Home
ಸುದ್ದಿಜಾಲ

ಇಂತಹ ಚಾನ್ಸ್‌ ಮಿಸ್‌ ಮಾಡ್ಕೋಬೇಡಿ!..ಈ ವಿವೋ ಫೋನಿಗೆ ಬೊಂಬಾಟ್‌ ಡಿಸ್ಕೌಂಟ್‌!

ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಗಳು ಒಂದಿಲ್ಲೊಂದು ಡಿಸ್ಕೌಂಟ್‌ ನೀಡುವ ಮೂಲಕ ಗ್ರಾಹಕರನ್ನು ಸೆಳೆಯುತ್ತಲೇ ಮುನ್ನಡೆದಿವೆ. ಆ ಪೈಕಿ ಅಮೆಜಾನ್ ಒಂದು ಕೈ ಮೇಲೆ ಎನ್ನಬಹುದಾಗಿದ್ದು, ಸದ್ಯ ಅಮೆಜಾನ್ ತಾಣವು ವಿವೋ ಸಂಸ್ಥೆಯು ಜನಪ್ರಿಯ 5G ಸ್ಮಾರ್ಟ್‌ಫೋನ್‌ವೊಂದರ ಬೆಲೆಯಲ್ಲಿ ಭರ್ಜರಿ ರಿಯಾಯಿತಿ ತಿಳಿಸಿದ್ದು, ವಿವೋ ಫೋನ್‌ ಪ್ರಿಯರನ್ನು ತನ್ನತ್ತ ಆಕರ್ಷಿಸಿದೆ.

ವಿವೋ Y75 5G

ಹೌದು, ಅಮೆಜಾನ್ ಇ ಕಾಮರ್ಸ್‌ ತಾಣವು ಡೀಲ್‌ ಆಫ್ ದಿ ಡೇ ಆಫರ್ (Deal of the Day offer) ನಲ್ಲಿ ವಿವೋ ಸಂಸ್ಥೆಯ ವಿವೋ Y75 5G (Vivo Y75 5G) ಫೋನ್‌ 4,000ರೂ. ರಿಯಾಯಿತಿಯಲ್ಲಿ ಕಾಣಿಸಿಕೊಂಡಿದೆ. 25,990ರೂ. ಬೆಲೆಯಲ್ಲಿರುವ ವಿವೋ Y75 5G ಫೋನ್ ಬೆಲೆ ಇಳಿಕೆ ಬಳಿಕ 21,990ರೂ. ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ.

ಮೀಡಿಯಾ ಟೆಕ್ ಡೈಮೆನ್ಸಿಟಿ 700

ಇದರೊಂದಿಗೆ ಕೆಲವು ಆಯ್ದ ಬ್ಯಾಂಕ್‌ಗಳಲ್ಲಿ 1000ರೂ. ಇನ್‌ಸ್ಟಂಟ್‌ ಡಿಸ್ಕೌಂಟ್‌ ಸಹ ಲಭ್ಯವಾಗಲಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್‌ ಪಡೆದಿದ್ದು, ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಹಾಗಾದರೇ ವಿವೋ Y75 5G ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ Y75 5G ಸ್ಮಾರ್ಟ್‌ಫೋನ್‌ 1,080 x 2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ+ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಈ ಡಿಸ್‌ಪ್ಲೇ 90.37 % ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 400 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ವಿವೋ Y75 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಫನ್‌ಟಚ್‌ OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ವಿವೋ Y75 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ ಎಫ್‌ನೊಂದಿಗೆ 2 ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ವಿವೋನ ಎಕ್ಸ್‌ಟ್ರೀಮ್ ನೈಟ್ AI ಆಧಾರಿತ ಅಲ್ಗಾರಿದಮ್ ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ Y75 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳು 5G, 4G LTE, ಬ್ಲೂಟೂತ್ 5.1, Wi-Fi, GPS ಮತ್ತು FM ರೇಡಿಯೋ ಬೆಂಬಲವನ್ನು ಒಳಗೊಂಡಿದೆ.

ಮೆಮೊರಿ ಮತ್ತು ಕಲರ ಆಯ್ಕೆ

ಮೆಮೊರಿ ಮತ್ತು ಕಲರ ಆಯ್ಕೆ

ವಿವೋ Y75 5G ಸ್ಮಾರ್ಟ್‌ಫೋನ್‌ ಬೆಲೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್ ಆಯ್ಕೆ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಗ್ಲೋಯಿಂಗ್ ಗ್ಯಾಲಕ್ಸಿ ಮತ್ತು ಸ್ಟಾರ್‌ಲೈಟ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ.

Best Mobiles in India

English summary
This Vivo 5G Mobile is available at Rs 4000 discount in Amazon: Check this offer.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+