Home
ಸುದ್ದಿಜಾಲ

ಸ್ಮಾರ್ಟ್‌ಫೋನ್‌ ಖರೀದಿಸೋರಿಗೆ ಇಲ್ಲಿವೆ ಬೆಸ್ಟ್‌ ಆಯ್ಕೆಗಳು! ಯಾಕೆ ಸೂಕ್ತ ಅನ್ನೊದಕ್ಕೆ ಕಾರಣ ಇಲ್ಲಿದೆ!

ಟೆಕ್‌ ವಲಯದಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳು ಖರೀದಿಗೆ ಲಭ್ಯವಿದೆ. ಇವುಗಳಲ್ಲಿ ಹೆಚ್ಚಿನ ಜನರು ಫ್ಲ್ಯಾಗ್‌ಶಿಪ್‌ ದರ್ಜೆಯ ಟಾಪ್‌ ಎಂಡ್‌ ಸ್ಮಾರ್ಟ್‌ಫೋನ್‌ಗಳನ್ನು ಹೊಂದುವುದಕ್ಕೆ ಬಯಸುತ್ತಾರೆ. ಇದೇ ಕಾರಣಕ್ಕೆ ಜನಪ್ರಿಯ ಬ್ರ್ಯಾಂಡ್‌ಗಳು ಕೂಡ ಹಲವು ಟಾಪ್‌ ಎಂಡ್‌ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಾ ಬಂದಿವೆ.

ಹೌದು, ಟಾಪ್ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ಅತ್ಯುತ್ತಮ ಕ್ಯಾಮೆರಾ ಗುಣಮಟ್ಟ ಹಾಗೂ ವೇಗದ ಚಾರ್ಜಿಂಗ್‌ ಕಾರಣಕ್ಕೆ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಆಯ್ಕೆ ಎನಿಸಿಕೊಂಡಿವೆ. ಜೊತೆಗೆ ಸಿಂಗಲ್‌ ಚಾರ್ಜ್‌ನಲ್ಲಿ ಲಾಂಗ್‌ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ನೀಡಲಿವೆ. ಹಾಗಾದ್ರೆ ಪ್ರಸ್ತುತ ದಿನಗಳಲ್ಲಿ ನೀವು ಭಾರತದಲ್ಲಿ 50,000 ರೂ. ಒಳಗೆ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಮಾರ್ಟ್‌ಫೋನ್‌ ಖರೀದಿಸೋರಿಗೆ ಇಲ್ಲಿವೆ ಬೆಸ್ಟ್‌ ಆಯ್ಕೆಗಳು! ಯಾಕೆ ಸೂಕ್ತ?

ಒನ್‌ಪ್ಲಸ್‌ 11R
ಪ್ರಸ್ತುತ ದಿನಗಳಲ್ಲಿ 50,000 ರೂ ಕ್ಕಿಂತ ಕಡಿಮೆ ಬೆಲೆಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳಲ್ಲಿ ಒನ್‌ಪ್ಲಸ್‌ 11R ಕೂಡ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ ಈಗಾಗಲೇ ಅಮೆಜಾನ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ನಲ್ಲಿ ಕೂಡ ವಿಶೇಷ ಡಿಸ್ಕೌಂಟ್‌ ಕೂಡ ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.74 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ Gen 1 5G SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್‌ ಪಡೆದಿದೆ.

ನಥಿಂಗ್ ಫೋನ್ (2)
ನಥಿಂಗ್ ಫೋನ್ (2) ಇತ್ತೀಚಿಗೆ ಮಾರುಕಟ್ಟೆಗೆ ಎಂಟ್ರಿ ನೀಡಿದ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದೆನಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಕೂಡ ನೀವು 50000ರೂ ಒಳಗೆ ಖರೀದಿಸಬಹುದಾದ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ನಥಿಂಗ್ ಫೋನ್ 2 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LTPO OLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ 4nm ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 4,700mAh ಬ್ಯಾಟರಿಯನ್ನು ಒಳಗೊಂಡಿದೆ. ಇದು 45W PPS ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಗೂಗಲ್ ಪಿಕ್ಸೆಲ್ 7
ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್‌ಫೋನ್‌ ಕೂಡ ನಿಮಗೆ 50,000ರೂ ಒಳಗಿನ ಬೆಲೆಯಲ್ಲಿ ಲಭ್ಯವಾಗುವ ಅತ್ಯುತ್ತಮ ಆಯ್ಕೆಗಳಲ್ಲಿ ಒಂದು. ಈ ಸ್ಮಾರ್ಟ್‌ಫೋನ್‌ 6.32 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 10.8 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಪಡೆದಿದೆ.

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ 4,335mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನಲ್ಲಿ ಟ್ರೀಮ್ ಬ್ಯಾಟರಿ ಸೇವರ್ ಮೋಡ್ ಅನ್ನು ಆಕ್ಟಿವ್‌ ಮಾಡುವ ಮೂಲಕ 72 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ.

Best Mobiles in India

English summary
Top 3 smartphones to buy in India under Rs 50,000: Features Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+