ಇಂದಿನಿಂದ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಶುರು; ಈ ಫೋನ್‌ಗಳಿಗೆ ಭಾರೀ ಡಿಸ್ಕೌಂಟ್!
ಶಾಪಿಂಗ್ ಪ್ರಿಯರ ಪ್ರಮುಖ ಆನ್‌ಲೈನ ಅಡ್ಡಾ ಆಗಿರುವ ಅಮೆಜಾನ್ ಬಹುನಿರೀಕ್ಷಿತ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ಇಂದಿನಿಂದ ಪ್ರಾರಂಭವಾಗಿದೆ. ಐದು ದಿನಗಳ ಕಾಲ ನಡೆಯುವ ಈ ವಿಶೇಷ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್, ಸ್ಮಾರ್ಟ್ ವಾಚ್, ಸ್ಮಾರ್ಟ್ ಟಿವಿ ಸೇರಿದಂತೆ ಹಲವು ಗ್ಯಾಟ್ಜೆಟ್ಸ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಾಗಲಿದೆ. ಮುಖ್ಯವಾಗಿ ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ಕೆಲವು ಸ್ಮಾರ್ಟ್‌ಫೋನ್‌ಗಳು ಬಿಗ್ ಡಿಸ್ಕೌಂಟ್‌ನಿಂದ ಗ್ರಾಹಕರ ಗಮನ ಸೆಳೆದಿವೆ.

ಹೌದು, ಅಮೆಜಾನ್ ತಾಣದಲ್ಲಿ ಆಯೋಜಿಸಿರುವ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ (ಆಗಷ್ಟ್ 5) ಇಂದಿನಿಂದ ಶುರುವಾಗಿದೆ. ಇನ್ನು ಈ ಸೇಲ್ ಇದೇ ಆಗಷ್ಟ 9ರ ವರೆಗೂ ಚಾಲ್ತಿ ಇರಲಿದೆ. ಈ ಸೇಲ್‌ನಲ್ಲಿ ಹೊಸ ಫೋನ್‌ಗಳಿಗೆ ಹಾಗೂ ಜನಪ್ರಿಯ ಫೋನ್‌ಗಳಿಗೆ ಬೆಸ್ಟ್ ಕೊಡುಗೆ ನೀಡಲಾಗಿದೆ. ಹಾಗೆಯೇ ಡಿಸ್ಕೌಂಟ್‌ನಲ್ಲಿ ಅತ್ಯುತ್ತಮ ಕ್ಯಾಮೆರಾ ಸ್ಮಾರ್ಟ್‌ಫೋನ್ ಖರೀದಿಸಲು ಬಯಸುವ ಗ್ರಾಹಕರಿಗೆ ಇದೊಂದು ಬೊಂಬಾಟ್ ಅವಕಾಶ ಆಗಿದೆ. ಈ ಸೇಲ್‌ನಲ್ಲಿ ಮುಖ್ಯವಾಗಿ ಅತ್ಯುತ್ತಮ ಕ್ಯಾಮೆರಾ ಸೆನ್ಸಾರ್‌ನ ಸ್ಮಾರ್ಟ್‌ಫೋನ್‌ಗಳಿಗೂ ಆಕರ್ಷಕ ರಿಯಾಯಿತಿ ಲಭ್ಯ ಮಾಡಲಾಗಿದೆ. ಹಾಗಾದರೇ ಅಮೆಜಾನ್ ಈ ಸೇಲ್ ನಲ್ಲಿ ಆಫರ್‌ನಲ್ಲಿ ಲಭ್ಯವಾಗುವ ಬೆಸ್ಟ್ ಕ್ಯಾಮೆರಾ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್
ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಲ್ಲಿ ಶಿಯೋಮಿ ಕಂಪನಿಯ ಇತ್ತೀಚಿಗಿನ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಫೋನ್ 6GB ಮತ್ತು 128GB ಸ್ಟೋರೇಜ್ ವೇರಿಯಂಟ್ 19,999ರೂ. ರಿಯಾಯಿತಿ ಬೆಲೆಯಲ್ಲಿ ಲಭ್ಯ ಇದೆ. ಇನ್ನು ಈ ಫೋನ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಪಡೆದಿದ್ದು, 120Hz ರೀಫ್ರೇಶ್ ರೇಟ್ ಅನ್ನು ಪಡೆದಿದೆ. ಹಾಗೆಯೇ ಸ್ನ್ಯಾಪ್‌ಡ್ರಾಗನ್ 732 ಪ್ರೊಸೆಸರ್ ಬಲವನ್ನು ಪಡೆದಿದ್ದು, ಜೊತೆಗೆ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಪಡೆದಿದೆ.

ರಿಯಲ್‌ಮಿ 8 ಪ್ರೊ
ಜನಪ್ರಿಯ ರಿಯಲ್‌ಮಿ 8 ಪ್ರೊ ಸ್ಮಾರ್ಟ್‌ಫೋನ್ ಸಹ ಅಮೆಜಾನ್ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದಿದೆ. ಇನ್ನು ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಅವುಗಳು ಕ್ರಮವಾಗಿ 108MP + 8MP + 2MP + 2MP ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಸೆಲ್ಫಿ ಕ್ಯಾಮೆರಾವು 16MP ಸೆನ್ಸಾರ್ ಬಲದಲ್ಲಿದೆ. ಇದರೊಂದಿಗೆ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 720 ಜಿ ಪ್ರೊಸೆಸರ್ ಹಾಗೂ 4500mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ.
ರೆಡ್ಮಿ ಮಿ 10i 5G
ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಲ್ಲಿ ಶಿಯೋಮಿ ಕಂಪನಿಯ ಇತ್ತೀಚಿಗಿನ ರೆಡ್ಮಿ ಮಿ 10i 5G ಫೋನ್ 6GB ಮತ್ತು 128GB ಸ್ಟೋರೇಜ್ ವೇರಿಯಂಟ್ 21,999ರೂ. ರಿಯಾಯಿತಿ ಬೆಲೆಯಲ್ಲಿ ಲಭ್ಯ ಇದೆ. ಇನ್ನು ಈ ಫೋನ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಪಡೆದಿದ್ದು, 120Hz ರೀಫ್ರೇಶ್ ರೇಟ್ ಅನ್ನು ಪಡೆದಿದೆ. ಹಾಗೆಯೇ ಸ್ನ್ಯಾಪ್‌ಡ್ರಾಗನ್ 750G ಪ್ರೊಸೆಸರ್ ಬಲವನ್ನು ಪಡೆದಿದ್ದು, ಜೊತೆಗೆ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M51
ಅಧಿಕ ಬ್ಯಾಟರಿ ಬ್ಯಾಕ್‌ಅಪ್‌ನಿಂದ ಗಮನ ಸೆಳೆದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ M51 ಫೋನ್ ಸಹ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಲ್ಲಿ 6GB ಮತ್ತು 128GB ಸ್ಟೋರೇಜ್ ವೇರಿಯಂಟ್ 21,999ರೂ.ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಈ ಫೋನ್ 7000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇನ್ನು ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G
ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಫೋನ್ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಈ ಫೋನ್ 6GB RAM ಮತ್ತು 128GB ಸ್ಟೋರೇಜ್‌ನ ವೇರಿಯಂಟ್ ಬೆಲೆಯು 19,999ರೂ. ಆಗಿದೆ. ಇನ್ನು ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ.


Click it and Unblock the Notifications








