ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ಹಣ EMI ಮೂಲಕ ಪಾವತಿಸಬಹುದು!

|

ದೇಶದ ಟೆಲಿಕಾಂ ವಲಯದಲ್ಲಿ ಜಿಯೋ, ಭಾರ್ತಿ ಏರ್‌ಟೆಲ್‌ ಹಾಗೂ ವಿ ಟೆಲಿಕಾಂ (ವೊಡಾಫೋನ್‌ ಐಡಿಯಾ) ಸಂಸ್ಥೆಗಳು ಪೈಪೋಟಿಯಲ್ಲಿ ಮುನ್ನಡೆದಿವೆ. ಈ ಮೂರು ಟೆಲಿಕಾಂಗಳು ಆಕರ್ಷಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿವೆ. ಹಾಗೆಯೇ ವಾರ್ಷಿಕ ಅವಧಿಯ ಪ್ಲ್ಯಾನ್‌ಗಳನ್ನು ಸಹ ಒಳಗೊಂಡಿದ್ದು, ದೈನಂದಿನ ಡೇಟಾ ಪ್ರಯೋಜನ ನೀಡಿವೆ. ಇದೆಲ್ಲದರ ನಡುವೆ ಒಂದು ಪ್ಲ್ಯಾನ್‌ ಭಾರೀ ಸದ್ದು ಮಾಡಿದ್ದು, ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, EMI ಮೂಲಕ ಶುಲ್ಕ ಪಾವತಿಸಬಹುದು!

ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ಹಣ EMI ಮೂಲಕ ಪಾವತಿಸಬಹುದು!

ಹೌದು, ವಿ (ವೊಡಾಫೋನ್‌ ಐಡಿಯಾ) ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ರೀಚಾರ್ಜ್‌ ಮಾಡಿದರೆ, ಗ್ರಾಹಕರಿಗೆ ನೋ ಕಾಸ್ಟ್‌ ಇಎಮ್‌ಐ (no cost emi) ಆಯ್ಕೆ ಲಭ್ಯವಾಗಲಿದೆ. ಅಂದಹಾಗೆ ಈ ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದ್ದು, ಹೀಗಾಗಿ 12 ತಿಂಗಳ ನೋ ಕಾಸ್ಟ್‌ ಇಎಮ್‌ಐ ಆಯ್ಕೆ ಸಿಗಲಿದೆ. ಒಂದೇ ಬಾರಿ ಪೂರ್ಣ ಹಣ ನೀಡಿ, ರೀಚಾರ್ಜ್ ಮಾಡುವುದು ಬೇಡಾ ಎಂದಾದರೆ, ಇಎಮ್‌ಐ ಸೌಲಭ್ಯ ಪಡೆಯಬಹುದು.

ಇನ್ನು ಅಧಿಕೃತ ವಿ ಟೆಲಿಕಾಂ ಆಪ್‌ (Vi app) ಮೂಲಕ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ರೀಚಾರ್ಜ್‌ ಮಾಡಲು ಮುಂದಾದರೆ ಮಾತ್ರ, ಗ್ರಾಹಕರಿಗೆ ನೋ ಕಾಸ್ಟ್‌ ಇಎಮ್‌ಐ (no cost emi) ಆಯ್ಕೆ ಲಭ್ಯವಾಗಲಿದೆ. ಕ್ರೆಡಿಟ್‌ ಕಾರ್ಡ್‌ ಹೊಂದಿರುವ ಗ್ರಾಹಕರು ಈ ಕೊಡುಗೆ ಪ್ರಯೋಜನ ಪಡೆಯಬಹುದಾಗಿದೆ. ಹಾಗಾದರೆ ವಿ ಟೆಲಿಕಾಂನ 3099ರೂ. ಪ್ಲ್ಯಾನ್‌ ಪ್ರಯೋಜನಗಳೆನು ಹಾಗೂ ಇತರೆ ಜನಪ್ರಿಯ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ಹಣ EMI ಮೂಲಕ ಪಾವತಿಸಬಹುದು!

ವಿ ಟೆಲಿಕಾಂ 3099ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ 3099ರೂ. ಪ್ರಿಪೇಯ್ಡ್ ಯೋಜನೆಯೊಂದಿಗೆ 2 GB ದೈನಂದಿನ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳಯ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ದೊರೆಯಲಿದೆ. ಇನ್ನು ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಪಡೆದಿದೆ. ಇದರೊಂದಿಗೆ ಈ ಯೋಜನೆಯಲ್ಲಿ ವಿಕೇಂಡ್ ಡೇಟಾ ರೋಲ್‌ಓವರ್ ಪ್ರಯೋಜನಗಳನ್ನು ಸಹ ಲಭ್ಯವಾಗಲಿದೆ. ಅಲ್ಲದೇ ಹೆಚ್ಚುವರಿಯಾಗಿ ಒಂದು ವರ್ಷದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ಲಭ್ಯ ಆಗಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 75GB ಡೇಟಾ ಪ್ರಯೋಜನ ಸಿಗಲಿದ್ದು, ಹಾಗೆಯೇ ವಿ ಆಪ್ಸ್‌ಗಳು ಲಭ್ಯವಾಗಲಿವೆ.

ವಿ ಟೆಲಿಕಾಂ 2899ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ 2899ರೂ. ಪ್ರಿಪೇಯ್ಡ್ ಯೋಜನೆಯೊಂದಿಗೆ 1.5 GB ದೈನಂದಿನ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯ ದೊರೆಯಲಿದೆ. ಇನ್ನು ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಪಡೆದಿದೆ. ಇದರೊಂದಿಗೆ ಈ ಯೋಜನೆಯಲ್ಲಿ ವಿಕೇಂಡ್ ಡೇಟಾ ರೋಲ್‌ಓವರ್ ಪ್ರಯೋಜನಗಳನ್ನು ಸಹ ಲಭ್ಯವಾಗಲಿದೆ. ಅಲ್ಲದೇ ಹೆಚ್ಚುವರಿಯಾಗಿ 75GB ಡೇಟಾ ಪ್ರಯೋಜನ ಸಿಗಲಿದ್ದು, ಹಾಗೆಯೇ ವಿ ಆಪ್ಸ್‌ಗಳು ಲಭ್ಯವಾಗಲಿವೆ.

ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ಹಣ EMI ಮೂಲಕ ಪಾವತಿಸಬಹುದು!

ವಿ ಟೆಲಿಕಾಂ 1799ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ 1799 ರೂ. ಪ್ರಿಪೇಯ್ಡ್ ಯೋಜನೆಯಲ್ಲಿ ಪೂರ್ಣ ಅವಧಿಗೆ ಒಟ್ಟು 24 GB ದೈನಂದಿನ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳನ್ನು ಸೌಲಭ್ಯ ದೊರೆಯಲಿದೆ. ಹಾಗೆಯೇ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 3600 ಎಸ್‌ಎಮ್‌ಎಸ್‌ ಪ್ರಯೋಜನ ಸಹ ಲಭ್ಯವಾಗಲಿದೆ. ಇನ್ನು ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಪಡೆದಿದೆ. ಇದರೊಂದಿಗೆ ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ವಿ ಆಪ್ಸ್‌ಗಳು ಲಭ್ಯವಾಗಲಿವೆ.

Best Mobiles in India

English summary
This prepaid plan offers no cost EMI option to customer.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X