Just In
- 35 min ago
ಟೆಲಿಗ್ರಾಮ್ನಲ್ಲಿ ವಾಟ್ಸಾಪ್ ಅನ್ನೇ ಮೀರಿಸುವ ಫೀಚರ್ಸ್!; ಬಳಕೆದಾರರಿಗೆ ಸಾಕಷ್ಟು ಅನುಕೂಲ
- 1 hr ago
PVRನಿಂದ ಭರ್ಜರಿ ಸಿಹಿಸುದ್ದಿ; ಸಿನಿಮಾ ಪ್ರಿಯರ ಕಣ್ಣಿಗೆ ಹಬ್ಬದ ಸಂಭ್ರಮ!
- 1 hr ago
ಚೀನಾಗೆ ಬಿಗ್ ಶಾಕ್ ನೀಡಿದ ಭಾರತ! 138 ಬೆಟ್ಟಿಂಗ್ ಆ್ಯಪ್ಗಳಿಗೆ ಗೇಟ್ಪಾಸ್!
- 2 hrs ago
ಹೆಚ್ಚಿನ ಡೇಟಾ ಬೇಕು ಅಂದ್ರೆ BSNLನ ಈ ಪ್ಲ್ಯಾನ್ಗಳು ಬೆಸ್ಟ್!
Don't Miss
- News
Bengaluru Airport: ವಿಮಾನ ನಿಲ್ದಾಣ ಸ್ಪೋಟಿಸುವುದಾಗಿ ಯುವತಿಯಿಂದ ಬೆದರಿಕೆ
- Movies
'ನಟ ಭಯಂಕರ' ಮೊದಲ 3 ದಿನಗಳಲ್ಲಿ ಮಾಡಿದ ನಿಜವಾದ ಕಲೆಕ್ಷನ್ ಎಷ್ಟು?
- Finance
ಅದಾನಿ ಡಾಲರ್ ಬಾಂಡ್ ವಿರುದ್ಧ ಸಾಲ ನೀಡಲು ಸ್ಟಾಡರ್ಡ್ ಚಾರ್ಟೆಡ್ ನಕಾರ: ವರದಿ
- Sports
ಬಾರ್ಡರ್-ಗವಾಸ್ಕರ್ ಟ್ರೋಫಿ: ಭಾರತವನ್ನು ಮಣಿಸಲು ಆಸಿಸ್ ತಂಡಕ್ಕೆ ಮಿಚೆಲ್ ಜಾನ್ಸನ್ ಸಲಹೆ
- Automobiles
ಸೆಲ್ಟೋಸ್ನ ಗೇರ್ಬಾಕ್ಸ್ನಲ್ಲಿ ದೋಷ ಕಂಡು ಬಂದಾಗ ಉಚಿತವಾಗಿ ಬದಲಾಯಿಸಿ ಕೊಟ್ಟ ಕಿಯಾ
- Lifestyle
ಮಕ್ಕಳನ್ನು 'ಅಮ್ಮ' ದಡಾರದಿಂದ ರಕ್ಷಿಸಲು ಇದೇ ತಿಂಗಳು ತಪ್ಪದೆ ಕೊಡಿಸಿ MR ಲಸಿಕೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ರಿಯಲ್‌ಮಿ 10 ಪ್ರೊ ಬದಲಿಗೆ ನೀವು ಈ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದು!
ಕೆಲ ದಿನಗಳನ ಹಿಂದೆಯಷ್ಟೇ ಭಾರತದಲ್ಲಿ ಬಿಡುಗಡೆಯಾಗಿರುವ ರಿಯಲ್‌ಮಿ 10 ಪ್ರೊ ಸ್ಮಾರ್ಟ್‌ಫೋನ್ ಸಾಕಷ್ಟು ಸಂಚಲಚನ ಸೃಷ್ಟಿಸಿದೆ. ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ಫೀಚರ್ಸ್‌ಗಳನ್ನು ನೀಡುವ ಮೂಲಕ ಎಲ್ಲರ ಗಮನಸೆಳೆದಿದೆ. ಆಕರ್ಷಕ ಕ್ಯಾಮೆರಾ, ಅತ್ಯುತ್ತಮ ಪ್ರೊಸೆಸರ್ ಕಾರ್ಯದಕ್ಷತೆಯಿಂದ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಆಯ್ಕೆ ಎನಿಸಿಕೊಳ್ಳುತ್ತಿದೆ. ಇದರ ನಡುವೆ ಇದಕ್ಕೆ ಟಕ್ಕರ್ ನೀಡುವ ಅನೇಕ ಸ್ಮಾರ್ಟ್‌ಫೋನ್‌ಗಳು ಕೂಡ ಮಾರುಕಟ್ಟೆಯಲ್ಲಿ ಸೌಂಡ್ ಮಾಡ್ತಿವೆ.

