Home
ಸುದ್ದಿಜಾಲ

ವಿ ಟೆಲಿಕಾಂನ ಈ ಪ್ರಿಪೇಯ್ಡ್‌ ಯೋಜನೆಯಲ್ಲಿ ಬರೋಬ್ಬರಿ 168GB ಡೇಟಾ ಲಭ್ಯ!

ವಿ ಟೆಲಿಕಾಂ (ವೊಡಾಫೋನ ಐಡಿಯಾ) ಜಿಯೋ ಮತ್ತು ಏರ್‌ಟೆಲ್‌ ಟೆಲಿಕಾಂಗಳಿಗೆ ನೇರ ಫೈಟ್‌ ನೀಡುತ್ತ ಮುನ್ನಡೆದಿದೆ. ಈ ಟೆಲಿಕಾಂಗಳು ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಹಲವು ಆಕರ್ಷಕ ಪ್ರಿಪೇಯ್ಡ್‌ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿವೆ. ಆ ಪೈಕಿ ವಿ ಟೆಲಿಕಾಂನ ಬಹುತೇಕ ಪ್ಲ್ಯಾನ್‌ಗಳು ಅಧಿಕ ಡೇಟಾ ಪ್ರಯೋಜನದ ಜೊತೆಗೆ ಅಧಿಕ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಚಂದಾದಾರರಿಗೆ ಆಕರ್ಷಕ ಎನಿಸಿವೆ.

ವಿ ಟೆಲಿಕಾಂನ ಈ ಪ್ರಿಪೇಯ್ಡ್‌ ಯೋಜನೆಯಲ್ಲಿ ಬರೋಬ್ಬರಿ 168GB ಡೇಟಾ ಲಭ್ಯ!

ಹೌದು, ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ಭಿನ್ನ ಪ್ರಯೋಜನ ಗಳ ಯೋಜನೆಗಳ ಆಯ್ಕೆ ಹೊಂದಿದೆ. ಅವುಗಳಲ್ಲಿ ಕೆಲವು ಯೋಜನೆಗಳು ಆಕರ್ಷಕ ಡೇಟಾ ಪ್ರಯೋಜನ ಪಡೆದಿವೆ. ಇನ್ನು ಕೆಲವು ಯೋಜನೆಗಳು ದೈನಂದಿನ ಡೇಟಾ, ಅಧಿಕ ವ್ಯಾಲಿಡಿಟಿ, ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಪಡೆದಿವೆ. ಹೆಚ್ಚಿನ ದೈನಂದಿನ ಡೇಟಾ ಜೊತೆಗೆ ಉಚಿತ ಓಟಿಟಿ ಚಂದಾದಾರಿಕೆಯ ಸೌಲಭ್ಯ ಪ್ರಯೋಜನ ಬಯಸುವ ಗ್ರಾಹಕರಿಗೆ ಸೂಕ್ತ ಪ್ರೀಪೇಯ್ಡ್‌ ಯೋಜನೆಗಳ ಆಯ್ಕೆ ಸಹ ಹೊಂದಿದೆ. ಈ ನಿಟ್ಟಿನಲ್ಲಿ ವಿ ಟೆಲಿಕಾಂನ 699 ರೂ. ಗಮನ ಸೆಳೆದಿದೆ. ಹಾಗಾದರೇ ವಿ ಟೆಲಿಕಾಂ 699 ರೂ. ಪ್ರೀಪೇಯ್ಡ್‌ ಯೋಜನೆ ಪ್ರಯೋಜನ ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ ಈ ಪ್ರಿಪೇಯ್ಡ್‌ ಯೋಜನೆಯಲ್ಲಿ ಬರೋಬ್ಬರಿ 168GB ಡೇಟಾ ಲಭ್ಯ!

ವಿ ಟೆಲಿಕಾಂ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಪೂರ್ಣ ಅವಧಿಗೆ ಒಟ್ಟು 168 GB ಡೇಟಾ ಲಭ್ಯ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂನ ಈ ಪ್ರಿಪೇಯ್ಡ್‌ ಯೋಜನೆಯಲ್ಲಿ ಬರೋಬ್ಬರಿ 168GB ಡೇಟಾ ಲಭ್ಯ!

ವಿ ಟೆಲಿಕಾಂ 601ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 601ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯ ಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ಡೇಟಾ ಡಿಲೈಟ್ ಪ್ರಯೋಜನ, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ಡೇಟಾ ಡಿಲೈಟ್ ಪ್ರಯೋಜನ, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

More from GizBot

Best Mobiles in India

English summary
This Vi Telecom Prepaid Plan Offers 168 GB Data With Attractive Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+