ಮತ್ತೆ ಭಾರೀ ಬೆಲೆ ಇಳಿಕೆ ಕಂಡ ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಫೋನ್!
ಮೊಬೈಲ್ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಕಂಪನಿಯು ಬಜೆಟ್ ಸೇರಿದಂತೆ ಫ್ಲ್ಯಾಗ್‌ಶಿಪ್ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವ ಮೂಲಕ ಜನಪ್ರಿಯ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಕಳೆದ ವರ್ಷ ಮಾರುಕಟ್ಟೆಗೆ ಬಿಡುಗಡೆ ಆಗಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಫೋನ್ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಆದ್ರೇ ಇದೀಗ ಭರ್ಜರಿ ಬೆಲೆ ಇಳಿಕೆ ಕಂಡಿದ್ದು, ಗ್ರಾಹಕರು ಮತ್ತೆ ತಿರುಗಿ ನೋಡುವಂತೆ ಮಾಡಿದೆ.

ಹೌದು, ಗ್ರಾಹಕರು ಇದೀಗ ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಫೋನ್ ಅನ್ನು ರಿಯಾಯಿತಿ ಬೆಲೆಗೆ ಖರೀದಿಸಬಹುದಾಗಿದೆ. ಈ ಫೋನಿನ ಬೆಲೆಯಲ್ಲಿ ಈಗ 1,500 ರೂ. ಗಳ ಕಡಿತ ಆಗಿದ್ದು, ಬೆಲೆ ಇಳಿಕೆಯಿಂದಾಗಿ 4 GB + 128 GB ವೇರಿಯಂಟ್ 15,999 ರೂ. ಪ್ರೈಸ್‌ಟ್ಯಾಗ್‌ನಲ್ಲಿ ಲಭ್ಯ. ಅದೇ ರೀತಿ 6GB + 128GB ವೇರಿಯಂಟ್ ಮಾಡೆಲ್ 16,999 ರೂ. ಗಳ ದರದಲ್ಲಿ ಖರೀದಿಗೆ ದೊರೆಯುತ್ತದೆ.

ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಫೋನ್ 6GB ವರ್ಚುವಲ್ RAM ಸೌಲಭ್ಯವನ್ನು ಪಡೆದಿದ್ದು, ಜೊತೆಗೆ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ವಿಸ್ತರಿಸುವ ಅವಕಾಶವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ + ಇನ್ಫಿನಿಟಿ ಯು ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಪವರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ 6GB ವರ್ಚುವಲ್ RAM ವಿಸ್ತರಣೆಯ ಬೆಂಬಲವೂ ಇದೆ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಒಳಗೊಂಡಿದೆ.

ಕ್ಯಾಮೆರಾ ಸೆನ್ಸಾರ್ ಪವರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಜೊತೆಗೆ ಬ್ಯಾಟರಿ ದಕ್ಷತೆಯನ್ನು ಹೆಚ್ಚಿಸಲು ಹೇಳಲಾದ ಅಡಾಪ್ಟಿವ್ ಪವರ್ ಸೇವಿಂಗ್ ತಂತ್ರಜ್ಞಾನವನ್ನು ಫೋನ್ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS/ A-GPS, NFC, USB Type-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ NFC ಯಲ್ಲಿ ಸ್ಯಾಮ್‌ಸಂಗ್ ಪೇ ಬೆಂಬಲವನ್ನು ಕೂಡ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಮಾಡೆಲ್‌ಗಳ ಆಯ್ಕೆ ಪಡೆದಿದೆ. ಅವುಗಳ ಕ್ರಮವಾಗಿ 4GB RAM + 128GB ಹಾಗೆಯೇ 6GB + 128GB ಮಾಡೆಲ್ ಆಗಿವೆ. 4 GB + 128 GB ವೇರಿಯಂಟ್ 15,999 ರೂ. ಪ್ರೈಸ್‌ಟ್ಯಾಗ್‌ನಲ್ಲಿ ಲಭ್ಯ. ಅದೇ ರೀತಿ 6GB + 128GB ವೇರಿಯಂಟ್ ಮಾಡೆಲ್ 16,999 ರೂ. ಗಳ ದರದಲ್ಲಿ ಖರೀದಿಗೆ ದೊರೆಯುತ್ತದೆ. ಇನ್ನು ಈ ಫೋನ್ ಆಕ್ವಾ ಬ್ಲೂ ಮತ್ತು ಫಾರೆಸ್ಟ್ ಗ್ರೀನ್ ಎಂಬ ಎರಡು ಬಣ್ಣಗಳ ಆಯ್ಕೆಗಳಲ್ಲಿ ಸಿಗುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M13 5G ಫೀಚರ್ಸ್
ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗಷ್ಟೆ ನೂತನವಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M13 5G ಮತ್ತು ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇವುಗಳ ಪೈಕಿ ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 400 ನಿಟ್ಸ್ ಬ್ರೈಟ್‌ನೆಸ್ ಅನ್ನು ಪಡೆದುಕೊಂಡಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದಿದೆ.

ಹಾಗೆಯೇ ಈ ಫೋನ್ ಸ್ಮಾರ್ಟ್‌ಫೋನ್ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಸ್ಯಾಮ್‌ಸಂಗ್ RAM ಪ್ಲಸ್ ಫೀಚರ್ಸ್ ಮೂಲಕ RAM ಅನ್ನು 12GB ವರೆಗೆ ವಿಸ್ತರಿಸಬಹುದು. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಫೀಚರ್ಸ್
ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 480 ನಿಟ್ಸ್ ಬ್ರೈಟ್‌ನೆಸ್ ಅನ್ನು ನೀಡಲಿದೆ. ಇದು ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಎಕ್ಸಿನೋಸ್ 850 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12.0-ಆಧಾರಿತ ಒನ್ UI 4 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications








