Just In
- 1 hr ago
ChatGPT Effect: AI ಟೂಲ್ಸ್ ಬ್ಯಾನ್ ಮಾಡಲು ಮುಂದಾದ ಬೆಂಗಳೂರಿನ ಈ ಕಾಲೇಜುಗಳು!
- 17 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- 17 hrs ago
ತಿಮ್ಮಪ್ಪನ ಭಕ್ತರಿಗಾಗಿ ಹೊಸ ಆ್ಯಪ್ ಪರಿಚಯಿಸಿದ ಟಿಟಿಡಿ! ಏನೆಲ್ಲಾ ಸೇವೆಗಳು ಲಭ್ಯ!
- 18 hrs ago
ನೀವು ದಿನವೂ ಬಳಸುವ ಗೂಗಲ್ನ ಈ ಆಪ್ಗಳಲ್ಲಿ ಎಐ ಹೇಗೆ ಕೆಲಸ ಮಾಡಲಿದೆ!?; ಇಲ್ಲಿದೆ ವಿವರ
Don't Miss
- Lifestyle
ಬೆಳ್ಳಿಯ ಆಭರಣಗಳು ಹೊಳಪಿನಿಂದ ಕೂಡಿರಲು ಈ ಟ್ರಿಕ್ಸ್ ಬಳಸಿ
- Movies
ಮಂಗ್ಲಿ ಹಾಡೊಂದಕ್ಕೆ ಪಡೆಯುವ ಸಂಭಾವನೆ ಎಷ್ಟು? ಸ್ಯಾಂಡಲ್ವುಡ್ನಲ್ಲಿ ಕ್ರೇಜ್ ಹೇಗಿದೆ?
- News
ಜಾರ್ಖಂಡ್: ಆಸ್ಪತ್ರೆಯಲ್ಲಿ ಅಗ್ನಿ ದುರಂತ- ವೈದ್ಯ ದಂಪತಿ ಸೇರಿ 6 ಮಂದಿ ಸಾವು!
- Automobiles
ಟಾಟಾದ ಜನಪ್ರಿಯ ಕಾರುಗಳ ಬೆಲೆ ಏರಿಕೆ: ಘೋಷಣೆ
- Sports
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಖಾನ್ಗೆ ಅವಕಾಶ ಇಲ್ಲ: ಬಿಸಿಸಿಐ ನೀಡಿದ ಭರವಸೆ ಏನು?
- Finance
ಹಿಂಡನ್ಬರ್ಗ್ vs ಅದಾನಿ ನಡುವೆ ಎಲ್ಐಸಿ, ಎಸ್ಬಿಐ ಉಳಿತಾಯ ರಿಸ್ಕ್ನಲ್ಲಿದೆಯೇ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
BSNLನ ಈ ಕಡಿಮೆ ಬೆಲೆಯ ಪ್ಲ್ಯಾನಿನಲ್ಲಿ ಇಷ್ಟೊಂದು ಪ್ರಯೋಜನವೇ?..ವಾವ್ ಎಂದ ಗ್ರಾಹಕ!
ದೇಶದ ಟೆಲಿಕಾಂ ವಲಯದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ (BSNL) ಟೆಲಿಕಾಂ ಖಾಸಗಿ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುವಂತಹ ಪ್ರೀಪೇಯ್ಡ್ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆದಿದೆ. ಕೆಲವೊಂದು ಯೋಜನೆಗಳಲ್ಲಿ ಹೆಚ್ಚುವರಿ ಪ್ರಯೋಜನ ಲಭ್ಯ ಮಾಡಿದೆ. ಇದೀಗ ನೂತನ ಯೋಜನೆವೊಂದನ್ನು ಪರಿಚಯಿದ್ದು, ಖಾಸಗಿ ಟೆಲಿಕಾಂಗಳಿಗೆ ಬಿಗ್ ಶಾಕ್ ನೀಡಿದೆ. ಬಿಎಸ್‌ಎನ್‌ಎಲ್ ಟೆಲಿಕಾಂನ ಹೊಸ ಪ್ರೀಪೇಯ್ಡ್ ಯೋಜನೆಯು ಆಕರ್ಷಕ ಪ್ರಯೋಜನ ಪಡೆದಿದೆ.

