ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G ಫೋನ್‌ ಬೆಲೆಯಲ್ಲಿ ಇಳಿಕೆ!..ಭಾರೀ ಉಳಿತಾಯ!

|

ಸ್ಯಾಮ್‌ಸಂಗ್ ಸಂಸ್ಥೆಯ ಗ್ಯಾಲಕ್ಸಿ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಈಗಾಗಲೇ ಗ್ರಾಹಕರಿಗೆ ಇಷ್ಟವಾಗಿವೆ. ಸದ್ಯ 5G ಫೋನ್‌ಗಳು ಹೆಚ್ಚು ಆಕರ್ಷಕ ಎನಿಸುತ್ತಿದ್ದು, ಈ ನಿಟ್ಟಿನಲ್ಲಿ ಸ್ಯಾಮ್‌ಸಂಗ್‌ ಹಲವು 5G ಫೋನ್‌ಗಳ ಆಯ್ಕೆ ಗ್ರಾಹಕರಿಗೆ ನೀಡಿದೆ. ಅವುಗಳಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G ಫೋನ್ ಮೀಡ್‌ರೇಂಜ್‌ ದರದಲ್ಲಿ ಲಭ್ಯವಿರುವ ಅತ್ಯುತ್ತಮ 5G ಫೋನ್‌ಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಈ ಫೋನ್‌ ಇದೀಗ ಭರ್ಜರಿ ರಿಯಾಯಿತಿ ಪಡೆದಿದೆ.

ಕಾಣಿಸಿಕೊಂಡಿದೆ

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದಿದೆ. 6GB RAM + 128GB ಸ್ಟೋರೇಜ್‌ನ ವೇರಿಯಂಟ್‌ ಫೋನ್‌ ಈಗ 28,499ರೂ. ಪ್ರೈಸ್‌ ಟ್ಯಾಗ್‌ ನಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಎಕ್ಸ್‌ಚೇಂಜ್‌ ಕೊಡುಗೆ, ನೋ ಕಾಸ್ಟ್ ಇಎಮ್‌ಐ ಆಯ್ಕೆಗಳು ಸಹ ಸಿಗುತ್ತವೆ. ಹಾಗಾದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ + ಇನ್ಫಿನಿಟಿ O ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಪಡೆದಿದೆ. ಹಾಗೆಯೇ 85.3% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಪವರ್ ಯಾವುದು?

ಪ್ರೊಸೆಸರ್‌ ಪವರ್ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ One UI 4.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM + 128GB ಹಾಗೂ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಆಯ್ಕೆಗಳನ್ನು ಇದು ಹೊಂದಿದೆ. ಇನ್ನು ಈ ಫೋನ್‌ ಸ್ಯಾಮ್‌ಸಂಗ್‌ನ 'RAM ಪ್ಲಸ್' ಫೀಚರ್ಸ್‌ ಹೊಂದಿದ್ದು, 8GB ವರೆಗೆ ಬಳಕೆಯಾಗದ ಸ್ಟೋರೇಜ್‌ ಅನ್ನು ವರ್ಚುವಲ್ RAM ಆಗಿ ಬಳಸಿಕೊಳ್ಳುತ್ತದೆ.

ಕ್ವಾಡ್ ಕ್ಯಾಮೆರಾ ಸೆನ್ಸಾರ್

ಕ್ವಾಡ್ ಕ್ಯಾಮೆರಾ ಸೆನ್ಸಾರ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ f/1.8 ಅಪರ್ಚರ್ ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.2, GPS/ A-GPS ಮತ್ತು ಯುಎಸ್‌ಬಿ ಟೈಪ್ C ಪೋರ್ಟ್ ಹೊಂದಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಜಿಯೋಮ್ಯಾಗ್ನೆಟಿಕ್ ಸೆನ್ಸಾರ್, ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

Best Mobiles in India

English summary
This Samsung Galaxy 5G Phone available Amazing Discount Price. Check Offer Price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X