ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್ ಬಯಸೋರಿಗೆ ಈ ಸ್ಮಾರ್ಟ್‌ಫೋನ್‌ಗಳು ಬೆಸ್ಟ್!
ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವಾಗ ಹಲವು ವಿಚಾರಗಳು ಪ್ರಮುಖವಾಗುತ್ತದೆ. ಕೆಲವು ಸ್ಮಾರ್ಟ್‌ಫೋನ್‌ನ ಡಿಸ್‌ಪ್ಲೇ ವಿನ್ಯಾಸಕ್ಕೆ ಮನಸೋತರೆ, ಕೆಲವರು ಫೋನ್‌ನ ಕಾರ್ಯಕ್ಷಮತೆ ಹಾಗೂ ಪ್ರೊಸೆಸರ್ ಆಧಾರದ ಮೇಲೆ ಆಯ್ಕೆ ಮಾಡುತ್ತಾರೆ. ಇನ್ನು ಕೆಲವರಿಗೆ ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್ ಹಾಗೂ ಕ್ಯಾಮೆರಾ ಕ್ಷಮತೆಗೆ ಮನಸೋಲುತ್ತಾರೆ. ಇದೇ ಕಾರಣಕ್ಕೆ ಹಲವು ಬ್ರ್ಯಾಂಡ್‌ಗಳು ಕ್ಯಾಮೆರಾ ಕೇಂದ್ರಿತ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿವೆ. ಇವುಗಳಲ್ಲಿ ವಿವೋ, ಸ್ಯಾಮ್‌ಸಂಗ್ ಕಂಪೆನಿಗಳು ಮುಂಚೂಣಿಯಲ್ಲಿ ಕಾಣಿಸಿಕೊಂಡಿವೆ.

ಹೌದು, ಸ್ಮಾರ್ಟ್‌ಫೋನ್‌ಗಳ ಕ್ಯಾಮೆರಾ ಸಾಮರ್ಥ್ಯ ಸಾಕಷ್ಟು ಬದಲಾಗಿದೆ. ವೃತ್ತಿಪರ ಕ್ಯಾಮೆರಾ ಗುಣಮಟ್ಟ ನೀಡುವ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ನಾವಿಂದು ಕಾಣಬಹುದಾಗಿದೆ. ಹಲವು ಸ್ಮಾರ್ಟ್‌ಫೋನ್‌ಗಳು ಪ್ರಭಾವಶಾಲಿ ಜೂಮ್ ಸಾಮರ್ಥ್ಯದಗಳನ್ನು ನೀಡುತ್ತವೆ. ಅತ್ಯುತ್ತಮ ಕ್ಯಾಮೆರಾ ಜೂಮ್ ಸಾಮರ್ಥ್ಯ ಹೊಂದಿರುವ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಾಕಷ್ಟು ಸೌಂಡ್ ಮಾಡುತ್ತಿವೆ. ಹಾಗಾದ್ರೆ ಮಾರುಕಟ್ಟೆಯಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ ಕ್ಯಾಮೆರಾ ಜೂಮ್ ಸಾಮರ್ಥ್ಯ ಹೊಂದಿರುವ ಸ್ಮಾರ್ಟ್‌ಫೋನ್ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಅತ್ಯುತ್ತಕ ಕ್ಯಾಮೆರಾ ಕೇಂದ್ರಿತ ಫೀಚರ್ಸ್ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, 85 ಡಿಗ್ರಿ ಫೀಲ್ಡ್ ಆಫ್ ವ್ಯೂ ಅನ್ನು ನೀಡಲಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್, ಮೂರನೇ ಕ್ಯಾಮೆರಾ 10 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಹಾಗೂ ನಾಲ್ಕನೇ ಕ್ಯಾಮೆರಾ 10 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರೊಂದಿಗೆ 12 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್ ನೀವು ಖರೀದಿಸಬಹುದಾದ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ಆಯ್ಕೆಗಳಲ್ಲಿ ಒಂದು. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಮತ್ತು ಮೂರನೇ ಕ್ಯಾಮೆರಾ 10MP ಟೆಲಿಫೋಟೋ ಲೆನ್ಸ್ ಹಾಗೂ ನಾಲ್ಕನೇ ಕ್ಯಾಮೆರಾ 10MP ಸೆನ್ಸಾರ್ ಹೊಂದಿದೆ.

ವಿವೋ X80 ಪ್ರೊ
ವಿವೋ ಕಂಪೆನಿ ತನ್ನ ಕ್ಯಾಮೆರಾ ಕೇಂದ್ರಿತ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಇನ್ನು ವಿವೋ X80 ಪ್ರೊ ಸ್ಮಾರ್ಟ್‌ಫೋನ್ ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೋಸೆಲ್ GNV ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೋನಿ IMX598 ಸೆನ್ಸಾರ್, ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೋನಿ IMX663 ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 8 ಮೆಗಾ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.
ಐಫೋನ್ 14 ಪ್ರೊ ಮ್ಯಾಕ್ಸ್
ಐಫೋನ್ ಕ್ಯಾಮೆರಾ ಫೀಚರ್ಸ್ ತನ್ನ ಗುಣಮಟ್ಟದ ಕಾರಣಕ್ಕೆ ಹೆಚ್ಚನ ಪ್ರಸಿದ್ಧಿ ಪಡೆದಿದೆ. ಅದರಲ್ಲೂ ಐಫೋನ್ 14 ಪ್ರೊ ಮ್ಯಾಕ್ಸ್ ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್‌ನಿಂದಾಗಿ ಗಮನಸೆಳೆದಿದೆ. ಇದು ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 12MP 2x ಟೆಲಿಫೋಟೋ ಮತ್ತು ನಾಲ್ಕನೇ ಕ್ಯಾಮೆರಾ 12MP 3x ಟೆಲಿಫೋಟೋ ಲೆನ್ಸ್ ಅನ್ನು ಒಳಗೊಂಡಿದೆ.

ಒನ್‌ಪ್ಲಸ್ 10 ಪ್ರೊ
ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX789 ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX615 ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.


Click it and Unblock the Notifications