ಹೌದು, ಬಿಎಸ್‌ಎನ್‌ಎಲ್ ಸಂಸ್ಥೆಯ ನೂತನ ಪ್ರಿಪೇಯ್ಡ್ ಯೋಜನೆ ಆಕರ್ಷಕ ಎನಿಸಿದೆ. ಅದುವೇ ಬಿಎಸ್‌ಎನ್‌ಎಲ್ 197 ರೂ. ಯೋಜನೆ. ಈ ಯೋಜನೆಯು 100 ದಿನಗಳ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿದ್ದು, ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳ ಅಗ್ಗದ ಯೋಜನೆಗಳಿಗೆ ಟಕ್ಕರ್ ನೀಡಿದೆ. ಬಿಎಸ್‌ಎನ್‌ಎಲ್ ಟೆಲಿಕಾಂನ ಈ ಯೋಜನೆಯು ಡೇಟಾ, ಅನಿಯಮಿತ ವಾಯಿಸ್ ಕರೆ, ಅತ್ಯುತ್ತಮ ಡೇಟಾ ಪ್ರಯೋಜನ ಹಾಗೂ ಎಸ್‌ಎಮ್‌ಎಸ್ ಸೌಲಭ್ಯ ಒಳಗೊಂಡಿದೆ. ಹಾಗಾದರೆ, ಬಿಎಸ್‌ಎನ್‌ಎಲ್ 197 ರೂ. ಯೋಜನೆ ಪ್ರಯೋಜನಗಳೆನು ಹಾಗೂ ಇತರೆ ಕೆಲವು ಜನಪ್ರಿಯ ಯೋಜನೆಗಳ ಬಗ್ಗೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ 197 ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 197 ರೂ. ಪ್ರಿಪೇಯ್ಡ್ ಪ್ಲ್ಯಾನ್ ಒಟ್ಟು 100 ದಿನಗಳ ವ್ಯಾಲಿಡಿಟಿ ಪ್ರಯೋಜನವನ್ನು ಒಳಗೊಂಡಿದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ನೀಡುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆ ಸೌಲಭ್ಯವನ್ನು ಪಡೆದುಕೊಂಡಿದೆ. ಇದರೊಂದಿಗೆ ಮೊಲದ 18 ದಿನಗಳ ಕಾಲ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಪ್ರಯೋಜನ ಸಹ ಹೊಂದಿದೆ. ಇನ್ನು 2GB ಡೇಟಾ ಪ್ರಯೋಜನ ಮುಗಿದ ಬಳಿಕ 40kbps ವೇಗದಲ್ಲಿ ಇಂಟರ್ನೆಟ್ ಸೇವೆ ಮುಂದುವರಿಯುತ್ತದೆ. ಅಂದಹಾಗೇ ಈ ಯೋಜನೆಯು ಎಲ್ಲ ಪ್ರದೇಶಗಳಲ್ಲಿ ಲಭ್ಯ ಇರುವುದಿಲ್ಲ. ಪೂರ್ವ ಉತ್ತರ ಪ್ರದೇಶ ಭಾಗದಲ್ಲಿ ಲಭ್ಯ ಆಗಿದೆ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 2399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 2399ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವು ದೊರೆಯಲಿದೆ. ಹಾಗೆಯೇ ಮುಂಬೈ ಮತ್ತು ದೆಹಲಿ ಎಮ್‌ಟಿಎನ್‌ಎಲ್ ಬಳಕೆದಾರರಗೆ ಅನಿಯಮಿತ ಸಾಂಗ್ ಚೇಂಜ್ ಹಾಗೂ EROS ಚಂದಾದಾರಿಕೆ ಸಹ ಲಭ್ಯ ಆಗಲಿದೆ.

ಬಿಎಸ್‌ಎನ್‌ಎಲ್ 2999ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 2999ರೂ. ಪ್ರೀಪೇಯ್ಡ್ ಯೋಜನೆ ದೀರ್ಘಾವಧಿಯ ಪ್ಲ್ಯಾನ್ ಆಗಿದ್ದು, ಪ್ರತಿದಿನ 3GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಹೆಚ್ಚುವರಿಯಾಗಿ 90 ದಿನಗಳ ವ್ಯಾಲಿಡಿಟಿ ಸಹ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 299ರೂ. ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, ಒಟ್ಟು 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 3 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಗೆ ಕಡಿಮೆಯಾಗುತ್ತದೆ.

ಬಿಎಸ್‌ಎನ್‌ಎಲ್ 228ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 228 ರೂ. ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, ಒಟ್ಟು 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಗೆ ಕಡಿಮೆಯಾಗುತ್ತದೆ.

ಬಿಎಸ್‌ಎನ್‌ಎಲ್ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 239 ರೂ. ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, ಒಟ್ಟು 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇದರೊಂದಿಗೆ 10 ರೂ. ಮೌಲ್ಯದ ಟಾಕ್‌ಟೈಮ್ ದೊರೆಯುತ್ತದೆ (ಟಾಕ್‌ಟೈಮ್ ಮೌಲ್ಯವನ್ನು ಬಳಕೆದಾರರ ಮುಖ್ಯ ಖಾತೆಗೆ ಸೇರಿಸಲಾಗುತ್ತದೆ) ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಗೆ ಕಡಿಮೆಯಾಗುತ್ತದೆ.

ಬಿಎಸ್‌ಎನ್‌ಎಲ್ 499ರೂ. ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್‌ನ ಈ SVT 499 ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180 GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470