Home
ಸುದ್ದಿಜಾಲ

ಭಾರತದಲ್ಲಿ ಲಭ್ಯವಿರುವ ಐದು ಅತ್ಯುತ್ತಮ ಬಿಗ್‌ ಡಿಸ್‌ಪ್ಲೇ ಸ್ಮಾರ್ಟ್‌ಫೋನ್‌ಗಳು!

ಇದು ಸ್ಮಾರ್ಟ್‌ಫೋನ್‌ ಜಮಾನ. ಸದ್ಯ ಸ್ಮಾರ್ಟ್‌ಫೋನ್‌ಗಳು ಪ್ರತಿಯೊಬ್ಬರ ಅಗತ್ಯ ಡಿವೈಸ್ ಆಗಿದ್ದು, ಬಹುತೇಕ ಕೆಲಸಗಳು ಮೊಬೈಲ್ ಮೂಲಕವೇ ನಡೆಯುತ್ತವೆ. ಅದಕ್ಕಾಗಿ ಜನರು ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವಾಗ ವಿಭಿನ್ನ ಆದ್ಯತೆಗಳನ್ನು ಹೊಂದಿರುತ್ತಾರೆ. ಬ್ಯಾಟರಿ ಲೈಫ್, ಡಿಸ್‌ಪ್ಲೇ ವಿನ್ಯಾಸ, ಕ್ಯಾಮೆರಾ ಸಾಮರ್ಥ್ಯ, ಪ್ರೊಸೆಸರ್‌ ವೇಗ ಎಲ್ಲವನ್ನೂ ಗಮನಿಸಿ ಸ್ಮಾರ್ಟ್‌ಫೋನ್‌ ಖರೀದಿಗೆ ಮುಂದಾಗುತ್ತಾರೆ. ಇದರಲ್ಲಿ ಹೆಚ್ಚಿನ ಜನರು ದೊಡ್ಡ ಗಾತ್ರದ ಡಿಸ್‌ಪ್ಲೇ ಒಳಗೊಂಡ ಸ್ಮಾರ್ಟ್‌ಫೋನ್‌ ಖರೀದಿಸುವುದಕ್ಕೆ ಆಸಕ್ತಿ ತೋರುತ್ತಾರೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಖರೀದಿಸುವಾಗ ಜನರು ತಮ್ಮ ವಿಭಿನ್ನ ಆಸಕ್ತಿಗಳಿಗೆ ಅನುಗುಣವಾಗಿ ಸ್ಮಾರ್ಟ್‌ಫೋನ್‌ ಖರೀದಿಸುತ್ತಾರೆ. ಇನ್ನು ಬಿ್‌ ಸೈಜ್‌ ಡಿಸ್‌ಪ್ಲೇ ಸ್ಮಾರ್ಟ್‌ಫೋನ್‌ಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನಪ್ರಿಯತೆ ಪಡೆದುಕೊಂಡಿವೆ. ಹಾಗೊಂದು ವೇಳೆ ನೀವು ದೊಡ್ಡ ಗಾತ್ರದ ಡಿಸ್‌ಪ್ಲೇ ಸ್ಮಾರ್ಟ್‌ಫೋನ್‌ ಹುಡುಕುತ್ತಿದ್ದರೆ ಮಾರುಕಟ್ಟೆಯಲ್ಲಿ ಹಲವು ಆಯ್ಕೆಗಳು ಲಭ್ಯವಿವೆ. ಹಾಗಾದ್ರೆ ಭಾರತದಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ ದೊಡ್ಡ ಗಾತ್ರದ ಡಿಸ್‌ಪ್ಲೇ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಆಪಲ್ ಐಫೋನ್ 12 ಪ್ರೊ ಮ್ಯಾಕ್ಸ್

ಆಪಲ್ ಐಫೋನ್ 12 ಪ್ರೊ ಮ್ಯಾಕ್ಸ್

ಆಪಲ್ ಐಫೋನ್ 12 ಪ್ರೊ ಮ್ಯಾಕ್ಸ್ ಅತಿದೊಡ್ಡ ಸ್ಕ್ರೀನ್ ಹೊಂದಿರುವ ಫೋನ್‌ ಆಗಿದೆ. ಐಫೋನ್ 12 ಪ್ರೊ ಮ್ಯಾಕ್ಸ್ ಇಂದು ಎಲ್ಲಾ ದೊಡ್ಡ ಸ್ಕ್ರೀನ್ ಫೋನ್‌ಗಳಲ್ಲಿ ಅತ್ಯುತ್ತಮ ಡಿಸ್‌ಪ್ಲೇ ಗುಣಮಟ್ಟವನ್ನು ಹೊಂದಿದೆ. ಇನ್ನು ಈ ಐಫೋನ್‌ 1242 x 2688 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಹೆಕ್ಸಾ ಕೋರ್‌ ಪ್ರೊಸೆಸರ್‌ ಹೊಂದಿದ್ದು, ಐಒಎಸ್‌ ಆಪರೇಟಿಂಗ್‌ ಸಿಸ್ಟಂ ಅನ್ನು ಒಳೊಂಡಿದೆ. ಇನ್ನು ಆಪಲ್‌ ಐಫೋನ್‌ 12 ಪ್ರೊ ಮ್ಯಾಕ್ಸ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಮೊದಲನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಜೊತೆಗೆ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇದರ ಬೆಲೆ 1,19,900 ರೂ, ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 20 ಅಲ್ಟ್ರಾ 5G

