಯ ಪ್ರಿಪೇಯ್ಡ್ ಯೋಜನೆಯ ಆಯ್ಕೆ ಹೊಂದಿದೆ. ಈ ಯೋಜನೆಯು ಡೇಟಾ ಪ್ರಯೋಜನದ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಹಾಗೂ ವಾಯಿಸ್ ಕರೆಯ ಪ್ರಯೋಜನ ಪಡೆದಿದೆ. ಕಡಿಮೆ ದರದಲ್ಲಿ ಡೈಲಿ ಡೇಟಾ ಹಾಗೂ ವಾಯಿಸ್ ಕರೆ ಬಯಸುವ ಗ್ರಾಹಕರಿಗೆ ಈ ಯೋಜನೆ ಅತ್ಯುತ್ತಮ ಎನಿಸಲಿದೆ. ಹಾಗಾದರೇ ಜಿಯೋ ಟೆಲಿಕಾಂನ 259ರೂ. ಬೆಲೆಯ ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳ ಬಗ್ಗೆ ಹಾಗೂ ಜಿಯೋದ ಇತರೆ ಆಕರ್ಷಕ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 259ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ 259ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 259ರೂ. ಬೆಲೆಯ ಪ್ರಿಪೇಯ್ಡ್ ಪ್ಲ್ಯಾನ್ ಕ್ಯಾಲೆಂಡರ್‌ ತಿಂಗಳ (30 ದಿನಗಳ) ವ್ಯಾಲಿಡಿಟಿ ಪಡೆದಿದೆ. ಇದು ಪ್ರತಿ ತಿಂಗಳು ಒಂದು ರೀಚಾರ್ಜ್ ದಿನಾಂಕವನ್ನು ನೆನಪಿಟ್ಟುಕೊಳ್ಳಲು ಬಳಕೆದಾರರಿಗೆ ಸಹಾಯ ಮಾಡುತ್ತದೆ. ಇನ್ನು ಈ ಪ್ರಿಪೇಯ್ಡ್‌ ಪ್ಲಾನ್‌ 1.5GB ಹೈ-ಸ್ಪೀಡ್ ಡೇಟಾ ಪ್ರಯೋಜನವನ್ನು ನೀಡಲಿದ್ದು, ನಂತರ 64Kbpsಗೆ ಡೇಟಾ ವೇಗವನ್ನು ಇಳಿಯುತ್ತದೆ. ಇದು ಅನಿಯಮಿತ ಧ್ವನಿ ಕರೆಗಳು, ದೈನಂದಿನ 100 SMS ಪ್ರಯೋಜನವನ್ನು ನೀಡಲಿದೆ. ಇದಲ್ಲದೆ ಜಿಯೋ ಅಪ್ಲಿಕೇಶನ್‌ಗಳಿಗೆ ಪೂರಕ ಚಂದಾದಾರಿಕೆಯನ್ನು ಸಹ ಒಳಗೊಂಡಿದೆ. ಇದು ನಿಯಮಿತ ರೀಚಾರ್ಜ್ ಪ್ಲಾನ್‌ಗಿಂತ ಭಿನ್ನವಾಗಿದ್ದು, ನಿಗದಿತ ಮಾನ್ಯತೆಯ ಅವಧಿಯೊಂದಿಗೆ ಬರುತ್ತದೆ.

ಜಿಯೋ 151ರೂ. ಪ್ರಿಪೇಯ್ಡ್ ಯೋಜನೆ

ಜಿಯೋ 151ರೂ. ಪ್ರಿಪೇಯ್ಡ್ ಯೋಜನೆ

ಜಿಯೋ 151ರೂ. ಯೋಜನೆಯು ಡೇಟಾ ಮಾತ್ರ ಯೋಜನೆಯಾಗಿದ್ದು ಅದು ಬಳಕೆದಾರರಿಗೆ 8ಜಿಬಿ ಡೇಟಾವನ್ನು ನೀಡುತ್ತದೆ. ಈ ಯೋಜನೆಯ ಲಾಭ ಪಡೆಯಲು, ಬಳಕೆದಾರರಿಗೆ ಸಕ್ರಿಯ ಬೇಸ್ ಪ್ಲಾನ್ ಕೂಡ ಅಗತ್ಯವಿದೆ. ಈ ಯೋಜನೆಯು ಬಳಕೆದಾರರಿಗೆ ಡಿಸ್ನಿ + ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯ ಮೂರು ತಿಂಗಳ ಚಂದಾದಾರಿಕೆಯನ್ನು ಸಹ ನೀಡುತ್ತದೆ.

ಜಿಯೋದ 179ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನ

ಜಿಯೋದ 179ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನ

ಜಿಯೋ ಟೆಲಿಕಾಂನ 179 ರೂ ಪ್ಲ್ಯಾನ್ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಪ್ರತಿದಿನ 1 GB ಡಾಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳು ಹಾಗೂ ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಿಗಲಿದೆ.

ಜಿಯೋ 333ರೂ. ಪ್ರಿಪೇಯ್ಡ್ ಯೋಜನೆ

ಜಿಯೋ 333ರೂ. ಪ್ರಿಪೇಯ್ಡ್ ಯೋಜನೆ

ರಿಲಯನ್ಸ್ ಜಿಯೋದ 333ರೂ. ಪ್ರಿಪೇಯ್ಡ್ ಯೋಜನೆಯೊಂದಿಗೆ, ಬಳಕೆದಾರರು ದಿನಕ್ಕೆ 1.5ಜಿಬಿ ಡೇಟಾ ಮತ್ತು 28 ದಿನಗಳವರೆಗೆ 100 ಫ್ರೀ ಎಸ್ಎಂಎಸ್/ದಿನದೊಂದಿಗೆ ಅನಿಯಮಿತ ಧ್ವನಿ ಕರೆಯನ್ನು ಪಡೆಯುತ್ತಾರೆ. ಜಿಯೋ ಅಪ್ಲಿಕೇಶನ್‌ಗಳನ್ನು ಡಿಸ್ನಿ + ಹಾಟ್‌ಸ್ಟಾರ್ ಮೊಬೈಲ್‌ಗೆ ಮೂರು ತಿಂಗಳ ಚಂದಾದಾರಿಕೆಯೊಂದಿಗೆ ಜೋಡಿಸಲಾಗುತ್ತದೆ. ಈ ಯೋಜನೆಯೊಂದಿಗೆ, ಹೊಸ ಗ್ರಾಹಕರಿಗೆ ಪ್ರೈಮ್ ಚಂದಾದಾರಿಕೆಯನ್ನು ಉಚಿತವಾಗಿ ನೀಡಲಾಗುತ್ತದೆ.

ಜಿಯೋದ 299ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 299ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್‌ ಸಹ ಲಭ್ಯ.

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 1199ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 1199ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 1199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 1066ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 1066ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 1066ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173GB ಡೇಟಾ ದೊರೆಯಲಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 5GB ಡೇಟಾ ಲಭ್ಯವಾಗಲಿದೆ.

Best Mobiles in India

English summary
This Low Price Prepaid Plan Offer 45GB Data with 30 Days Validity: Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+