ಸ್ಯಾಮ್‌ಸಂಗ್ ಗ್ಯಾಲಕ್ಸಿ A ಸರಣಿಯ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಲಿಸ್ಟ್ ಇಲ್ಲಿದೆ!
ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಜನಪ್ರಿಯ ಸ್ಥಾನ ಪಡೆದಿದ್ದು, ಬಜೆಟ್ ರೇಂಜ್‌ನಿಂದ ಹೈ ಎಂಡ್ ವರೆಗೂ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಲಿಸ್ಟ್ ಹೊಂದಿದೆ. ಅವುಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M ಸರಣಿಯ ಫೋನ್‌ಗಳಂತೆ, ಗ್ಯಾಲಕ್ಸಿ A ಸರಣಿಯ ಸ್ಮಾರ್ಟ್‌ಫೋನ್‌ಗಳೂ ಸಹ ಹೆಚ್ಚು ಗಮನ ಸೆಳೆದಿವೆ. A ಸರಣಿಯ ಫೋನ್‌ಗಳ ಕ್ಯಾಮೆರಾ ಪ್ಲಸ್ ಪಾಯಿಂಟ್ ಅಂಶಗಳಲ್ಲಿ ಒಂದಾಗಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A ಸರಣಿಯಲ್ಲಿನ ಕೆಲವು ಸ್ಮಾರ್ಟ್‌ಫೋನ್‌ಗಳು ಆಕರ್ಷಕ ಎನಿಸಿವೆ. ಅವುಗಳಲ್ಲಿ ಇತ್ತೀಚಿನ ಬಹುತೇಕ ಫೋನ್‌ಗಳು ಪ್ರೊಸೆಸರ್ ಆಯ್ಕೆಯ ಜೊತೆಗೆ ಡ್ಯುಯಲ್ ಹಾಗೂ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಪಡೆದಿವೆ. ಅಲ್ಲದೇ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ವಿಭಾಗದಲೂ ಗ್ರಾಹಕರಿಗೆ ಆಕರ್ಷಕ ಎನಿಸುವಂತಿವೆ. ಹಾಗಾದರೇ ಸದ್ಯ ಖರೀದಿಗೆ ಅತ್ಯುತ್ತಮ ಎನಿಸಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ A ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್ ಇತ್ತೀಚಿಗಷ್ಟೆ ಬಿಡುಗಡೆ ಆಗಿದ್ದು, ಇದು 1080 × 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಪ್ಲಸ್ ಸೂಪರ್ ಅಮೊಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 1080 6nm ಪ್ರೊಸೆಸರ್ ಅನ್ನು ಒಳಗೊಂಡಿದ್ದು, 8GB + 128 GB ಮತ್ತು 8GB + 256 GB ಸ್ಟೋರೇಜ್ ಆಯ್ಕೆ ಪಡೆದಿದೆ. ಈ ಫೋನ್ ತ್ರಿವಳಿ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸಲ್ ಸೆನ್ಸಾರ್‌ನಲ್ಲಿದೆ. 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ HD+ ಇನ್ಫಿನಿಟಿ-O ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256 GB ಇಂಟರ್ ಸ್ಟೋರೇಜ್ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A33 5G ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ HD+ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಎಕ್ಸಿನೋಸ್ 1280 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಫೋನ್ 25W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5,000 mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್ 120 Hz ರಿಫ್ರೆಶ್ ರೇಟ್ ಹೊಂದಿರುವ 6.5 ಇಂಚಿನ ಫುಲ್ ಹೆಚ್‌ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ O ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್ Exynos 1280 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸಲ್ ರಚನೆಯನ್ನು ಪಡೆದಿದೆ. ಇದರೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ.


Click it and Unblock the Notifications