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 20 ಅಲ್ಟ್ರಾ 5G

ಗ್ಯಾಲಕ್ಸಿ ನೋಟ್‌ 20 ಅಲ್ಟ್ರಾ 5G ಬೆಂಬಲವನ್ನು ಒಳಗೊಂಡಿರುವ ಸ್ಯಾಮ್‌ಸಂಗ್‌ನ ಬೆಸ್ಟ್ ಸ್ಕ್ರೀನ್ ಸ್ಮಾರ್ಟ್‌ಫೋನ್ ಆಗಿದೆ. ಬಿಗ್‌ ಡಿಸ್‌ಪ್ಲೇ ಹೊಂದಿರುವ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗೆ ಇದು ನಿಮ್ಮ ಅತ್ಯುತ್ತಮ ಆಯ್ಕೆಯಾಗಲಿದೆ. ಸ್ಯಾಮ್‌ಸಂಗ್ ನೋಟ್ ಸರಣಿಯು ಸ್ಟೈಲಸ್ ಆಪ್ಟಿಮೈಸ್ಡ್ ಸಾಫ್ಟ್‌ವೇರ್ ಮತ್ತು ಅಪ್ಲಿಕೇಶನ್‌ಗಳೊಂದಿಗೆ ಬಿಗ್‌ ಡಿಸ್‌ಪ್ಲೇಯನ್ನು ಉತ್ತಮವಾಗಿ ಬಳಸಿಕೊಳ್ಳುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ 1440 x 3200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.9 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 865 ಪ್ರೊಸೆಸರ್‌ ಅನ್ನು ಹೊಂದಿದ್ದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 10MP ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದರ ಬೆಲೆ 1,04,999 ರೂ,ಆಗಿದೆ.

ಒಪ್ಪೊ ಫೈಂಡ್ X

ಒಪ್ಪೊ ಫೈಂಡ್ X

ಒಪ್ಪೋ ಕಂಪೆನಿ ಒಪ್ಪೋ ಫೈಂಡ್‌ X ಸ್ಮಾರ್ಟ್‌ಫೋನ್‌ ಅತ್ಯುತ್ತಮ ಬಿಗ್‌ ಸ್ಕ್ರೀನ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇದು ನೀವು ಫೋಟೋ ತೆಗೆದುಕೊಳ್ಳುವಾಗ, ನಿಮ್ಮ ಮುಖದೊಂದಿಗೆ ಅನ್ಲಾಕ್ ಮಾಡುವಾಗ ಅಥವಾ ಸೆಲ್ಫಿ ತೆಗೆದುಕೊಳ್ಳುವಾಗ ಉತ್ತಮ ಅನುಭವವನ್ನು ನೀಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಫುಲ್‌ ಹೆಚ್‌ಡಿ + ರೆಸಲ್ಯೂಶನ್ ಹೊಂದಿರುವ 6.42-ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 845 ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 10 ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್‌ ಡ್ಯುಯೆಲ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು 16 ಮೆಗಾಪಿಕ್ಸೆಲ್‌ ವೈಡ್‌ ಆಂಗಲ್‌ ಕ್ಯಾಮೆರಾ ಹಾಗೂ 20 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 25 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದರ ಬೆಲೆ 53,999 ರೂ ಆಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ನೋಟ್ 8

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ನೋಟ್ 8

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 8 ಸ್ಮಾರ್ಟ್‌ಫೋನ್‌ ಕೂಡ ಬಿಗ್‌ ಸ್ಕ್ರೀನ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ ಎಡ್ಜ್ ಟು ಎಡ್ಜ್ ಡಿಸ್‌ಪ್ಲೇ ಹೊಂದಿರುವ 6.3-ಇಂಚಿನ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇಂದು ಲಭ್ಯವಿರುವ ಅತ್ಯುತ್ತಮ ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಪ್ರೈಮರಿ ಕ್ಯಾಮೆರಾ ಹೊಂದಿದೆ. ಜೊತೆಗೆ ಆಕ್ಟಾ ಕೋರ್‌ ಎಕ್ಸಿನೋಸ್‌ 8895 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರ ಬೆಲೆ 44,999 ರೂ ಆಗಿದೆ.

ಶಿಯೋಮಿ ಮಿ ಮ್ಯಾಕ್ಸ್ 2

ಶಿಯೋಮಿ ಮಿ ಮ್ಯಾಕ್ಸ್ 2

ಶಿಯೋಮಿ ಮಿ ಮ್ಯಾಕ್ಸ್‌ 2 ಸ್ಮಾರ್ಟ್‌ಫೋನ್‌ 1080x1920 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.44 ಇಂಚಿನ ಬಿಗ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್‌ ಆಕ್ಟಾ-ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 625 ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 5330mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ 12,990 ರೂ, ಆಗಿದೆ.

Best Mobiles in India

English summary
best big screen smartphones that you can buy in India.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+