Home
ಸುದ್ದಿಜಾಲ

ಈ ಫೋನ್‌ ನೋಡಲು ಸೂಪರ್‌!..ಖರೀದಿ ಮಾಡಿದ್ರೆ, ಸಿಗುತ್ತೆ ಬಿಗ್ ಆಫರ್‌!

ದೈತ್ಯ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ್‌ ಲಭ್ಯ ಇರುತ್ತದೆ. ಈ ನಿಟ್ಟಿನಲ್ಲಿ ಅನೇಕ ಗ್ರಾಹಕರು ಈ ಆನ್‌ಲೈನ್‌ ತಾಣದ ಮೂಲಕ ಖರೀದಿಗೆ ಇಷ್ಟಪಡುತ್ತಾರೆ. ಆ ಪೈಕಿ ರಿಯಲ್‌ಮಿ C51 ಮೊಬೈಲ್‌ ಬೊಂಬಾಟ್‌ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು ಹಿಂದಿರುಗಿ ನೋಡುವಂತೆ ಮಾಡಿದೆ.

ಹೌದು, ಜನಪ್ರಿಯ ಇ ಕಾಮರ್ಸ್‌ ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ರಿಯಲ್‌ಮಿ C51 ಮೊಬೈಲ್ ಶೇ. 21% ರಷ್ಟು ರಿಯಾಯಿತಿ ಪಡೆದುಕೊಂಡಿದೆ. ಗ್ರಾಹಕರು 4GB RAM + 64GB ವೇರಿಯಂಟ್‌ನ ಫೋನ್‌ ಅನ್ನು 8,699ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಅಮೆಜಾನ್‌ನಲ್ಲಿ ಲಭ್ಯ ಇರುವ ಎಕ್ಸ್‌ಚೆಂಜ್‌ ಆಫರ್‌, ಬ್ಯಾಂಕ್‌ ಕೊಡುಗೆ ಹಾಗೂ ಇತರೆ ಆಫರ್‌ ಪಡೆದುಕೊಂಡರೆ ಮತ್ತಷ್ಟು ರಿಯಾಯಿತಿ ಪಡೆಯಲು ಅವಕಾಶ ಇದೆ.

ಈ ಫೋನ್‌ ನೋಡಲು ಸೂಪರ್‌!..ಖರೀದಿ ಮಾಡಿದ್ರೆ, ಸಿಗುತ್ತೆ ಬಿಗ್ ಆಫರ್‌!

ರಿಯಲ್‌ಮಿ C51 ಮೊಬೈಲ್ UNISOC T612 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನೊಂದಿಗೆ ಕೆಲಸ ನಿರ್ವಹಿಸಲಿದ್ದು, ಇದರ ಇದರ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಪ್ರಾಥಮಿಕ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯ ಲಭ್ಯ. ಇನ್ನುಳಿದಂತೆ ರಿಯಲ್‌ಮಿ C51 ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸದ ಮಾಹಿತಿ

ರಿಯಲ್‌ಮಿಯ ಈ ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಪಡೆದಿದೆ. ಈ ಡಿಸ್‌ಪ್ಲೇ 1600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು, ಇದು 90Hz ರಿಫ್ರೆಶ್ ರೇಟ್ ಸಪೋರ್ಟ್‌ ಜೊತೆಗೆ 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹೊಂದಿದೆ. ಇದಲ್ಲದೆ 560 ನೀಟ್ಸ್‌ ವರೆಗೆ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಸಹ ಒದಗಿಸಲಿದೆ.

ಈ ಫೋನ್‌ ನೋಡಲು ಸೂಪರ್‌!..ಖರೀದಿ ಮಾಡಿದ್ರೆ, ಸಿಗುತ್ತೆ ಬಿಗ್ ಆಫರ್‌!

ಪ್ರೊಸೆಸರ್‌ ಕಾರ್ಯವೈಖರಿ ಹೀಗಿದೆ

ರಿಯಲ್‌ಮಿ C51 ಫೋನ್‌ UNISOC T612 ಚಿಪ್‌ಸೆಟ್‌ ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಇದು ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಆಂತರೀಕ ಸ್ಟೋರೇಜ್‌ ಆಯ್ಕೆ ಇದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಲಭ್ಯ. ಅಲ್ಲದೇ 4GB ವರ್ಚುವಲ್ RAM ಸಪೋರ್ಟ್‌ ಸಹ ಇದೆ.

ಕ್ಯಾಮೆರಾ ಸೆನ್ಸಾರ್‌ ರಚನೆ ಹೀಗಿದೆ

ರಿಯಲ್‌ಮಿ ಸಂಸ್ಥೆಯು ಈ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್‌ AI ಸೆನ್ಸಾರ್‌ ಅನ್ನು ಸಾಮರ್ಥ್ಯದ ಒಳಗೊಂಡಿದೆ. ಮುಂಭಾಗದಲ್ಲಿ 5 ಮೆಗಾಪಿಕ್ಸೆಲ್‌ AI ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ. ಕ್ಯಾಮೆರಾಗೆ ಪೂರಕವಾಗಿ LED ಫ್ಲ್ಯಾಷ್‌ ಅನ್ನು ಸಹ ನೀಡಲಾಗಿದೆ.

ಈ ಫೋನ್‌ ನೋಡಲು ಸೂಪರ್‌!..ಖರೀದಿ ಮಾಡಿದ್ರೆ, ಸಿಗುತ್ತೆ ಬಿಗ್ ಆಫರ್‌!

ದೀರ್ಘ ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ರಿಯಲ್‌ಮಿ C51 ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಇದಕ್ಕೆ ಅನುಗುಣವಾಗಿ 33W ಫಾಸ್ಟ್‌ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್ ಜ್ಯಾಕ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಸೌಲಭ್ಯ ಇವೆ.

ಮೆಮೊರಿ ಹಾಗೂ ಕಲರ್ ಆಯ್ಕೆ

ಭಾರತದಲ್ಲಿ ರಿಯಲ್‌ಮಿ C51 ಫೋನ್ 4GB + 64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯಲ್ಲಿ ಲಭ್ಯ ಇದೆ. ಹಾಗೆಯೇ ಈ ಫೋನ್‌ ಅನ್ನು ಖರೀದಿದಾರರು ಮಿಂಟ್ ಗ್ರೀನ್ ಮತ್ತು ಕಾರ್ಬನ್ ಬ್ಲ್ಯಾಕ್ ಬಣ್ಣಗಳಲ್ಲಿ ಖರೀದಿ ಮಾಡಲು ಅವಕಾಶ ಇದೆ.

Best Mobiles in India

English summary
This Realme Phone received best price cut on amazon. check offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+