ಹೌದು, ರಿಯಲ್‌ಮಿ 10 ಪ್ರೊ ಸ್ಮಾರ್ಟ್‌ಫೋನ್ ಖರೀದಿಸುವ ಬೆಲೆಯಲ್ಲಿಯೇ ಅದಕ್ಕೆ ಪರ್ಯಾಯವಾಗಿ ಬೇರೆ ಸ್ಮಾರ್ಟ್‌ಫೋನ್‌ಗಳ ಆಯ್ಕೆ ಕೂಡ ಲಭ್ಯವಿದೆ. ರಿಯಲ್‌ಮಿ 10ಪ್ರೊ ಮಾದರಿಯಲ್ಲಿ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿರುವ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಕಾಣಬಹುದಾಗಿದೆ. ಹಾಗಾದ್ರೆ ಮಾರುಕಟ್ಟೆಯಲ್ಲಿ ರಿಯಲ್‌ಮಿ 10ಪ್ರೊ ಸ್ಮಾರ್ಟ್‌ಫೋನ್‌ಗೆ ಪರ್ಯಾಯವಾಗಿ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೊಟೊ G82 5G
ಮೊಟೊರೊಲಾ ಕಂಪೆನಿಯ ಮೊಟೊ G82 5G ಸ್ಮಾರ್ಟ್‌ಫೋನ್ ಕೂಡ ಅತ್ಯುತ್ತಮ ಪರ್ಯಾಯ ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸೆನ್ಸಾರ್ ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ.

ಒನ್‌ಪ್ಲಸ್ ನಾರ್ಡ್ CE 2 ಲೈಟ್
ರಿಯಲ್‌ಮಿ 10ಪ್ರೊ ಗೆ ಅತ್ಯುತ್ತಮ ಪರ್ಯಾಯ ಫೋನ್ ಎಂದರೆ ಒನ್‌ಪ್ಲಸ್ ನಾರ್ಡ್ CE 2 ಲೈಟ್ ಆಗಿದೆ. ಈ ಸ್ಮಾರ್ಟ್‌ಫೋನ್ ಕೂಡ ನಿಮಗೆ 18,999ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 6.59 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 685SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, 64MP ಸೆನ್ಸಾರ್ ಸಾಮರ್ಥ್ಯದ ಮುಖ್ಯ ಕ್ಯಾಮೆರಾ ಹೊಂದಿದೆ.

ರೆಡ್ಮಿ ನೋಟ್ 11 ಪ್ರೊ+
ರಿಯಲ್‌ಮಿ 10ಪ್ರೊ ಸ್ಮಾರ್ಟ್‌ಫೋನ್‌ಗೆ ಪರ್ಯಾಯ ಎನಿಸುವ ಸ್ಮಾರ್ಟ್‌ಫೋನ್‌ಗಳಲ್ಲಿ ರೆಡ್ಮಿ ನೋಟ್ 11 ಪ್ರೊ+ ಸ್ಮಾರ್ಟ್‌ಫೋನ್ ಕೂಡ ಒಂದಾಗಿದೆ. ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮರಾ 108MP ಸೆನ್ಸಾರ್ ಪಡೆದುಕೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಪೊಕೊ X4 ಪ್ರೊ 5G
ಪೊಕೊ X4 ಪ್ರೊ 5G ಸ್ಮಾರ್ಟ್‌ಫೋನ್ 6.67-ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೊನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 67W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470